HomeIndiaಬೈಕ್ ಟ್ಯಾಕ್ಸಿಗೆ ಅನುಮತಿ ನೀಡಿ: ರಾಜ್ಯ ಸರ್ಕಾರಗಳಿಗೆ ನಿತಿನ್ ಗಡ್ಕರಿ ಮನವಿ

ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಿ: ರಾಜ್ಯ ಸರ್ಕಾರಗಳಿಗೆ ನಿತಿನ್ ಗಡ್ಕರಿ ಮನವಿ

ನವದೆಹಲಿ: ಬೈಕ್ ಟ್ಯಾಕ್ಸಿಗೆ ಅನುಮತಿ ನೀಡುವಂತೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ರಾಜ್ಯ ಸರ್ಕಾರಗಳಿಗೆ ಮನವಿ ಮಾಡಿದ್ದಾರೆ.

ಖಾಸಗಿ ದ್ವಿಚಕ್ರವಾಹನ ಮಾಲೀಕರಿಗೆ ಬೈಕ್ ಟ್ಯಾಕ್ಸಿ ಸೇವೆ ನಡೆಸಲು ಅವಕಾಶ ನೀಡುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಕೋರಿದ್ದಾರೆ.

ಕೆಲವು ರಾಜ್ಯಗಳಲ್ಲಿ ಈಗಾಗಲೇ ಖಾಸಗಿ ದ್ವಿಚಕ್ರ ವಾಹನಗಳ ಮೂಲಕ ಪ್ರಯಾಣಿಕರ ಸಾಗಣೆಗೆ ಅನುಮತಿ ನೀಡಲಾಗಿದೆ. ಆದರೆ, ಇನ್ನೂ ಕೆಲವು ರಾಜ್ಯಗಳು ಬೈಕ್ ಟ್ಯಾಕ್ಸಿ ಸೇವೆಗೆ ಅವಕಾಶ ನೀಡಿಲ್ಲ. ಸಾರಿಗೆಯೂ ರಾಜ್ಯಗಳ ವ್ಯಾಪ್ತಿಯಲ್ಲಿರುವ ವಿಷಯವಾಗಿರುವುದರಿಂದ ಈ ಸೇವೆ ಜಾರಿಗೊಳಿಸುವ ಬಗ್ಗೆ ರಾಜ್ಯ ಸರ್ಕಾರಗಳೇ ನಿರ್ಧಾರ ಕೈಗೊಳ್ಳಬೇಕಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೈಕ್ ಟ್ಯಾಕ್ಸಿ ಸೇವೆಗೆ ಉತ್ತೇಜನ ನೀಡುವುದರಿಂದ ವಿಶೇಷವಾಗಿ ಗ್ರಾಮೀಣ ಭಾಗಗಳಲ್ಲಿ ಹೊಸ ಆದಾಯ ಮೂಲಗಳು ಸೃಷ್ಟಿಯಾಗಲಿವೆ. ಸುಮಾರು ಎಂಟು ಕೋಟಿ ಜನರಿಗೆ ಉದ್ಯೋಗಾವಕಾಶ ಕಲ್ಪಿಸಬಹುದು ಎಂದು ಹೇಳಿದ್ದಾರೆ.

ಈ ನಡುವೆ ಸಂಚಾರ ನಿಯಮ ಉಲ್ಲಂಘಿಸುವ ಚಾಲಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ಮೋಟಾರ್ ವಾಹನ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದೆ ಎಂದು ಸಚಿವ ನಿತಿನ್ ಗಡ್ಕರಿ ಮಾಹಿತಿ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular