ಮಂಗಳೂರು ಮಹಿಳೆಗೆ ಸೇರಿದ ಮೊಬೈಲ್ ನಿಂದ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ

ನಾಗಪುರ್: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಮಂಗಳವಾರ ಎರಡು ಬೆದರಿಕೆ ಕರೆಗಳು ಬಂದಿದ್ದು, ಕರೆ ಮಾಡಿದ ವ್ಯಕ್ತಿ ತನ್ನ ಹೆಸರನ್ನು ಜಯೇಶ್ ಪೂಜಾರಿ ಎಂದು ಗುರುತಿಸಿಕೊಂಡಿದ್ದಾನೆ.

ನಾಗ್ಪುರದ ಖಮ್ಲಾ ಪ್ರದೇಶದಲ್ಲಿರುವ ಸಚಿವರ ಸಾರ್ವಜನಿಕ ಸಂಪರ್ಕ ಕಚೇರಿಯ ಸ್ಥಿರ ದೂರವಾಣಿ ಸಂಖ್ಯೆಗೆ ಕರೆ ಮಾಡಲಾಗಿದೆ. ಕರೆ ಮಾಡಿದ ವ್ಯಕ್ತಿ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದಾನೆ. ಇದೇ ಸಂದರ್ಭದಲ್ಲಿ ಗಡ್ಕರಿ ಅವರ ನಿವಾಸಕ್ಕೆ ಕರೆ ಮಾಡಲಾಗಿದ್ದು, ದಾವೂದ್ ಗ್ಯಾಂಗ್‌ ನ ಸದಸ್ಯನೆಂದು ಹೇಳಿಕೊಳ್ಳುವ ವ್ಯಕ್ತಿಯೊಬ್ಬ 100 ಕೋಟಿ ರೂ. ಕೇಳಿದ್ದ.

ನಿತಿನ್ ಗಡ್ಕರಿ ಅವರ ಕಚೇರಿಗೆ ಮೂರು ಬೆದರಿಕೆ ಕರೆಗಳು ಬಂದವು. ಎಲ್ಲವೂ ಜಯೇಶ್ ಪೂಜಾರಿ ಎಂದು ಗುರುತಿಸಿಕೊಂಡ ವ್ಯಕ್ತಿಯಿಂದ ಬಂದವು. ಈ ಸಂಖ್ಯೆ ಮಂಗಳೂರಿನಲ್ಲಿರುವ ಮಹಿಳೆಯದ್ದು ಎಂದು ತಿಳಿದುಬಂದಿದೆ. ನಾವು ಅವಳೊಂದಿಗೆ ಸಂವಹನ ನಡೆಸಿದ್ದೇವೆ, ಅವಳು ಈವೆಂಟ್ ಮ್ಯಾನೇಜ್‌ಮೆಂಟ್‌ನಲ್ಲಿ ಕೆಲಸ ಮಾಡುತ್ತಾಳೆ. ಆಕೆಯ ಸ್ನೇಹಿತ ಅಥವಾ ಜಯೇಶ್ ಪೂಜಾರಿ ಕರೆ ಮಾಡಿದ್ದಾರೆಯೇ ಎಂದು ನಾವು ಕಂಡುಹಿಡಿಯುತ್ತಿದ್ದೇವೆ ಎಂದು ನಾಗ್ಪುರ ಡಿಸಿಪಿ ರಾಹುಲ್ ಮದನೆ ಹೇಳಿದ್ದಾರೆ.

ಈ ಬಗ್ಗೆ ತನಿಖೆ ನಡೆಸಿದಾಗ ಕರೆ ಮಾಡಿದ ವ್ಯಕ್ತಿ ಹಿಂಡಲಗಾ ಜೈಲಿನ ಕೈದಿಯಾಗಿದ್ದು, ಈ ಹಿಂದೆ ಕೊಲೆ ಪ್ರಕರಣದಲ್ಲಿ ನ್ಯಾಯಾಲಯದಿಂದ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದನು. ಜೈಲಿನಿಂದ ಕರೆ ಮಾಡಲಾಗಿತ್ತು. ಗಡ್ಕರಿ ಅವರಿಗೆ ಇಂದು ಸುಲಿಗೆ ಕರೆ ಬಂದ ಹಿನ್ನೆಲೆಯಲ್ಲಿ ಸರ್ಕಾರ ಸಚಿವರ ಕಚೇರಿ ಮತ್ತು ನಿವಾಸಕ್ಕೆ ಭದ್ರತೆಯನ್ನು ಹೆಚ್ಚಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read