ರಾಜ್ಯದಲ್ಲಿ ನಂದಿನಿ V/S ಅಮುಲ್ ಹಾಲಿನ ಕದನದ ನಡುವೆ ಗುಜರಾತ್ ಸಿಎಂ ಮಹತ್ವದ ಹೇಳಿಕೆ

ಕರ್ನಾಟಕದಲ್ಲಿ ನಂದಿನಿ ವರ್ಸಸ್ ಅಮುಲ್ ಕದನದ ಮಧ್ಯೆ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ದಕ್ಷಿಣ ರಾಜ್ಯದಲ್ಲಿ ಅಮುಲ್ ಬಹಿಷ್ಕರಿಸುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ನನ್ನ ದೃಷ್ಟಿಯಲ್ಲಿ ಅಮುಲ್ ಬಹಿಷ್ಕರಿಸುವ ಅಗತ್ಯವಿಲ್ಲ, ನೀವು ಏನು ಮಾಡಬೇಕೆಂದು ಬಯಸುತ್ತೀರೋ ಅದನ್ನು ಮಾಡುತ್ತಿರಿ. ಅಮುಲ್ ಏನನ್ನಾದರೂ ಕಸಿದುಕೊಳ್ಳುತ್ತಿದ್ದರೆ, ಅದು ಪ್ರತಿಭಟನೆಯ ವಿಷಯವಾಗಿದೆ ಎಂದು ಪಟೇಲ್ ಹೇಳಿದರು.

ದಕ್ಷಿಣ ರಾಜ್ಯದಲ್ಲಿ ಅಮುಲ್‌ಗೆ ಅವಕಾಶ ನೀಡುವ ಮೂಲಕ ಆಡಳಿತಾರೂಢ ಭಾರತೀಯ ಜನತಾ ಪಕ್ಷ(ಬಿಜೆಪಿ) ನಂದಿನಿಯನ್ನು ಕೊಲ್ಲಲು ಬಯಸಿದೆ ಎಂದು ಕರ್ನಾಟಕದಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಮತ್ತು ಜನತಾ ದಳ(ಜಾತ್ಯತೀತ) ಆರೋಪಿಸಿವೆ.

ಕೆಎಂಎಫ್ ನಂದಿನಿಯನ್ನು ಸ್ವಾಧೀನಪಡಿಸಿಕೊಳ್ಳಲು ಅಮುಲ್ ಗೆ ದಾರಿ ಮಾಡಿಕೊಡಲು ನಂದಿನಿ ಉತ್ಪನ್ನಗಳ ಕೊರತೆ ಸೃಷ್ಟಿಸಲಾಗುತ್ತದೆ ಎಂಬ ಆರೋಪ ಕೇಳಿ ಬಂದಿದೆ. ಆದರೆ, ಬಿಜೆಪಿ ಸರ್ಕಾರವು ಆರೋಪ ನಿರಾಕರಿಸಿದ್ದು, ನಂದಿನಿಗೆ ಅಮುಲ್‌ನಿಂದ ಯಾವುದೇ ಬೆದರಿಕೆ ಇಲ್ಲ ಎಂದು ಹೇಳಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read