HomeIndiaBIG NEWS: ಪ್ರಧಾನಿ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ: ಮೌನ ಮುರಿದ ನಿತೀಶ್ ಕುಮಾರ್ ಮಹತ್ವದ ಹೇಳಿಕೆ

BIG NEWS: ಪ್ರಧಾನಿ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ: ಮೌನ ಮುರಿದ ನಿತೀಶ್ ಕುಮಾರ್ ಮಹತ್ವದ ಹೇಳಿಕೆ

ಪಾಟ್ನಾ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ‘ಇಂಡಿಯಾ’ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿಯಾಗಿ ಬಿಂಬಿಸಲು ಟಿಎಂಸಿ ಅಧ್ಯಕ್ಷ ಮಮತಾ ಬ್ಯಾನರ್ಜಿ, ಆಪ್ ಅಧ್ಯಕ್ಷ ಅರವಿಂದ್ ಕೇಜ್ರಿವಾಲ್ ಶಿಫಾರಸು ಮಾಡಿದ್ದು, ಇದರಿಂದ ಜೆಡಿಯು ನಾಯಕ, ಬಿಹಾರ ಸಿಎಂ ನಿತೀಶ್ ಕುಮಾರ್ ಬೇಸರಗೊಂಡಿದ್ದಾರೆ ಎಂದು ಹೇಳಲಾಗಿತ್ತು.

ಆದರೆ, ಮೌನ ಮುರಿದ ನಿತೀಶ್ ಕುಮಾರ್ ಮಹತ್ವದ ಹೇಳಿಕೆ ನೀಡಿದ್ದಾರೆ. ಪ್ರಧಾನಿ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರಿಗೆ ನನ್ನ ತಕರಾರು ಇಲ್ಲ. ಖರ್ಗೆ ಅವರ ಹೆಸರನ್ನು ಶಿಫಾರಸು ಮಾಡಿರುವುದಕ್ಕೆ ನನಗೆ ಯಾವುದೇ ಅಸಮಾಧಾನವೂ ಇಲ್ಲ. ನಾನು ಇಂಡಿಯಾ ಮೈತ್ರಿಕೂಟದ ಸಂಚಾಲಕ ಹುದ್ದೆ ಪಡೆಯುವ ಆಸೆಯನ್ನು ವ್ಯಕ್ತಪಡಿಸಿಲ್ಲ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಖರ್ಗೆಯವರನ್ನು ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿಯಾಗಿ ಶಿಫಾರಸು ಮಾಡಿರುವುದಕ್ಕೆ ನನಗೆ ಯಾವುದೇ ಬೇಸರ ಆಗಿಲ್ಲ. ನನಗೆ ಆಸಕ್ತಿಯೂ ಇಲ್ಲ. ಪ್ರಧಾನಿ ಅಭ್ಯರ್ಥಿ ವಿಷಯ ಚರ್ಚೆಗೆ ಬಂದಾಗ ನನಗೆ ಆಸಕ್ತಿ ಇಲ್ಲ ಎಂದು ಹೇಳಿದೆ. ಆಗ ಖರ್ಗೆಯವರ ಹೆಸರು ಬಂತು. ಅದಕ್ಕೆ ನನ್ನ ಸಹಮತವಿದೆ ಎಂದು ಹೇಳಿದ್ದೇನೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular