HomeAgricultureGOOD NEWS: ಬೇಸಿಗೆಯಲ್ಲಿ ಯಾವುದೇ ಕಾರಣಕ್ಕೂ ಲೋಡ್ ಶೆಡ್ಡಿಂಗ್ ಇಲ್ಲ: ಕೃಷಿಗೆ 7 ಗಂಟೆ, ಇತರೆ...

GOOD NEWS: ಬೇಸಿಗೆಯಲ್ಲಿ ಯಾವುದೇ ಕಾರಣಕ್ಕೂ ಲೋಡ್ ಶೆಡ್ಡಿಂಗ್ ಇಲ್ಲ: ಕೃಷಿಗೆ 7 ಗಂಟೆ, ಇತರೆ ಉದ್ದೇಶಕ್ಕೆ ನಿರಂತರ ವಿದ್ಯುತ್

ಬೆಂಗಳೂರು: ಈ ಬಾರಿ ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಇರುವುದಿಲ್ಲ. ಕೃಷಿಗೆ 7 ಗಂಟೆ, ಇತರೆ ಉದ್ದೇಶಕ್ಕೆ 24 ಗಂಟೆ ವಿದ್ಯುತ್ ಪೂರೈಕೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ.

ಬೇಸಿಗೆಯಲ್ಲಿ ವಿದ್ಯುತ್ ಪೂರೈಕೆಗೆ ಸಂಬಂಧಿಸಿದಂತೆ ಎಸ್ಕಾಂಗಳ ಮುಖ್ಯಸ್ಥರು, ಇಂಧನ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಈ ಬಾರಿ ಬೇಸಿಗೆಯಲ್ಲಿ ಗರಿಷ್ಠ ವಿದ್ಯುತ್ ಬಳಕೆ 19,000 ದಿಂದ 19,500 ಮೆಗಾ ವ್ಯಾಟ್ ಗೆ ಹೆಚ್ಚಳವಾಗುವ ಸಾಧ್ಯತೆಯಿದ್ದು, ವಿದ್ಯುತ್ ಬೇಡಿಕೆಯನ್ನು ಈಡೇರಿಸಲು ಇಂಧನ ಇಲಾಖೆ ಅನೇಕ ಕ್ರಮ ಕೈಗೊಂಡಿದೆ. ಯಾವುದೇ ಕಾರಣಕ್ಕೂ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೇಸಿಗೆಯಲ್ಲಿ ರೈತರ ಕೃಷಿ ಪಂಪ್ ಸೆಟ್ ಗಳಿಗೆ ದಿನದ 7 ಗಂಟೆ, ಇತರ ಉದ್ದೇಶಗಳಿಗೆ 24 ಗಂಟೆ ವಿದ್ಯುತ್ ಪೂರೈಕೆ ಮಾಡಲು ಎಲ್ಲಾ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular