HomeIndiaI.N.D.I.A. ಮೈತ್ರಿಕೂಟಕ್ಕೆ ಶಾಕ್: ಲೋಕಸಭೆ ಚುನಾವಣೆಯಲ್ಲಿ ಏಕಾಂಗಿ ಸ್ಪರ್ಧೆಗೆ ಕಾಂಗ್ರೆಸ್ ನಿರ್ಧಾರ: ದೆಹಲಿಯ ಎಲ್ಲಾ ಕ್ಷೇತ್ರಗಳಲ್ಲಿ...

I.N.D.I.A. ಮೈತ್ರಿಕೂಟಕ್ಕೆ ಶಾಕ್: ಲೋಕಸಭೆ ಚುನಾವಣೆಯಲ್ಲಿ ಏಕಾಂಗಿ ಸ್ಪರ್ಧೆಗೆ ಕಾಂಗ್ರೆಸ್ ನಿರ್ಧಾರ: ದೆಹಲಿಯ ಎಲ್ಲಾ ಕ್ಷೇತ್ರಗಳಲ್ಲಿ ಸ್ಪರ್ಧೆ

ನವದೆಹಲಿ: ಮುಂದಿನ ವರ್ಷದ ಲೋಕಸಭೆ ಚುನಾವಣೆಯಲ್ಲಿ ದೆಹಲಿಯ ಎಲ್ಲಾ 7 ಸ್ಥಾನಗಳಲ್ಲಿ ಸ್ಪರ್ಧಿಸುವುದಾಗಿ ಕಾಂಗ್ರೆಸ್ ಹೇಳಿದೆ.

ಆಮ್ ಆದ್ಮಿ ಪಕ್ಷ(ಎಎಪಿ)ದೊಂದಿಗೆ ಯಾವುದೇ ಮೈತ್ರಿ ಮಾಡಿಕೊಳ್ಳುವುದಿಲ್ಲ, ಇದು ರಾಷ್ಟ್ರ ರಾಜಧಾನಿಯಲ್ಲಿ I.N.D.I.A ಮೈತ್ರಿಯ ಏಕತೆಗೆ ಹಿನ್ನಡೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಪಕ್ಷದ ಪ್ರಧಾನ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರು ಮತ್ತು ಅದರ ದೆಹಲಿ ಘಟಕದ ನಡುವಿನ ಸಭೆ ನಡೆದ ನಂತರ ಈ ಬೆಳವಣಿಗೆ ನಡೆದಿದೆ.

ಸಭೆಯಲ್ಲಿ ರಾಹುಲ್ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ(ಸಂಘಟನೆ) ಕೆ.ಸಿ. ವೇಣುಗೋಪಾಲ್, ದೆಹಲಿ ಘಟಕದ ಮುಖ್ಯಸ್ಥ ಚೌಧರಿ ಅನಿಲ್ ಕುಮಾರ್, ಉಸ್ತುವಾರಿ ದೀಪಕ್ ಬಬಾರಿಯಾ, ಅಲ್ಕಾ ಲಂಬಾ, ಹರೂನ್ ಯೂಸುಫ್, ಅಜಯ್ ಮಾಕನ್ ಮತ್ತು ಹಲವರು ಉಪಸ್ಥಿತರಿದ್ದರು.

ಮೂರು ಗಂಟೆಗಳ ಕಾಲ ನಡೆದ ಸಭೆಯಲ್ಲಿ ಮುಂಬರುವ ಲೋಕಸಭೆ ಚುನಾವಣೆಗೆ ಸಿದ್ಧತೆ ನಡೆಸುವಂತೆ ತಿಳಿಸಲಾಗಿದೆ. ಎಲ್ಲಾ 7 ಸ್ಥಾನಗಳಲ್ಲಿ ಸ್ಪರ್ಧಿಸಲು ನಿರ್ಧರಿಸಲಾಗಿದೆ. 7 ತಿಂಗಳುಗಳು ಉಳಿದಿವೆ. ಎಲ್ಲಾ ಸ್ಥಾನಗಳಿಗೆ ಸಿದ್ಧರಾಗಲು ಎಲ್ಲಾ ಪಕ್ಷದ ಕಾರ್ಯಕರ್ತರಿಗೆ ತಿಳಿಸಲಾಗಿದೆ ಎಂದು ಕಾಂಗ್ರೆಸ್ ನಾಯಕಿ ಅಲ್ಕಾ ಲಾಂಬಾ ತಿಳಿಸಿದ್ದಾರೆ.

ಸಭೆಯಲ್ಲಿ ಎಎಪಿ ಜೊತೆ ಮೈತ್ರಿ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಉಸ್ತುವಾರಿ ದೀಪಕ್ ಬಬಾರಿಯಾ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಆದರೆ, ಲೋಕಸಭೆ ಚುನಾವಣೆಗೆ ತಯಾರಿ ನಡೆಸುವ ದೃಷ್ಟಿಯಿಂದ ದೆಹಲಿಗೆ ಸಂಬಂಧಿಸಿದ ಎಲ್ಲ ವಿಷಯಗಳ ಕುರಿತು ಚರ್ಚಿಸಲಾಗಿದೆ. ಎಲ್ಲ 7 ಸಂಸದೀಯ ಸ್ಥಾನಗಳಿಗೆ ಸಿದ್ಧತೆ ಆರಂಭಿಸುವಂತೆ ನಾಯಕತ್ವ ಕೇಳಿಕೊಂಡಿದೆ ಎಂದರು.

ಆಮ್ ಆದ್ಮಿ ಪಕ್ಷ ಪ್ರತಿಕ್ರಿಯೆ

ದೆಹಲಿಯ ಎಲ್ಲಾ 7 ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಚುನಾವಣೆಯಲ್ಲಿ ಸ್ಪರ್ಧಿಸಲಿದೆ ಎಂಬ ವರದಿಗಳ ಬಗ್ಗೆ ಪ್ರತಿಕ್ರಿಯಿಸಿದ ಐಎನ್‌ಡಿಐಎ ಮೈತ್ರಿಕೂಟದ ಸದಸ್ಯ ಆಮ್ ಆದ್ಮಿ ಪಾರ್ಟಿ(ಎಎಪಿ), ಮುಂದಿನ ವರ್ಷ ದೆಹಲಿಯಲ್ಲಿ ಏಕಾಂಗಿಯಾಗಿ ಹೋಗಲು ಕಾಂಗ್ರೆಸ್ ನಿರ್ಧರಿಸಿದ್ದರೆ, ಅವರು ಐಎನ್‌ಡಿಐಎ ಮೈತ್ರಿಕೂಟದ ಸಭೆಯಲ್ಲಿ ಭಾಗವಹಿಸುವುದರಲ್ಲಿ ಯಾವುದೇ ಅರ್ಥವಿಲ್ಲ. ಆದರೆ ಅಂತಿಮ ನಿರ್ಧಾರವನ್ನು ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುತ್ತದೆ ಎಂದು ಹೇಳಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular