ಸುವರ್ಣ ಸೌಧದಿಂದ ಸಾವರ್ಕರ್ ಫೋಟೋ ತೆಗೆಯುವ ಪ್ರಸ್ತಾವ ಬಂದಿಲ್ಲ : ಸ್ಪೀಕರ್ U.T ಖಾದರ್ ಸ್ಪಷ್ಟನೆ

ಬೆಳಗಾವಿ : ಸುವರ್ಣ ಸೌಧದಿಂದ ಸಾವರ್ಕರ್ ಫೋಟೋ ತೆಗೆಯುವ ಪ್ರಸ್ತಾವ ಬಂದಿಲ್ಲ ಎಂದು ಸ್ಪೀಕರ್ ಯುಟಿ ಖಾದರ್ ಸ್ಪಷ್ಟನೆ ನೀಡಿದ್ದಾರೆ.

ಸಾವರ್ಕರ್ ಭಾವಚಿತ್ರ ತೆರವುಗೊಳಿಸಬೇಕು ಎಂದು ಕಾಂಗ್ರೆಸ್ನ ಹಲವು ನಾಯಕರು ಆಗ್ರಹಿಸಿದ್ದರು. ಆದರೆ ಸದ್ಯಕ್ಕೆ ಅಂತಹ ಯಾವುದೇ ಪ್ರಸ್ತಾಪ ನಮಗೆ ಬಂದಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅವರವರ ಹೇಳಿಕೆ ನೀಡಲು ಎಲ್ಲರಿಗೂ ಅವಕಾಶವಿದೆ. ಯಾವುದೇ ವಿಚಾರವಿದ್ದರೂ ಸಂವಿಧಾನ ಬದ್ಧವಾಗಿ ಕರ್ತವ್ಯ ನಿರ್ವಹಿಸುವೆ ಎಂದು ಖಾದರ್ ಹೇಳಿದ್ದಾರೆ.

ಸುಭಾಷ್ ಚಂದ್ರ ಬೋಸ್, ಬಿ.ಆರ್.ಅಂಬೇಡ್ಕರ್, ಬಸವಣ್ಣ, ಮಹಾತ್ಮ ಗಾಂಧಿ ಮತ್ತು ವಲ್ಲಭಭಾಯಿ ಪಟೇಲ್ ಅವರ ಭಾವಚಿತ್ರಗಳ ಜೊತೆಗೆ ಸಾವರ್ಕರ್ ಅವರ ಭಾವಚಿತ್ರಗಳನ್ನು ಕಳೆದ ವರ್ಷ ಡಿಸೆಂಬರ್ 19 ರಂದು ಅಂದಿನ ಬಿಜೆಪಿ ಸರ್ಕಾರ ಅನಾವರಣಗೊಳಿಸಿತ್ತು. ಇದರಲ್ಲಿ ಸಾವರ್ಕರ್ ಫೋಟೋ ತೆಗೆಯಬೇಕೆಂದು ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದಾರೆ ಎಂಬ ವದಂತಿ ಹಬ್ಬಿತ್ತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read