ಮೈಸೂರು : ಪಾಕಿಸ್ತಾನದ ವಿರುದ್ಧ ಯುದ್ಧ ಮಾಡುವ ಅಗತ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಪೆಹಲ್ಗಾಮ್ ದಾಳಿಯ ಹಿನ್ನೆಲೆಯಲ್ಲಿ ಪಾಕಿಸ್ತಾನದ ಮೇಲೆ ಯುದ್ಧ ಮಾಡುವ ಅಗತ್ಯವಿಲ್ಲ. ಆದರೆ ಬಿಗಿಯಾದ ಭದ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.
ಉಗ್ರರ ದಾಳಿಯ ಹಿನ್ನೆಲೆಯಲ್ಲಿ ಭದ್ರತಾ ವೈಫಲ್ಯತೆ ಇದೆ ಎಂದು ನಾನು ಆರಂಭದಲ್ಲೇ ಹೇಳಿದ್ದೆ. ಈಗ ಕೇಂದ್ರ ಸರ್ಕಾರವೂ ಅದನ್ನು ಒಪ್ಪಿಕೊಂಡಿದೆ.ನಾನು ಹೇಳಿದ್ದು ನಿಜವಾಗಿದೆ ಎಂದರು.ಭದ್ರತಾ ವ್ಯವಸ್ಥೆಯನ್ನು ಬಿಗಿ ಮಾಡಬೇಕು. ಜನರಿಗೆ ಭದ್ರತೆ ಇರಬೇಕು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು. . ಪುಲ್ವಾಮಾ ದಾಳಿಯ ಬಳಿಕ ಎಚ್ಚರಿಕೆಯಿಂದ ಇರಬೇಕಿತ್ತು. ಗುಪ್ತಚರ ಹಾಗೂ ಭದ್ರತೆಯ ವೈಫಲ್ಯ ಎದ್ದುಕಾಣುತ್ತಿದೆ ಎಂದರು.
ರಾಜ್ಯದಲ್ಲಿ ನೆಲೆಸಿರುವ ಪಾಕಿಸ್ತಾನಿ ಪ್ರಜೆಗಳನ್ನು ವಾಪಸ್ ಕಳುಹಿಸುವ ಸಂಬಂಧ ಕೇಂದ್ರಸರ್ಕಾರಕ್ಕೆ ಅಗತ್ಯ ಸಹಕಾರ ನೀಡುತ್ತೇವೆ. ಕೇಂದ್ರಕ್ಕೆ ಎಲ್ಲಾ ರೀತಿಯ ಮಾಹಿತಿಗಳನ್ನು ಒದಗಿಸುತ್ತೇವೆ ಎಂದರು.