HomeKarnatakaಕಾಂಗ್ರೆಸ್‌ನಲ್ಲಿ ಯಾವುದೇ ಬಂಡಾಯವಿಲ್ಲ: ಎಸ್ಎಸ್ ಮಲ್ಲಿಕಾರ್ಜುನ

ಕಾಂಗ್ರೆಸ್‌ನಲ್ಲಿ ಯಾವುದೇ ಬಂಡಾಯವಿಲ್ಲ: ಎಸ್ಎಸ್ ಮಲ್ಲಿಕಾರ್ಜುನ

ದಾವಣಗೆರೆ ದಕ್ಷಿಣದ ಉಪ ಚುನಾವಣೆಗೆ ಅಂತಿಮವಾಗಿ ಕಾಂಗ್ರೆಸ್ ಸಮರ್ಥ ಶಾಮನೂರು ಅಭ್ಯರ್ಥಿ ಎಂದು ಘೋಷಣೆ ಮಾಡಿದೆ. ಶಾಮನೂರು ಶಿವಶಂಕರಪ್ಪ ಮೊಮ್ಮಗನಿಗೆ ಟಿಕೆಟ್ ನೀಡಿದ್ದು, ಕಾಂಗ್ರೆಸ್‌ನಲ್ಲಿ ಬಂಡಾಯಕ್ಕೆ ಕಾರಣವಾಗಿದೆಯೇ? ಎಂಬುದು ಸದ್ಯದ ಪ್ರಶ್ನೆ.

ಉಪ ಚುನಾವಣೆ ಕುರಿತು ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಮಾತನಾಡಿ, “ದಾವಣಗೆರೆ ದಕ್ಷಿಣದ ಟಿಕೆಟ್ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ. ಎಲ್ಲರೂ ಒಗ್ಗಟ್ಟಿನಿಂದ ಚುನಾವಣೆ ಎದುರಿಸಲು ಚರ್ಚೆಯಾಗಿದ್ದು, ಒಟ್ಟಾಗಿ ಕೆಲಸ ಮಾಡಿ ಚುನಾವಣೆ ಗೆಲ್ಲುತ್ತೇವೆ” ಎಂದು ಹೇಳಿದ್ದಾರೆ.

ಸಮರ್ಥ ಶಾಮನೂರು ಶುಕ್ರವಾರ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಭಾನುವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎಸ್.ಎಸ್.ಮಲ್ಲಿಕಾರ್ಜುನಗೆ ಕಾಂಗ್ರೆಸ್ ಬಿಫಾರಂ ನೀಡಿದ್ದು, ಸೋಮವಾರ ಕಾಂಗ್ರೆಸ್‌ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆದರೆ ಸಾದಿಕ್ ಪೈಲ್ವಾನ್ ಶುಕ್ರವಾರ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಈ ಕುರಿತು ಮಾತನಾಡಿದ ಎಸ್.ಎಸ್.ಮಲ್ಲಿಕಾರ್ಜುನ, “ಸಾದಿಕ್ ಪೈಲ್ವಾನ್ ಹೊಸಬರೇನು ಅಲ್ಲ. ನಮ್ಮವರೇ ಆಗಿದ್ದು, ಎಲ್ಲರ  ಜೊತೆ ಮಾತನಾಡುತ್ತೇನೆ” ಎಂದು ಹೇಳಿದ್ದಾರೆ.

ದಾವಣಗೆರೆ ದಕ್ಷಿಣ ಉಪ ಚುನಾವಣೆ ನಾಮಪತ್ರ ವಾಪಸ್ ಪಡೆಯಲು ಮಾರ್ಚ್ 26 ಕೊನೆಯ ದಿನವಾಗಿದೆ. “ಸಾದಿಕ್ ಪೈಲ್ವಾನ್ ಈಗ ಸಿಟ್ಟಿನಲ್ಲಿದ್ದಾರೆ. ನಾನು ಕರೆ ಮಾಡಿದರೂ ಸ್ವೀಕಾರ ಮಾಡುತ್ತಿಲ್ಲ. ಸಾದಿಕ್ ಅವರ ತಮ್ಮ ನಮ್ಮ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ. ನಮ್ಮ ಪಕ್ಷದಲ್ಲಿ ಯಾವುದೇ ಬಂಡಾಯವಿಲ್ಲ” ಎಂದು ಸಚಿವರು ಸ್ಪಷ್ಟಪಡಿಸಿದರು.

ಸಾದಿಕ್ ಪೈಲ್ವಾನ್ ಹೇಳುವುದೇನು?: ಆದರೆ ಸಾದಿಕ್ ಪೈಲ್ವಾನ್ ನಾಮಪತ್ರ ವಾಪಸ್ ಪಡೆಯುವ ಕುರಿತು ಯಾವುದೇ ತೀರ್ಮಾನ ಮಾಡಿಲ್ಲ. ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ಸಿಕ್ಕಿಲ್ಲ. ಆದ್ದರಿಂದ ಕೆಲವರು ಅಸಮಾಧಾನಗೊಂಡಿದ್ದು, ಸಮರ್ಥ ಶಾಮನೂರು ಸ್ಪರ್ಧೆ ವಿರೋಧಿಸಿ ಅವರು ಪಕ್ಷೇತರ ಅಭ್ಯರ್ಥಿಯಾಗಿ ಮುಂದುವರೆಯುವ ಸಾಧ್ಯತೆ ಇದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular