HomeLatest Newsವಿಧಾನಸಭೆಯಲ್ಲಿ ರಾಜ್ಯಪಾಲರ ನಡವಳಿಕೆ ಬಗ್ಗೆ ಯಾರೂ ಮಾತನಾಡಬಾರದು: ಸ್ಪೀಕರ್ ಯು.ಟಿ. ಖಾದರ್ ರೂಲಿಂಗ್

ವಿಧಾನಸಭೆಯಲ್ಲಿ ರಾಜ್ಯಪಾಲರ ನಡವಳಿಕೆ ಬಗ್ಗೆ ಯಾರೂ ಮಾತನಾಡಬಾರದು: ಸ್ಪೀಕರ್ ಯು.ಟಿ. ಖಾದರ್ ರೂಲಿಂಗ್

ಬೆಂಗಳೂರು: ವಿಧಾನಸಭೆಯಲ್ಲಿ ಗವರ್ನರ್ ಕುರಿತಾದ ಚರ್ಚೆಗೆ ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ಬ್ರೇಕ್ ಹಾಕಿದ್ದಾರೆ. ಗದ್ದಲ ತಡೆಗೆ ರೂಲಿಂಗ್ ನೀಡಿದ್ದು, ಸುಗಮ ಕಲಾಪಕ್ಕೆ ಕ್ರಮ ಕೈಗೊಂಡಿದ್ದಾರೆ.

ರಾಜ್ಯ ವಿಧಾನ ಮಂಡಲ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಉಭಯ ಸದನಗಳ ಉದ್ದೇಶಿಸಿ ಭಾಷಣ ಮಾಡಿದ ಬಳಿಕ ಸದನದಲ್ಲಿ ನಡೆದ ಘಟನೆ ಚರ್ಚೆಗಳ ಕುರಿತು ಸದಸ್ಯರೆಲ್ಲರೂ ಆತ್ಮಾವಲೋಕನ ಮಾಡಿಕೊಳ್ಳಬೇಕು. ಇನ್ನು ಮುಂದೆ ರಾಜ್ಯಪಾಲರ ನಡವಳಿಕೆ ಬಗ್ಗೆ ಯಾರೂ ಮಾತನಾಡಬಾರದು ಎಂದು ಸ್ಪೀಕರ್ ಯು.ಟಿ. ಖಾದರ್ ರೂಲಿಂಗ್ ನೀಡಿದ್ದಾರೆ.

ಇದರೊಂದಿಗೆ ಅಧಿವೇಶನದ ಆರಂಭದ ದಿನದಿಂದಲೂ ಉಭಯ ಸದನಗಳಲ್ಲಿ ಆಡಳಿತ ಮತ್ತು ಪ್ರತಿ ಪಕ್ಷಗಳ ನಡುವೆ ತೀವ್ರ ಜಟಾಪಟಿ, ಗದ್ದಲ ಮತ್ತು ಕೋಲಾಹಲದೊಂದಿಗೆ ಕಲಾಪ ಬಲಿ ತೆಗೆದುಕೊಳ್ಳುತ್ತಿದ್ದ ವಿಷಯಕ್ಕೆ ಸ್ಪೀಕರ್ ಯು.ಟಿ. ಖಾದರ್ ತೆರೆ ಎಳೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular