‘ದ್ವಿತೀಯ ಪಿಯುಸಿ’ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ‘GRACE MARKS’ ಇಲ್ಲ: ಮಂಡಳಿ ಸ್ಪಷ್ಟನೆ

ಬೆಂಗಳೂರು : ಮಾರ್ಚ್ 7 ರಂದು ನಡೆದ ದ್ವಿತೀಯ ಪಿಯುಸಿ ಭೌತಶಾಸ್ತ್ರ ವಿಷಯದ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ನೀಡುತ್ತಿದೆ ಎಂಬ ವದಂತಿ ಹಬ್ಬಿಸಲಾಗಿತ್ತು, ಇದಕ್ಕೆ ಪಿಯು ಮಂಡಳಿ ಸ್ಪಷ್ಟನೆ ನೀಡಿದೆ.

ವಿದ್ಯಾರ್ಥಿಗಳಿಗೆ ಬಹು ಆಯ್ಕೆಯ ಪ್ರಶ್ನೆಗಳು ಕಷ್ಟಕರವಾಗಿದ್ದರಿಂದ ಗ್ರೇಸ್ ಮಾರ್ಕ್ಸ್ ನೀಡಲಾಗುತ್ತಿದೆ ಎಂದು ವದಂತಿ ಹಬ್ಬಿಸಲಾಗಿತ್ತು.  ಇದು ಕೇವಲ ವದಂತಿ ಅಷ್ಟೇ, ಯಾವುದೇ ಗ್ರೇಸ್ ಮಾರ್ಕ್ಸ್ ನೀಡಲಾಗುತ್ತಿಲ್ಲ. ಮಾರ್ಚ್ 10 ರಂದು ಹೊರಡಿಸಿದ್ದ ಸುತ್ತೋಲೆ ನಕಲಿ ಎಂದು ಮಂಡಳಿ ತಿಳಿಸಿದೆ.

ನಾವು ಇದುವರೆಗೆ ಗ್ರೇಸ್ ಅಂಕ ನೀಡುವ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ, ಇದು ನಕಲಿ ಸುತ್ತೋಲೆಯಾಗಿದೆ ಎಂದು ಪಿಯುಸಿ ಪರೀಕ್ಷೆಗಳ ನಿರ್ದೇಶಕ ಗೋಪಾಲಕೃಷ್ಣ ಎಚ್ಎನ್ ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read