HomeKarnatakaಶಿವಮೊಗ್ಗಕ್ಕೆ ಕೇಂದ್ರ ಸಚಿವ ಗಡ್ಕರಿ: 2138 ಕೋಟಿ ರೂ. ಕಾಮಗಾರಿಗಳಿಗೆ ಶಂಕುಸ್ಥಾಪನೆ

ಶಿವಮೊಗ್ಗಕ್ಕೆ ಕೇಂದ್ರ ಸಚಿವ ಗಡ್ಕರಿ: 2138 ಕೋಟಿ ರೂ. ಕಾಮಗಾರಿಗಳಿಗೆ ಶಂಕುಸ್ಥಾಪನೆ

ಶಿವಮೊಗ್ಗ: ಕೇಂದ್ರ ಭೂ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರು ಫೆ.22ರಂದು ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದು, 139.41 ಕೋಟಿ ರೂ. ವೆಚ್ಚದ ನಾಲ್ಕು ಕಾಮಗಾರಿಗಳ ಉದ್ಘಾಟನೆ, 2138.30 ಕೋಟಿ ರೂ. ವೆಚ್ಚದ 6 ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ, ನಗರದ ನೆಹರು ಕ್ರೀಡಾಂಗಣದಲ್ಲಿ ಗುರುವಾರ ಮಧ್ಯಾಹ್ನ ಕಾರ್ಯಕ್ರಮ ನಡೆಯಲಿದೆ. ರಾಷ್ಟ್ರೀಯ ಹೆದ್ದಾರಿಯ ದಕ್ಷಿಣ ವಲಯಕ್ಕೆ ಸೇರಿದ ವಿವಿಧ ಜಿಲ್ಲೆಗಳ 18 ಕಾಮಗಾರಿಗಳನ್ನು ನಿತಿನ್‌ ಗಡ್ಕರಿ ಅವರು ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಪೈಕಿ ಶಿವಮೊಗ್ಗ ಜಿಲ್ಲೆಯ 4 ಕಾಮಗಾರಿಗಳ ಉದ್ಘಾಟನೆ, 6 ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಬೈಂದೂರು – ರಾಣೆಬೆನ್ನೂರು ರಸ್ತೆಯ ಮಡೋಡಿ, ಮತ್ತಿಮನೆ, ನಗರ, ಆರೋಡಿ, ಕಾರಣಗಿರಿ, ಮಾವಿನಕೊಪ್ಪ, ಬ್ರಹ್ಮೇಶ್ವರ ಬಳಿ 19.77 ಕೋಟಿ ರೂ. ವೆಚ್ಚದ 7 ಕಿರು ಸೇತುವೆಗಳು.ಶಿವಮೊಗ್ಗ ವಿದ್ಯಾನಗರದಲ್ಲಿ 43.90 ಕೋಟಿ ರೂ. ವೆಚ್ಚದ ರೈಲ್ವೆ ಮೇಲ್ಸೇತುವೆ. ಶಿವಮೊಗ್ಗ ಬೈಪಾಸ್‌ ರಸ್ತೆಯಲ್ಲಿ ತುಂಗಾ ನದಿಗೆ ಅಡ್ಡಲಾಗಿ 20.12 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ನೂತನ ಸೇತುವೆ. ತೀರ್ಥಹಳ್ಳಿಯಲ್ಲಿ 55.62 ಕೋಟಿ ರೂ. ವೆಚ್ಚದಲ್ಲಿ ತುಂಗಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ, ಬೈಪಾಸ್‌ ರಸ್ತೆ ಉದ್ಘಾಟಿಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಿವಮೊಗ್ಗದ ಸಿಂಹಧಾಮದಿಂದ ಆನಂದಪುರದವರೆಗೆ 653 ಕೋಟಿ ರೂ. ವೆಚ್ಚದಲ್ಲಿ 4 ಪಥದ ರಸ್ತೆ ನಿರ್ಮಾಣ. ಕುಂಸಿ ಮತ್ತು ಯಡೇಹಳ್ಳಿ ರೈಲ್ವೆ ಮೇಲ್ಸೇತುವೆ. ಕುಂಸಿ, ಚೋರಡಿ, ಕೋಣೆಹೊಸೂರು, ಯಡೇಹಳ್ಳಿ, ಆನಂದಪುರ ಬೈಪಾಸ್‌ ರಸ್ತೆ, ಹೊಸೂರು ಮತ್ತು ತಾಳಗುಪ್ಪ ಬಳಿ 198.58 ಕೋಟಿ ರೂ. ವೆಚ್ಚದಲ್ಲಿ ರೈಲ್ವೆ ಮೇಲ್ಸೇತುವೆ ಮತ್ತು ಬೈಪಾಸ್‌ ರಸ್ತೆ ನಿರ್ಮಾಣ. ಶಿವಮೊಗ್ಗದ ಸಂದೇಶ್‌ ಮೋಟರ್ಸ್‌ನಿಂದ ಹರಕೆರೆವರೆಗೆ 39.50 ಕೋಟಿ ರೂ. ವೆಚ್ಚದಲ್ಲಿ 4 ಪಥದ ರಸ್ತೆ ನಿರ್ಮಾಣ ಸೇರಿ ಹಲವು ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular