HomeKarnatakaವಿದ್ಯುತ್ ಪೂರೈಕೆ ಖಾಸಗೀಕರಣ ಇಲ್ಲ: ಸಚಿವ ಕೆ.ಜೆ. ಜಾರ್ಜ್

ವಿದ್ಯುತ್ ಪೂರೈಕೆ ಖಾಸಗೀಕರಣ ಇಲ್ಲ: ಸಚಿವ ಕೆ.ಜೆ. ಜಾರ್ಜ್

ಶಿವಮೊಗ್ಗ: ವಿದ್ಯುತ್ ಸರಬರಾಜು ಖಾಸಗಿಕರಣ ಕೆಲವು ರಾಜ್ಯಗಳಲ್ಲಿ ಈಗಾಗಲೇ ಜಾರಿಯಾಗಿದೆ. ರಾಜ್ಯದಲ್ಲಿ ಎಸ್ಕಾಂ ಗಳ ಖಾಸಗೀಕರಣಕ್ಕೆ ನಾವು ಸಿದ್ಧವಿಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ.

ಮಂಗಳವಾರ ಶಿವಮೊಗ್ಗದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವರು, ವಿಧಾನಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಅವರ ಪ್ರಶ್ನೆಗೆ ಉತ್ತರಿಸಿ ಖಾಸಗೀಕರಣ ಸಂಬಂಧ ಈಗಾಗಲೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ವಿದ್ಯುತ್ ಖಾಸಗೀಕರಣ ಪ್ರಸ್ತಾಪ 2003ರಲ್ಲಿ ಕೇಂದ್ರ ಸರ್ಕಾರ ತಂದಿತ್ತು. ಕೆಲವು ರಾಜ್ಯಗಳಲ್ಲಿ ಈಗಾಗಲೇ ಜಾರಿಯಾಗಿದೆ. ಹಳೆಯ ಪ್ರಸ್ತಾವನೆ ಇಟ್ಟುಕೊಂಡು ಟಾಟಾ ಕಂಪನಿಯವರು ಕೆಇಆರ್‌ಸಿಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಇದಕ್ಕೆ ಸರ್ಕಾರದಿಂದ ಆಕ್ಷೇಪಣೆ ಸಲ್ಲಿಸಲು ಅವಕಾಶವಿಲ್ಲದ ಕಾರಣದಿಂದ ಎಸ್ಕಾಂಗಳ ಮೂಲಕ ಆಕ್ಷೇಪಣೆ ಸಲ್ಲಿಸಲಾಗಿದೆ. ವಿದ್ಯುತ್ ಪೂರೈಕೆ ಖಾಸಗೀಕರಣ ಮಾಡಲು ನಾವು ಸಿದ್ಧರಿಲ್ಲ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular