BIG NEWS : ಸರ್ಕಾರಿ ನೌಕರರು, ತೆರಿಗೆದಾರರನ್ನು ಬಿಟ್ಟು ಬೇರೆ ಯಾರನ್ನೂ ‘BPL ಕಾರ್ಡ್’ ನಿಂದ ತೆಗೆಯಲ್ಲ : CM ಸಿದ್ದರಾಮಯ್ಯ ಸ್ಪಷ್ಟನೆ.!

ಬೆಂಗಳೂರು :   ಸರ್ಕಾರಿ ನೌಕರರು, ತೆರಿಗೆದಾರರನ್ನು ಬಿಟ್ಟು ಬೇರೆ ಯಾರನ್ನೂ ಬಿಪಿಎಲ್ ಕಾರ್ಡ್ ನಿಂದ ತೆಗೆಯಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ದೆಹಲಿಯಲ್ಲಿ ಸುದ್ದಿಗಾರರ  ಪ್ರಶ್ನೆಗಳಿಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದರು.ಸರ್ಕಾರಿ ನೌಕರರು, ತೆರಿಗೆದಾರರನ್ನು ಬಿಟ್ಟು ಬೇರೆಯಾರನ್ನೂ ಬಿಪಿಎಲ್ ಕಾರ್ಡಿನಿಂದ ತೆಗೆಯಬೇಡಿ ಎಂದು ಸೂಚಿಸಿದ್ದೇನೆ. ಬಿಜೆಪಿಯವರು ರಾಜಕೀಯಕ್ಕಾಗಿ ಈ ವಿಚಾರವನ್ನು ಪ್ರಸ್ತಾಪಿಸುತ್ತಿದ್ದಾರೆ. ಆಹಾರ ಭದ್ರತಾ ಕಾಯ್ದೆಯನ್ನು ಜಾರಿಗೆ ತಂದಿದ್ದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು. ಇದನ್ನು ರಾಜ್ಯಸಭೆಯಲ್ಲಿ ಮಂಡಿಸಿದಾಗ ಮುರಳಿ ಮನೋಹರ್ ಜೋಶಿ ಅವರು ಅದನ್ನು ವಿರೋಧಿಸಿ ಭಾಷಣ ಮಾಡಿದ್ದಾರೆ. ಅವರ ಭಾಷಣದಲ್ಲಿ ಇದು ಆಹಾರ ಭದ್ರತಾ ಕಾಯ್ದೆಯಲ್ಲ, ಮತ ಭದ್ರತಾ ಕಾಯ್ದೆ ಎಂದು ಕರೆದಿದ್ದರು. ಅಂದರೆ ಆಹಾರ ಭದ್ರತಾ ಕಾಯ್ದೆಗೆ ಅವರು ವಿರೋಧವಾಗಿದ್ದರು. ಇಂಥವರಿಗೆ ಮಾತನಾಡಲು ಯಾವ ನೈತಿಕ ಹಕ್ಕಿದೆ? ಕರ್ನಾಟಕದಲ್ಲಿ 7 ಕೆ.ಜಿ ಅಕ್ಕಿಯನ್ನು ಉಚಿತವಾಗಿ ಕೊಟ್ಟಿದ್ದು ನಮ್ಮ ಸರ್ಕಾರ. 7 ರಿಂದ 5 ಕೆ.ಜಿಗೆ ಇಳಿಸಿದ್ದು ಬಿ.ಎಸ್.ಯಡಿಯೂರಪ್ಪ. ಆಗ ಆರ್.ಅಶೋಕ್ ಅವರು ಸಚಿವ ಸಂಪುಟದಲ್ಲಿದ್ದರು. 2 ಕೆ.ಜಿಯನ್ನು ಕಡಿಮೆ ಮಾಡಿದಾಗ ಯಾಕೆ ಉಸಿರೆತ್ತಲಿಲ್ಲ?

ಆಹಾರ ಭದ್ರತಾ ಕಾಯ್ದೆಯನ್ನು ವಿರೋಧಿಸಿದ ಬಿಜೆಪಿ ಬಡವರ ಬಗ್ಗೆ ಮಾತನಾಡುತ್ತಾರೆ. ಆಹಾರ ಪದಾರ್ಥಗಳನ್ನು ಉಚಿತವಾಗಿ ಕೊಡಬೇಕೆಂದು ಯೋಜನೆ ಜಾರಿಗೆ ತಂದಿದ್ದು ನಾವು. ಸರ್ಕಾರಿ ನೌಕರರು, ತೆರಿಗೆದಾರರಿಗೆ ಬಿಪಿಎಲ್ ಕಾರ್ಡು ಕೊಡಬಾರದು ಎಂದು ಹೇಳಿದ್ದೇವೆ. ಈ ಯೋಜನೆ ಮಾಡಿರುವುದು ಬಡವರಿಗಾಗಿ. ಸರ್ಕಾರಿ ನೌಕರರು ಬಿಪಿಎಲ್ ಗೆ ಅರ್ಹರೇ? ನಾವು 5 ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ. ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಮಾಡಿದ್ದಾರಾ? ಎಸ್.ಸಿ.ಎಸ್.ಪಿ/ಟಿಎಸ್.ಪಿ ಕಾಯ್ದೆಯನ್ನು ಎಲ್ಲಿಯಾದರೂ ಜಾರಿಗೆ ತಂದಿದ್ದಾರೆಯೇ? ಬಿಜೆಪಿ ನಾಯಕರಿಗೆ ಬಡವರ ಕುರಿತು ಯಾವ ಕಾಳಜಿಯೂ ಇಲ್ಲ. ಗ್ಯಾರಂಟಿಗಳಿಗೆ ದುಡ್ಡಿಲ್ಲ ಎಂದು ಬಿಜೆಪಿ ಬಳಿ ಸಾಲ ಕೇಳಿಲ್ಲ. ಯಾವುದಕ್ಕೆ ಹಣವಿಲ್ಲ ಎಂದು ಹೇಳಿ? ಬಿಜೆಪಿಯವರು ರಾಜಕೀಯವಾಗಿ ಮಾತನಾಡುತ್ತಾರೆ ಎಂದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read