HomeKarnatakaಪಕ್ಷದ ಬಗ್ಗೆ ಬಹಿರಂಗ ಹೇಳಿಕೆ ನೀಡುವಂತಿಲ್ಲ : ಸಚಿವರು, ಶಾಸಕರಿಗೆ ಡಿಸಿಎಂ ಡಿಕೆಶಿ ಖಡಕ್ ಸೂಚನೆ

ಪಕ್ಷದ ಬಗ್ಗೆ ಬಹಿರಂಗ ಹೇಳಿಕೆ ನೀಡುವಂತಿಲ್ಲ : ಸಚಿವರು, ಶಾಸಕರಿಗೆ ಡಿಸಿಎಂ ಡಿಕೆಶಿ ಖಡಕ್ ಸೂಚನೆ

ಬೆಂಗಳೂರು : ಪಕ್ಷ, ಸರ್ಕಾರದ ಬಗ್ಗೆ ಯಾವುದೇ ಬಹಿರಂಗ ಹೇಳಿಕೆ ನೀಡುವಂತಿಲ್ಲ ಎಂದು ಸಚಿವರು, ಶಾಸಕರಿಗೆ ಡಿಸಿಎಂ ಡಿಕೆ ಶಿವಕುಮಾರ್ ಖಡಕ್ ಸೂಚನೆ ನೀಡಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು  ‘ಪಕ್ಷದ ಯಾವುದೇ ವಿಚಾರದ ಬಗ್ಗೆ ಬಹಿರಂಗ ಚರ್ಚೆ ಮಾಡಬಾರದು, ಅಧಿಕಾರ ಹಂಚಿಕೆ, ಬೆಂಬಲ & ಇತರೆ ವಿಚಾರಗಳ ಕುರಿತು ಯಾವುದೇ ಶಾಸಕರು ಮಾಧ್ಯಮಗಳ ಮುಂದೆ ಮಾತನಾಡಬಾರದು ಎನ್ನುವ ಮೂಲಕ ಕಾಂಗ್ರೆಸ್ ಎಂಎಲ್ಎಗಳಿಗೆ’ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ ನೀಡಿದ್ದಾರೆ

ಪಕ್ಷ ಹಾಗೂ ಸರ್ಕಾರದ ಆಂತರಿಕ ವಿಚಾರಗಳು ಏನೇ ಇದ್ದರೂ ಶಾಸಕರು ಮುಖ್ಯಮಂತ್ರಿಗಳು ಹಾಗೂ ನನ್ನ ಬಳಿ ಚರ್ಚೆ ಮಾಡಬಹುದು. ಆದರೆ ಯಾವುದೇ ಕಾರಣಕ್ಕೂ ಮಾಧ್ಯಮಗಳ ಮುಂದೆ ಮಾತನಾಡಬಾರದು” ಎಂದು ಡಿಕೆಶಿ ಖಡಕ್ ಸೂಚನೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular