BREAKING: ಟ್ರಂಪ್, ಮೋದಿ ನಡುವೆ ಯಾವುದೇ ದೂರವಾಣಿ ಕರೆ ಇಲ್ಲ: ಅಮೆರಿಕ ಅಧ್ಯಕ್ಷರ ಹೇಳಿಕೆ ಸಂಪೂರ್ಣ ತಿರಸ್ಕರಿಸಿದ ಭಾರತ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ತಮ್ಮೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ್ದಾರೆ. ನವದೆಹಲಿ ರಷ್ಯಾದ ತೈಲ ಖರೀದಿಯನ್ನು ನಿಲ್ಲಿಸಲಿದೆ ಎಂದು ಭರವಸೆ ನೀಡಿದ್ದಾರೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಯನ್ನು ಭಾರತ ಗುರುವಾರ ಸಂಪೂರ್ಣವಾಗಿ ತಿರಸ್ಕರಿಸಿದೆ. ನಿನ್ನೆ ಇಬ್ಬರು ನಾಯಕರ ನಡುವೆ ಯಾವುದೇ ದೂರವಾಣಿ ಕರೆ ನಡೆದಿಲ್ಲ ಎಂದು ಸರ್ಕಾರ ಗುರುವಾರ ತಿಳಿಸಿದೆ.

ಗುರುವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ವಿದೇಶಾಂಗ ಸಚಿವಾಲಯ(MEA) ಟ್ರಂಪ್ ಅವರ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದೆ.

“ಇಬ್ಬರು ನಾಯಕರ ನಡುವೆ ದೂರವಾಣಿ ಅಥವಾ ಸಂಭಾಷಣೆಯ ವಿಷಯದಲ್ಲಿ, ನಿನ್ನೆ ಇಬ್ಬರು ನಾಯಕರ ನಡುವೆ ಯಾವುದೇ ದೂರವಾಣಿ ಕರೆ ನಡೆದಿಲ್ಲ” ಎಂದು ಸ್ಪಷ್ಟಪಡಿಸಿದೆ.

ಶ್ವೇತಭವನದ ಮಾಧ್ಯಮಗೋಷ್ಠಿಯಲ್ಲಿ ಡೊನಾಲ್ಡ್ ಟ್ರಂಪ್ ಬುಧವಾರ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರು ದೂರವಾಣಿ ಸಂಭಾಷಣೆಯಲ್ಲಿ ರಷ್ಯಾದಿಂದ ತೈಲ ಖರೀದಿಯನ್ನು ನಿಲ್ಲಿಸುವುದಾಗಿ ಭರವಸೆ ನೀಡಿದ್ದಾರೆ ಮತ್ತು ಉಕ್ರೇನ್‌ನಲ್ಲಿ ಯುದ್ಧದ ಕುರಿತು ಮಾಸ್ಕೋವನ್ನು ಪ್ರತ್ಯೇಕಿಸುವ ಪ್ರಯತ್ನದಲ್ಲಿ ಇದು “ದೊಡ್ಡ ಹೆಜ್ಜೆ” ಎಂದು ಹೇಳಿದ್ದಾರೆ.

ಭಾರತವು ರಷ್ಯಾದ ಕಚ್ಚಾ ತೈಲವನ್ನು ನಿರಂತರವಾಗಿ ಆಮದು ಮಾಡಿಕೊಳ್ಳುತ್ತಿರುವ ಬಗ್ಗೆ ಪ್ರಧಾನಿ ಮೋದಿ ಅವರೊಂದಿಗೆ ಕಳವಳ ವ್ಯಕ್ತಪಡಿಸಿರುವುದಾಗಿ ಟ್ರಂಪ್ ಹೇಳಿದ್ದರು.

ರಿಪಬ್ಲಿಕನ್ ನಾಯಕ ಟ್ರಂಪ್ ಅವರನ್ನು ನೇರವಾಗಿ ಉದ್ದೇಶಿಸದೆ ಆ ಹೇಳಿಕೆಯನ್ನು ನಿರಾಕರಿಸಿದ ವಿದೇಶಾಂಗ ಸಚಿವಾಲಯ, ಭಾರತದ ಇಂಧನ ನಿರ್ಧಾರಗಳು ಗ್ರಾಹಕರ ಹಿತಾಸಕ್ತಿಗಳಿಂದ ಮಾರ್ಗದರ್ಶಿಸಲ್ಪಟ್ಟಿವೆ ಎಂದು ಹಿಂದಿನ ಹೇಳಿಕೆಯಲ್ಲಿ ಪುನರುಚ್ಚರಿಸಿತ್ತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read