HomeLatest NewsBREAKING NEWS: ಚುನಾವಣಾ ಪ್ರಚಾರ ಸಭೆಯಲ್ಲಿ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ

BREAKING NEWS: ಚುನಾವಣಾ ಪ್ರಚಾರ ಸಭೆಯಲ್ಲಿ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ

ಯವತ್ಮಾಲ್: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ನಾಯಕರು ಕೊನೇ ಹಂತದ ಅಬ್ಬರ ಪ್ರಚಾರ ನಡೆಸುತ್ತಿದ್ದಾರೆ. ಈ ವೇಳೆ ಚುನಾವಣಾ ರ್ಯಾಲಿಯಲ್ಲಿ ಪಾಲ್ಗೊಂಡಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ ಕುಸಿದು ಬಿದ್ದ ಘಟನೆ ನಡೆದಿದೆ.

ಮಹಾರಾಷ್ಟ್ರದ ಯವತ್ಮಾಲ್ ನಲ್ಲಿ ಎನ್ ಡಿಎ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ನಡೆಸುತ್ತಿದ್ದ ವೇಳೆ ತೀವ್ರ ಅಸ್ವಸ್ಥಗೊಂಡ ಸಚಿವ ನಿತಿನ್ ಗಡ್ಕರಿ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರ ಅಂಗರಕ್ಷಕರು ಹಾಗೂ ಸ್ಥಳದಲ್ಲಿದ್ದ ನಾಯಕರು ಅವರನ್ನು ಎತ್ತಿ ಕುರ್ಚಿ ಮೇಲೆ ಕೂರಿಸಿದ್ದಾರೆ. ಇದೇ ವೇಳೆ ನಿತಿನ್ ಗಡ್ಕರಿ ಪ್ರಜ್ಞೆ ತಪ್ಪಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಿಕಿತ್ಸೆ ಬಳಿಕ ಸದ್ಯ ನಿತಿನ್ ಗಡ್ಕರಿ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ನಿತಿನ್ ಗಡ್ಕರಿ ಅವರು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ನಾಯಕ ರಾಜಶ್ರೀ ಪಾಟೀಲ್ ಪರ ಪ್ರಚಾರ ನಡೆಸುತ್ತಿದ್ದರು. ರಾಜಶ್ರೀ ಪಾಟೀಲ್ ಯವತ್ಮಾಲ್ ವಾಶಿಮ್ ಲ್ಲೋಕಸಭಾ ಕ್ಷೇತ್ರದಿಂದ ಮಹಾಯುತಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular