HomeKarnatakaವಿಚಾರಣಾಧೀನ ಕೈದಿ ವಿರುದ್ಧ ಹಲವು ಕೇಸಿದ್ದರೆ ಜಾಮೀನು ಇಲ್ಲ: ಹೈಕೋರ್ಟ್ ಮಹತ್ವದ ತೀರ್ಪು

ವಿಚಾರಣಾಧೀನ ಕೈದಿ ವಿರುದ್ಧ ಹಲವು ಕೇಸಿದ್ದರೆ ಜಾಮೀನು ಇಲ್ಲ: ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ವಿಚಾರಣಾಧೀನ ಕೈದಿ ವಿರುದ್ಧ ಹಲವು ಕೇಸುಗಳಿದ್ದರೆ ಜಾಮೀನು ನೀಡುವುದಿಲ್ಲ. ಒಟ್ಟು ಶಿಕ್ಷೆಯ ಪೈಕಿ ಮೂರನೇ ಒಂದರಷ್ಟು ಕಳೆದಿದ್ದರೆ ಜಾಮಿನಿಗೆ ಅರ್ಹ ಎನ್ನುವ ಬಿಎನ್ಎಸ್ಎಸ್ ಸೆಕ್ಷನ್ 479 ಅನ್ವಯವಾಗುವುದಿಲ್ಲವೆಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಠೇವಣಿದಾರರಿಗೆ ವಂಚಿಸಿದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವ ಅರ್ಜಿದಾರರು ಜಾಮೀನು ಕೋರಿ 2ನೇ ಬಾರಿಗೆ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು.

ವಿಚಾರಣಾಧೀನ ಕೈದಿಯ ವಿರುದ್ಧದ ಅಪರಾಧ ಪ್ರಕರಣಕ್ಕೆ ನಿಗದಿಯಾಗಿರುವ ಒಟ್ಟು ಶಿಕ್ಷೆಯ ಪ್ರಮಾಣದಲ್ಲಿ ಮೂರನೇ ಒಂದು ಭಾಗದ ದಿನಗಳನ್ನು ಕೈದಿಯು ಜೈಲಿನಲ್ಲಿ ಕಳೆದರೆ ಜಾಮೀನು ಪಡೆಯಲು ಅರ್ಹರಾಗಿರುತ್ತಾರೆ ಎಂದು ಪ್ರತಿಪಾದಿಸುವ ನೂತನ ಭಾರತೀಯ ನಾಗರಿಕ ಸುರಕ್ಷತಾ ಸಂಹಿತೆ ಸೆಕ್ಷನ್ 479 ಹಲವು ಪ್ರಕರಣಗಳು ದಾಖಲಾಗಿದ್ದ ಸಂದರ್ಭದಲ್ಲಿ ಅನ್ವಯವಾಗುವುದಿಲ್ಲವೆಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಕಲಿ ದಾಖಲೆಗಳನ್ನು ಸೃಷ್ಟಿಸಿ ಠೇವಣಿದಾರರಿಗೆ ವಂಚಿಸಿದ್ದ ಪ್ರಕರಣದಲ್ಲಿ 31 ತಿಂಗಳಿಂದ ಜೈಲಿನಲ್ಲಿರುವ ಕಾರಣಕ್ಕೆ ಈ ಸೆಕ್ಷನ್ ಆಧರಿಸಿ ಜಾಮಿನು ನೀಡುವಂತೆ ಕೋರಿ ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಮತ್ತು ಶ್ರೀ ಗುರು ಸಾರ್ವಭೌಮ ಸೌಹಾರ್ದ ಕ್ರೆಡಿಟ್ ಕೋಆಪರೇಟಿವ್ ಲಿಮಿಟೆಡ್ ಅಧ್ಯಕ್ಷ ಕೆ. ರಾಮಕೃಷ್ಣ ಅವರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ನ್ಯಾಯಮೂರ್ತಿ ಹೆಚ್.ಪಿ. ಸಂದೇಶ್ ಅವರ ಪೀಠ ಈ ಆದೇಶ ನೀಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular