NMMS ಪರೀಕ್ಷೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ

ಬೆಂಗಳೂರು: 2024-25ನೇ ಸಾಲಿನ NMMS ಪರೀಕ್ಷೆಗೆ ಸಂಬಂಧಿಸಿದಂತೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ದಿನಾಂಕವನ್ನು ವಿಸ್ತರಿಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ತು ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.

2024-25ನೇ ಸಾಲಿನ NMMS ಪರೀಕ್ಷೆಯನ್ನು ಡಿ. 8 ರಂದು ನಡೆಸಲಾಗುತ್ತಿದ್ದು, ಉಲ್ಲೇಖಿತ ಸುತ್ತೋಲೆಯಲ್ಲಿ ದಿನಾಂಕ: 19.08.2024 ರಿಂದ 05.09.2024 ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಅವಕಾಶವನ್ನು ನೀಡಲಾಗಿತ್ತು. ಶಾಲಾ ಮುಖ್ಯ ಶಿಕ್ಷಕರು/ಪ್ರಾಂಶುಪಾಲರ ಕೋರಿಕೆಯ ಮೇರೆಗೆ ಈ ಪರೀಕ್ಷೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ದಿನಾಂಕ:20.09.2024 ರವರೆಗೆ ವಿಸ್ತರಿಸಲಾಗಿದೆ.

ಈ ಸಂಬಂಧ ಉಪನಿರ್ದೇಶಕರು(ಆಡಳಿತ), ಉಪನಿರ್ದೇಶಕರು(ಅಭಿವೃದ್ಧಿ), ಸಂಬಂಧಿಸಿದ ನೋಡಲ್ ಅಧಿಕಾರಿಗಳು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಶಾಲಾ ಮುಖ್ಯ ಶಿಕ್ಷಕರು/ಪ್ರಾಂಶುಪಾಲರಿಗೆ ಮಾಹಿತಿಯನ್ನು ನೀಡುವುದು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿ ಸಲ್ಲಿಸಲು ಕ್ರಮವಹಿಸುವಂತೆ ತಿಳಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read