HomeKarnatakaBIG NEWS : ರಾಜ್ಯದಲ್ಲಿ `ಗೋಹತ್ಯೆ ನಿಷೇಧ ಕಾಯ್ದೆ’ ವಾಪಸ್ ಇಲ್ಲ : ಸಚಿವ ವೆಂಕಟೇಶ್...

BIG NEWS : ರಾಜ್ಯದಲ್ಲಿ `ಗೋಹತ್ಯೆ ನಿಷೇಧ ಕಾಯ್ದೆ’ ವಾಪಸ್ ಇಲ್ಲ : ಸಚಿವ ವೆಂಕಟೇಶ್ ಸ್ಪಷ್ಟನೆ

ಬೆಂಗಳೂರು : ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ರದ್ದುಪಡಿಸುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಸ್ಪಷ್ಟನೆ ನೀಡಿದ್ದಾರೆ.

ವಿಧಾನಪರಿಷತ್ ನಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಬಿಜೆಪಿಯ ಎನ್. ರವಿಕುಮಾರ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ರದ್ದುಪಡಿಸುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ. ಗೋಹತ್ಯೆ ಬಗ್ಗೆ ದೂರುಗಳು ಬಂದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇತ್ತೀಚೆಗಷ್ಟೇ ಪಶುಸಂಗೋಪನಾ ಸಚಿವ ವೆಂಕಟೇಶ್ ಅವರು ಎಮ್ಮೆ, ಕುರಿ ಕೊಲ್ಲಬಹುದಾದರೆ ಗೋವುಗಳನ್ನು ಯಾಕೆ ಕೊಲ್ಲಬಾರದು ಎಂದು ಹೇಳಿಕೆ ನೀಡಿದ್ದರು.ಈ ಹೇಳಿಕೆಯಿಂದಾಗಿ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿ ಸಭಾಪತಿಯವರ ಪೀಠದ ಮುಂದೆ ಆಗಮಿಸಿ ಧರಣಿ ಆರಂಭಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular