HomeKarnatakaBREAKING : ನಾಳೆ ಬೆಂಗಳೂರಿನಲ್ಲಿ ಪ್ರಧಾನಿ ಮೋದಿ 'ರೋಡ್ ಶೋ' ಇಲ್ಲ : ಕೇಂದ್ರ ಸಚಿವೆ...

BREAKING : ನಾಳೆ ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ‘ರೋಡ್ ಶೋ’ ಇಲ್ಲ : ಕೇಂದ್ರ ಸಚಿವೆ ‘ಶೋಭಾ ಕರಂದ್ಲಾಜೆ’ ಸ್ಪಷ್ಟನೆ

ಬೆಂಗಳೂರು : ನಾಳೆ ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ರೋಡ್ ಶೋ ಇರಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸ್ಪಷ್ಟನೆ ನೀಡಿದ್ದಾರೆ.

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು ಬೆಂಗಳೂರಿನ ಇಸ್ರೋ ಕೇಂದ್ರಕ್ಕೆ ಭೇಟಿ ನೀಡುವ ಅವರು ವಿಜ್ಞಾನಿಗಳನ್ನು ಅಭಿನಂದಿಸಲಿದ್ದಾರೆ. ನಾಳೆ ಯಾವುದೇ ರೀತಿಯ ರೋಡ್ ಶೋ ಇರಲ್ಲ, ಈ ಬಗ್ಗೆ ಇದುವರೆಗೆ ಯಾವುದೇ ಆಯೋಜನೆ ಆಗಿಲ್ಲ ಎಂದರು.

ಪ್ರಧಾನಿ ಮೋದಿ ಸ್ವಾಗತಕ್ಕೆ ಬಿಜೆಪಿ ಎಲ್ಲಾ ರೀತಿಯ ಸಿದ್ದತೆ ನಡೆಸಿದೆ. ನಾಳೆ ಏರ್ ಪೋರ್ಟ್ ಗೆ ಆಗಮಿಸಲಿರುವ ಪ್ರಧಾನಿ ಮೋದಿಗೆ ಬಿಜೆಪಿ ಭರ್ಜರಿ ಸ್ವಾಗತ ಕೋರಲಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಂದ್ರಯಾನ -3 ಯಶಸ್ವಿ ಹಿನ್ನೆಲೆಯಲ್ಲಿ ನಾಳೆ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನ ಇಸ್ರೋ ಕೇಂದ್ರಕ್ಕೆ ಆಗಮಿಸಲಿದ್ದು, ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಲಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ಆಗಮನ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಕೆಲ ಮಾರ್ಗಗಳನ್ನು ಬದಲಾವಣೆ ಮಾಡಲಾಗುತ್ತಿದೆ. ಸಂಚಾರ ಮಾರ್ಗದಲ್ಲಿ ಕೆಲ ಬದಲಾವಣೆಗಳಾಗಿದ್ದು, ಪರ್ಯಾಯ ಮಾರ್ಗ ಅನುಸರಿಸುವಂತೆ ಸಂಚಾರಿ ಪೊಲೀಸರು ಸೂಚಿಸಿದ್ದಾರೆ.
ಬೆಳಿಗ್ಗೆ 4:30ರಿಂದ ಬೆಳಿಗ್ಗೆ 9:30ರವರೆಗೆ ಸಂಚಾರ ಬದಲಾವಣೆ ಮಾಡಲಾಗಿದೆ. ಹಳೇ ಏರ್ ಪೋರ್ಟ್ ರಸ್ತೆ, ಹಳೇ ಮದ್ರಾಸ್ ರಸ್ತೆ, ಎಂ.ಜಿ.ರಸ್ತೆ, ಕಬ್ಬನ್ ರಸ್ತೆ, ರಾಜಭವನ ರಸ್ತೆ, ಬಳ್ಳಾರಿ ರಸ್ತೆ (ಮೇಖ್ರೀ ಸರ್ಕಲ್) ಸಿ.ವಿ.ರಾಮನ್ ರಸ್ತೆ, ಯಶವಂತಪುರ ಫ್ಲೈ ಓವರ್, ತುಮಕೂರು ರಸ್ತೆ (ಯಶವಂತಪುರದಿಂದ ನಾಗಸಂದ್ರದವರೆಗೆ) ಮಾಗಡಿ ರಸ್ತೆ, ಗೊರಗುಂಟೆ ಪಾಳ್ಯ ಜಂಕ್ಷನ್ ನಿಂದ ಸೋಮನಹಳ್ಳಿ, ಗುಬ್ಬಿ ತೋಟದಪ್ಪ ರಸ್ತೆ, ಜಾಲಹಳ್ಳಿ ಕ್ರಾಸ್ ರಸ್ತೆಗಳಲ್ಲಿ ಸಂಚಾರ ಬದಲಾವಣೆ ಮಾಡಲಾಗಿದೆ.

ಈ ಮಾರ್ಗದಲ್ಲಿ ನಾಳೆ ಮುಂಜಾನೆ 4ರಿಂದ ಬೆಳಿಗ್ಗೆ 11 ಗಂಟೆಯವರೆಗೆ ಭಾರಿ ವಾಹನಗಳ ಸಂಚಾರಕ್ಕೆ ನಿರ್ಬಂಧಿಸಲಾಗಿದೆ. ಇದಕ್ಕೆ ಸಾರ್ವಜನಿಕರು ಸಹಕರಿಸುವಂತೆ ಬೆಂಗಳೂರು ನಗರ ಪೊಲೀಸರು ಮನವಿ ಮಾಡಿದ್ದಾರೆ.

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular