HomeLatest NewsBIG NEWS: ಯಾರಿಂದಲೂ ಒಳ ಮೀಸಲಾತಿ ತಡೆಯಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ; 2 ತಿಂಗಳ ನಂತರ...

BIG NEWS: ಯಾರಿಂದಲೂ ಒಳ ಮೀಸಲಾತಿ ತಡೆಯಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ; 2 ತಿಂಗಳ ನಂತರ ಜಾರಿ ಭರವಸೆ

ಬೆಂಗಳೂರು: ಯಾರಿಂದಲೂ ಒಳ ಮೀಸಲಾತಿ ಜಾರಿ ತಡೆಯಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ವಿಧಾನಸೌಧದ ಆವರಣದಲ್ಲಿ ಸಮಾಜ ಕಲ್ಯಾಣ ಇಲಾಖೆ ಶನಿವಾರ ಆಯೋಜಿಸಿದ್ದ ಬಾಬೂ ಜಗಜೀವನ್ ರಾಮ್ ಅವರ 118ನೇ ಜನ್ಮದಿನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರ ಮಾತನಾಡಿ, ಯಾರು ಬೇಡವೆಂದರೂ ಒಳ ಮೀಸಲಾತಿ ಜಾರಿ ಮಾಡುವುದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ಎರಡು ತಿಂಗಳ ನಂತರ ಒಳ ಮೀಸಲಾತಿ ಜಾರಿ ಮಾಡಿಯೇ ಮಾಡುತ್ತೇವೆ ಎಂದು ಹೇಳಿದ್ದಾರೆ.

ಸುಪ್ರೀಂಕೋರ್ಟ್ ಆದೇಶ ಪಾಲಿಸುತ್ತೇವೆ. ಆಯೋಗದ ಅಧ್ಯಕ್ಷ ನಾಗಮೋಹನದಾಸ್ ಅವರು ಎರಡು ತಿಂಗಳ ಅವಧಿ ಕೇಳಿದ್ದಾರೆ. ನಂತರ ಪರಿಶಿಷ್ಟ ಗುಂಪಿನ ಯಾವ ಜಾತಿಗೂ ಅನ್ಯಾಯವಾಗದಂತೆ ಒಳ ಮೀಸಲಾತಿ ಜಾರಿ ಮಾಡುತ್ತೇವೆ ಎಂದು ಸಿಎಂ ಭರವಸೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular