HomeIndiaNDA ಮೈತ್ರಿಕೂಟ ಸೇರುವುದಿಲ್ಲ, 234 ಕ್ಷೇತ್ರದಲ್ಲೂ ಸ್ಪರ್ಧೆ: ಟಿವಿಕೆ

NDA ಮೈತ್ರಿಕೂಟ ಸೇರುವುದಿಲ್ಲ, 234 ಕ್ಷೇತ್ರದಲ್ಲೂ ಸ್ಪರ್ಧೆ: ಟಿವಿಕೆ

ತಮಿಳುನಾಡು ವಿಧಾನಸಭೆ ಚುನಾವಣೆ 2026 ಮುಂದಿನ ವಾರ ಘೋಷಣೆಯಾಗುವ ಸಾಧ್ಯತೆ ಇದೆ. ನಟ ವಿಜಯ್ ಸ್ಥಾಪನೆ ಮಾಡಿರುವ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಕುರಿತು ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆ ನಡೆಯುತ್ತಿದೆ.

ತಮಿಳುನಾಡಿನ 234 ಸೀಟುಗಳಿಗೆ ಮಾರ್ಚ್ ಅಂತ್ಯ ಅಥವ ಏಪ್ರಿಲ್‌ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ ಎಂದು ಅಂದಾಜಿಸಲಾಗಿದೆ. ಟಿವಿಕೆ ಪಕ್ಷ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಸೇರಲಿದೆ ಎಂಬ ಸುದ್ದಿಗಳು ಹಲವು ದಿನಗಳಿಂದ ಕೇಳಿ ಬರುತ್ತಿವೆ.

ಆದರೆ ಈಗ ಟಿವಿಕೆ ಪಕ್ಷ ಈ ಕುರಿತು ಸ್ಪಷ್ಟನೆ ನೀಡಿದೆ. ವಿಜಯ್ ಅವರ ಟಿವಿಕೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 234 ಸೀಟುಗಳಲ್ಲಿಯೂ ಸ್ಪರ್ಧೆ ಮಾಡಲಿದೆ. ಆದರೆ ಎನ್‌ಡಿಎ ಮೈತ್ರಿಕೂಟ ಸೇರಲಿದೆ ಎಂಬುದು ಕೇವಲ ವದಂತಿ ಎಂದು ಹೇಳಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಾರ್ಚ್ 13ರಂದು ಟಿವಿಕೆ ಪಕ್ಷದ ಮಹತ್ವದ ಸಭೆ ನಡೆದಿದೆ. ಈ ಸಭೆಯ ಬಳಿಕ ಪಕ್ಷ ಎನ್‌ಡಿಎ ಮೈತ್ರಿಕೂಟ ಸೇರುವುದು ಊಹಾಪೋಹ. ಈ ಬಗ್ಗೆ ಯಾವುದೇ ಚಿಂತನೆ ಇಲ್ಲ. ಈ ಕುರಿತಾದ ಮಾಧ್ಯಮ ವರದಿಗಳು ಕೇವಲ ವದಂತಿಗಳು ಎಂದು ಪಕ್ಷ ತಿಳಿಸಿದೆ.

ಎಐಎಡಿಎಂಕೆ ಈಗಾಗಲೇ ಎನ್‌ಡಿಎ ಮೈತ್ರಿಕೂಟದಲ್ಲಿದೆ. ಆದರೆ ಹಲವಾರು ದಿನಗಳಿಂದ ಟಿವಿಕೆ ಎನ್‌ಡಿಎ ಮೈತ್ರಿಕೂಟ ಸೇರಲಿದೆ ಎಂಬ ಸುದ್ದಿಗಳು ಹಬ್ಬಿದ್ದವು. ಆದರೆ ಇದನ್ನು ಟಿವಿಕೆ ಪಕ್ಷ ತಳ್ಳಿ ಹಾಕಿದೆ.

ವಿಜಯ್ ಈಗಾಗಲೇ ತಮಿಳುನಾಡು ವಿಧಾನಸಭಾ ಚುನಾವಣೆಗೆ ತಮ್ಮ ಪಕ್ಷದ ಟಿಕೆಟ್ ಆಕಾಂಕ್ಷಿಗಳನ್ನು ಸಂದರ್ಶಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದಾರೆ. ಪಕ್ಷವು ಟಿಕೆಟ್ ಆಕಾಂಕ್ಷಿಗಳಿಂದ ಅರ್ಜಿಗಳನ್ನು ಸ್ವೀಕರಿಸುತ್ತಲೇ ಇದ್ದು, ಅವುಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಟಿವಿಕೆ ಜಂಟಿ ಪ್ರಧಾನ ಕಾರ್ಯದರ್ಶಿ ಸಿಟಿಆರ್ ನಿರ್ಮಲ್‌ಕುಮಾರ್ ತಿಳಿಸಿದ್ದಾರೆ.

ಮಾರ್ಚ್ 10ರಂದು ವಿಜಯ್ ವಿವಿಧ ಜಿಲ್ಲೆಗಳ ಟಿಕೆಟ್ ಆಕಾಂಕ್ಷಿಗಳೊಂದಿಗೆ ಮುಖಾಮುಖಿ ಸಂದರ್ಶನಗಳನ್ನು ನಡೆಸಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಇಚ್ಛಿಸುವ ಒಟ್ಟು 55 ಕಾರ್ಯಕರ್ತರನ್ನು ಮೊದಲ ದಿನ ವಿಜಯ್ ಸಂದರ್ಶನ ಮಾಡಿದ್ದಾರೆ.

ಟಿವಿಕೆ ಪಕ್ಷವನ್ನು ಸ್ಥಾಪನೆ ಮಾಡಿದಾಗಲೇ ವಿಜಯ್ ಯುಪಿಎ, ಎನ್‌ಡಿಎ ಮೈತ್ರಿಕೂಟಕ್ಕೆ ಪಕ್ಷ ಸೇರುವುದಿಲ್ಲ. ಇಬ್ಬರು ಸಹ ನಮಗೆ ಸಮಾನ ಎದುರಾಳಿಗಳು ಎಂದು ಹೇಳಿದ್ದರು. ಆದರೆ ಅವರು ಎನ್‌ಡಿಎ ಮೈತ್ರಿಕೂಟ ಸೇರಲಿದ್ದಾರೆ ಎಂಬ ಸುದ್ದಿಗಳು ಪದೇ ಪದೇ ಕೇಳಿ ಬರುತ್ತಿವೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular