ಗಂಭೀರ ಅಪರಾಧದ ಮಾಹಿತಿ ನೀಡಿದಾಗ ಪ್ರಾಥಮಿಕ ತನಿಖೆ ಅಗತ್ಯವಿಲ್ಲ, ಎಫ್ಐಆರ್ ದಾಖಲು ಕಡ್ಡಾಯ: ಹೈಕೋರ್ಟ್ ಮಹತ್ವದ ನಿರ್ದೇಶನ

ಬೆಂಗಳೂರು: ಗಂಭೀರ ಅಪರಾಧದ ಮಾಹಿತಿ ನೀಡಿದಾಗ ಎಫ್ಐಆರ್ ದಾಖಲಿಸುವುದು ಕಡ್ಡಾಯವೆಂದು ಹೈಕೋರ್ಟ್ ಏಕ ಸದಸ್ಯ ಪೀಠ ಪೊಲೀಸರಿಗೆ ನಿರ್ದೇಶನ ನೀಡಿದೆ.

ಲಲಿತಾ ಕುಮಾರಿ ಕೇಸ್ ನ ತೀರ್ಪನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಈ ಬಗ್ಗೆ ಮಾರ್ಗಸೂಚಿ, ಸುತ್ತೋಲೆ ಹೊರಡಿಸಬೇಕು ಎಂದು ಡಿಜಿ ಐಜಿಪಿಗೆ ಸೂಚನೆ ನೀಡಲಾಗಿದೆ. ಲಲಿತಾ ಕುಮಾರಿ ಪ್ರಕರಣದಲ್ಲಿ ಎಫ್ಐಆರ್ ದಾಖಲಿಸುವ ಬಗ್ಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ ಎಂದು ನ್ಯಾಯಪೀಠ ಹೇಳಿದೆ.

ತೀರ್ಪಿನ 120ನೇ ಪ್ಯಾರಾ ಕನ್ನಡ, ಆಂಗ್ಲ ಭಾಷೆಯಲ್ಲಿ ಸುತ್ತೋಲೆ ಹೊರಡಿಸಲು ಹೇಳಲಾಗಿದೆ. ಎಫ್ಐಆರ್ ದಾಖಲಿಸಲು ವಿಳಂಬ ಮಾಡದಂತೆ ತಾಕಿತು ಮಾಡಲಾಗಿದೆ. ಗಂಭೀರ ಅಪರಾಧದ ದೂರು ಬಂದಾಗ ಪ್ರಾಥಮಿಕ ತನಿಖೆ ಅಗತ್ಯವಿಲ್ಲ. ಗಂಭೀರವಲ್ಲದ ಪ್ರಕರಣಗಳಲ್ಲಿ ಮಾತ್ರ ಪ್ರಾಥಮಿಕ ತನಿಖೆ ನಡೆಸಬಹುದು. 7 ದಿನದೊಳಗೆ ಪ್ರಾಥಮಿಕ ತನಿಖೆ ಮುಕ್ತಾಯಗೊಳಿಸಬೇಕು. ಗಂಭೀರ ಅಪರಾಧ ಕಂಡು ಬಂದಾಗ ಎಫ್ಐಆರ್ ದಾಖಲಿಸಬೇಕು. ಪೋಲಿಸ್ ಠಾಣೆಯ ಡೈರಿಯಲ್ಲಿ ತನಿಖೆಯ ಮಾಹಿತಿ ಉಲ್ಲೇಖಿಸಬೇಕು ಎಂದು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಹೈಕೋರ್ಟ್ ಪೀಠ ಆದೇಶ ನೀಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read