ಶಿವಮೊಗ್ಗ : ಜಿಲ್ಲೆಯ ಸಾಗರ ತಾಲ್ಲೂಕಿನ ಬೇಸೂರು ಗ್ರಾಮದಲ್ಲಿ ಪರಮಾಣು ವಿದ್ಯುತ್ ಸ್ಥಾವರ ಸ್ಥಾಪನೆಯಾಗಲಿದೆ ಎಂಬ ಸುದ್ದಿಯನ್ನು ಶಿವಮೊಗ್ಗ ಜಿಲ್ಲಾಧಿಕಾರಿಗಳಾದ ಹೇಮಂತ್ ಎನ್ ನಿರಾಕರಿಸಿದ್ದಾರೆ.
ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಎನ್‌ಟಿಪಿಸಿ (NTPC) ಸಂಸ್ಥೆಯು ಬೇಸೂರು ಗ್ರಾಮದಲ್ಲಿ ಪರಮಾಣು ವಿದ್ಯುತ್ ಸ್ಥಾವರ ಸ್ಥಾಪಿಸಲು ಜಮೀನು ಗುರುತಿಸಿದೆ ಮತ್ತು ಈ ಸಂಬಂಧ ಪ್ರಕ್ರಿಯೆಗಳು ನಡೆಯುತ್ತಿವೆ ಎಂಬ ಸುದ್ದಿ ವ್ಯಾಪಕವಾಗಿ ಹರಿದಾಡುತ್ತಿತ್ತು. ಈ ಸುದ್ದಿಯಿಂದಾಗಿ ಸ್ಥಳೀಯ ಗ್ರಾಮಸ್ಥರು ಹಾಗೂ ಸಾರ್ವಜನಿಕರು ಆತಂಕಕ್ಕೆ ಒಳಗಾಗಿರುವುದು ಗಮನಕ್ಕೆ ಬಂದಿದೆ.ಪರಮಾಣು ವಿದ್ಯುತ್ ಸ್ಥಾವರ ಸ್ಥಾಪಿಸುವ ಉದ್ದೇಶದಿಂದ ಶಿವಮೊಗ್ಗ ಜಿಲ್ಲಾಡಳಿತದಿಂದ ಸರ್ಕಾರಕ್ಕೆ ಯಾವುದೇ ರೀತಿಯ ಪ್ರಸ್ತಾವನೆಯನ್ನು ಸಲ್ಲಿಸಲಾಗಿಲ್ಲ.
ಜಮೀನು ಗುರುತಿಸುವಿಕೆ ಅಥವಾ ಸ್ಥಾವರ ಸ್ಥಾಪನೆಯ ಕ್ರಮಗಳು ನಡೆಯುತ್ತಿವೆ ಎಂಬುದು ಕೇವಲ ವದಂತಿಯಾಗಿದ್ದು, ಸಾರ್ವಜನಿಕರು ಅನಾವಶ್ಯಕವಾಗಿ ಆತಂಕಕ್ಕೊಳಗಾಗುವ ಅಗತ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.
ಮೇ 5 ಮತ್ತು 6 ರಂದು ನಗರದಲ್ಲಿ ಕುಡಿಯುವ ನೀರು ವ್ಯತ್ಯಯ
ಶಿವಮೊಗ್ಗ : ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿ ಕ್ಲಾರಿಪ್ಲೋಕ್ಯೂಲೇಟರ್ ದುರಸ್ಥಿ ಕಾಮಗಾರಿ ಇರುವುದರಿಂದ ಮೇ 05 ಮತ್ತು 06 ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜು ವ್ಯತ್ಯಯವಾಗುತ್ತಿದ್ದು, ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಕನನೀಸ ಮತ್ತು ಒಚ ಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಶಿವಮೊಗ್ಗ : ಮೆಸ್ಕಾಂ ಜನ ಸಂಪರ್ಕ ಸಭೆ
ಶಿವಮೊಗ್ಗ : ಶಿವಮೊಗ್ಗ ಮೆಸ್ಕಾಂ ನಗರ ಉಪವಿಭಾಗ-02 , ಎನ್.ಟಿ.ರಸ್ತೆ, ನ್ಯೂಮಂಡ್ಲಿ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಛೇರಿಯಲ್ಲಿ ಮೇ 7. ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನ ಸಂಪರ್ಕ ಸಭೆ ನಡೆಯಲ್ಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದಾರೆ, ಈ ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

