‘KMF’ ಜೊತೆ ‘ಅಮುಲ್’ ವಿಲೀನ ಇಲ್ಲ : ಸಚಿವ ಕೆ. ಎನ್ ರಾಜಣ್ಣ ಸ್ಪಷ್ಟನೆ

ಬೆಂಗಳೂರು : ಕೆಎಂಎಫ್ ಜೊತೆ ಅಮುಲ್ ವಿಲೀನ ಇಲ್ಲಎಂದು ಸಹಕಾರ ಸಚಿವ ಕೆ. ಎನ್ ರಾಜಣ್ಣ ಹೇಳಿದ್ದಾರೆ.

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಕೆ ಎನ್ ರಾಜಣ್ಣ ಕೆಎಂಎಫ್ ಜೊತೆ ಅಮುಲ್ ವಿಲೀನ ಎಂಬ ಸುದ್ದಿ ಹರಿದಾಡುತ್ತಿದೆ. ಯಾವುದೇ ಕಾರಣಕ್ಕೂ ಕೆಎಂಎಫ್ ಜೊತೆ ಅಮುಲ್ ವಿಲೀನ ಮಾಡಲ್ಲ ಎಂದು ಸಚಿವ ಕೆ. ಎನ್ ರಾಜಣ್ಣ ಹೇಳಿದ್ದಾರೆ. ಗುಜರಾತ್ನ ಅಮುಲ್ ಜೊತೆ ಕೆಎಂಎಫ್ ವಿಲೀನ ಎಂಬ ವಿಚಾರ ಇತ್ತೀಚೆಗೆ ಹರಿದಾಡಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು.

ಯಾರಿಗೂ ತಪ್ಪು ಕಲ್ಪನೆ ಬೇಡ, ಕೆಲವರು ಹುಚ್ಚು ಹುಚ್ಚಾಗಿ ಮಾತನಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ಕೆಎಂಎಫ್ ಜೊತೆ ಅಮುಲ್ ವಿಲೀನ ಮಾಡಲ್ಲ ಎಂದು ಸಚಿವ ಕೆ. ಎನ್ ರಾಜಣ್ಣ ಹೇಳಿದ್ದಾರೆ.

ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಅಧ್ಯಕ್ಷ ಸ್ಥಾನಕ್ಕೆ ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಭೀಮಾನಾಯ್ಕ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಕರ್ನಾಟಕ ಹಾಲು ಮಾರಾಟ ಮಹಾಮಂಡಳಿ (KMF) ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆದಿದ್ದು, ಕಾಂಗ್ರೆಸ್ ನ ಶಾಸಕ ಭೀಮಾ ನಾಯ್ಕ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ.

ಬಾಲಚಂದ್ರ ಜಾರಕಿಹೊಳಿ ಅವರ ತೆರವಾದ ಅಧ್ಯಕ್ಷ ಸ್ಥಾನಕ್ಕೆ , ಕಾಂಗ್ರೆಸ್ನ ಶಾಸಕ ಭೀಮಾ ನಾಯ್ಕ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ನಾಮಪತ್ರ ಸಲ್ಲಿಕೆ ಅವಧಿ ಮುಗಿದರೂ ಭೀಮಾನಾಯ್ಕ್ಗೆ ವಿರೋಧವಾಗಿ ಯಾರೊಬ್ಬರೂ ನಾಮಪತ್ರ ಸಲ್ಲಿಕೆ ಮಾಡಿಲ್ಲ. ಹೀಗಾಗಿ, ಭೀಮಾನಾಯ್ಕ್ ಅವಿರೋಧವಾಗಿ ಕೆಎಂಎಫ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read