HomeKarnatakaಯತೀಂದ್ರ ಮೌನ ವೃತ: ಸಿದ್ದರಾಮಯ್ಯ ಖಡಕ್ ಸೂಚನೆಯೇ?

ಯತೀಂದ್ರ ಮೌನ ವೃತ: ಸಿದ್ದರಾಮಯ್ಯ ಖಡಕ್ ಸೂಚನೆಯೇ?

ಎಂಎಲ್‌ಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಮೌನ ವೃತ  ಮಾಡಲಿದ್ದಾರೆ. ನಾಯಕತ್ವ ಬದಲಾವಣೆ ವಿಚಾರದಲ್ಲಿ ಯಾವುದೇ ಹೇಳಿಕೆ ನೀಡುವುದಿಲ್ಲ ಎಂದು ಖಡಕ್ ಆಗಿ ಹೇಳಿ ಬಿಟ್ಟಿದ್ದಾರೆ.

ಮಂಗಳವಾರ ಮೈಸೂರಿನಲ್ಲಿ ಮಾತನಾಡಿದ ಅವರು, “ನವೆಂಬರ್ ತಿಂಗಳಿನಿಂದ ನಾನು ಎಲ್ಲವನ್ನೂ ಹೇಳಿ ಬಿಟ್ಟಿದ್ದೀನಿ. ಇನ್ನು ಈ ವಿಚಾರದಲ್ಲಿ ಏನೂ ಹೇಳುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

“ನಾಯಕತ್ವ ಬದಲಾವಣೆ ವಿಚಾರದಲ್ಲಿ ನಾನು ಯಾರ ಹೇಳಿಕೆಗೂ ಪ್ರತಿಕ್ರಿಯೆ ನೀಡುವುದಿಲ್ಲ. ನಾನು ಹೇಳುವುದು ಹೇಳಿಯಾಗಿದೆ. ಇನ್ನು ಮುಂದೆ ಈ ವಿಚಾರವನ್ನು ನನ್ನ ಮುಂದೆ ತರಬೇಡಿ” ಎಂದು ಹೇಳಿ ಬಿಟ್ಟರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಲವು ಬಾರಿ ಹೇಳಿಕೆ: ನಾಯಕತ್ವ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ನಾಯಕರು ಹೇಳಿದಂತೆ ಕೇಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಆದರೆ ಯತೀಂದ್ರ ಸಿದ್ದರಾಮಯ್ಯ ಹಲವು ಬಾರಿ ತಂದೆಯ ಪರವಾಗಿ ಮಾತನಾಡಿ ಇಕ್ಕಟ್ಟಿಗೆ ಸಿಲುಕಿದ್ದಾರೆ. ಡಿಸೆಂಬರ್‌ನಲ್ಲಿ ಬೆಳಗಾವಿ ಚಳಿಗಾಲದ ಅಧಿವೇಶನದ ಮೊದಲ ದಿನ ಸಹ ಯತೀಂದ್ರ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗಿತ್ತು.

ಕೆಲವು ದಿನಗಳ ಹಿಂದೆ, “ಮುಂದಿನ ಐದು ವರ್ಷ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದು ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ” ಎಂದು ಹೇಳುವ ಮೂಲಕ ಯತೀಂದ್ರ ಸಿದ್ದರಾಮಯ್ಯ ಚರ್ಚೆಯನ್ನು ಹುಟ್ಟು ಹಾಕಿದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ನಾಯಕತ್ವ ಬದಲಾವಣೆ ಕುರಿತು ಮಾತನಾಡಬಾರದು ಎಂದು ಪುತ್ರನಿಗೆ ಖಡಕ್ ಸೂಚನೆ ನೀಡಿರುವ ಸಾಧ್ಯತೆ ಇದೆ. ಆದ್ದರಿಂದ ಈ ವಿಚಾರದಲ್ಲಿ ಇನ್ನು ಮುಂದೆ ಮಾತನಾಡಲ್ಲ ಎಂದು ಯತೀಂದ್ರ ಹೇಳಿದ್ದಾರೆ.

ಯತೀಂದ್ರ ನೀಡಿದ್ದ ಹೇಳಿಕೆಗಳು

  • ಸಿದ್ದರಾಮಯ್ಯ ಪೂರ್ಣಾವಧಿ ಮುಖ್ಯಮಂತ್ರಿ ಆಗಿರುತ್ತಾರೆ. ನಾಯಕತ್ವ ಬದಲಾವಣೆ ಮಾಡುವುದಿಲ್ಲವೆಂದು ಹೈಕಮಾಂಡ್‌ ಕೂಡ ಹೇಳಿದೆ. ಬೇರೆಯವರ ಬೇಡಿಕೆಗೆ ಮನ್ನಣೆಯನ್ನು ಕೊಟ್ಟಿಲ್ಲ ಎಂದು ಹೇಳಿದ್ದರು.
  • ಡಿಸೆಂಬರ್‌ನಲ್ಲಿ ಮಾತನಾಡಿದ್ದ ಯತೀಂದ್ರ ಈಗ ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದರು.

ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಚರ್ಚೆಗಳು ನಡೆಯುತ್ತಿರುವ ಹೊತ್ತಿನಲ್ಲೇ ಆಡಳಿತ ಪಕ್ಷದ ಸುಮಾರು 20 ಶಾಸಕರು ವಿದೇಶ ಪ್ರವಾಸ ಕೈಗೊಂಡಿದ್ದಾರೆ. ಇದರಲ್ಲಿ ಸಿದ್ದರಾಮಯ್ಯ ಬೆಂಬಲಿಗರೇ ಅಧಿಕವಾಗಿದ್ದಾರೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಆದರೆ ಇದು ಅಧ್ಯಯನ ಪ್ರವಾಸ ಎಂಬುದು ಶಾಸಕರ ಸಮರ್ಥನೆಯಾಗಿದೆ.

ನಾಯಕತ್ವ ಬದಲಾವಣೆ ಸಂಬಂಧ ಸಚಿವರು, ಶಾಸಕರು ಹೇಳಿಕೆಗಳನ್ನು ನೀಡಬಾರದು ಎಂದು ಹೈಕಮಾಂಡ್ ನಾಯಕರು ಸೂಚನೆ ನೀಡಿದ್ದಾರೆ. ಆದರೆ ಅದನ್ನು ಯಾರೂ ಪಾಲಿಸುತ್ತಿಲ್ಲ. ಮಾಧ್ಯಮಗಳ ಮಂದೆ ಪ್ರತಿದಿನ ಹೇಳಿಕೆ ನೀಡುವ ಮೂಲಕ ಚರ್ಚೆಯನ್ನು ಇನ್ನಷ್ಟು ಹೆಚ್ಚಿಸುತ್ತಿದ್ದಾರೆ.

ಕಳೆದ ವಾರ ಬೆಂಗಳೂರಿನಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರಕರ್ತರು ಪದೇ ಪದೇ ಒಂದೇ ವಿಷಯವನ್ನು ಕೇಳಬಾರದು. ನಾಯಕತ್ವ ಬದಲಾವಣೆ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನಿಸಿದರೆ ಅದರಂತೆ ನಡೆದುಕೊಳ್ಳುತ್ತೇವೆ ಎಂದು ಹೇಳಿದ್ದರು.

ಚಿಕ್ಕಬಳ್ಳಾಪುರದಲ್ಲಿ ಮಂಗಳವಾರ ಮಾತನಾಡಿದ ಶಾಸಕ ಪ್ರದೀಪ್ ಈಶ್ವರ್, “ನಾಯಕತ್ವ ಬದಲಾವಣೆಯ ಬಗ್ಗೆ ಸಣ್ಣಮಟ್ಟದ ಚರ್ಚೆಗಳು ನಡೆಯುತ್ತಿರುವುದು ನಿಜ. ಒಂದು ದೊಡ್ಡ ಪಕ್ಷ ಎಂದ ಮೇಲೆ ಅಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಇರುವುದು ಸಹಜ” ಎಂದರು.

“ಇದನ್ನು ದೊಡ್ಡ ಹಗರಣ ಎನ್ನುವಂತೆ ಬಿಂಬಿಸುವುದು ತಪ್ಪು. ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅತ್ಯಂತ ಅನ್ಯೋನ್ಯವಾಗಿದ್ದಾರೆ” ಎಂದು ಹೇಳಿದರು.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular