HomeKarnatakaಬೆಂಗಳೂರಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ, ಸಹಾಯವಾಣಿ ಆರಂಭ

ಬೆಂಗಳೂರಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ, ಸಹಾಯವಾಣಿ ಆರಂಭ

ಇರಾನ್ ಹಾಗೂ ಅಮೆರಿಕಾ-ಇಸ್ರೇಲ್ ನಡುವಿನ ಯುದ್ಧದ ಹಿನ್ನೆಲೆಯಲ್ಲಿ ವಾಣಿಜ್ಯ ಬಳಕೆ ಸಿಲಿಂಡರ್ ಪೂರೈಕೆಯಲ್ಲಿ ಭಾರೀ ವ್ಯತ್ಯಯವಾಗಿದೆ. ಆದರೆ ಗೃಹ ಬಳಕೆ ಅಡುಗೆ ಅನಿಲ ಸಹ ಸಿಗುತ್ತಿಲ್ಲವೇ?.

ಬೆಂಗಳೂರು ನಗರದಲ್ಲಿ ಅಡುಗೆ ಅನಿಲ ಸಿಲಿಂಡರ್ ಸಿಗುತ್ತಿಲ್ಲ ಎಂಬ ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆದ್ದರಿಂದ ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ಸ್ಪಷ್ಟನೆ ನೀಡಿದ್ದು, ಸಹಾಯವಾಣಿಯನ್ನು ಪ್ರಾರಂಭಿಸಲಾಗಿದೆ ಎಂದು ಹೇಳಿದ್ದಾರೆ.

ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ಈ ಕುರಿತು ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ. ಯಾವುದೇ ಗ್ರಾಹಕರು ಗಾಬರಿಗೊಳ್ಳಬಾರದು ಎಂದು ಕರೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಿಲ್ಲಾಧಿಕಾರಿಗಳ ಪ್ರಕಟಣೆ: ಪತ್ರಿಕಾ ಪ್ರಕಟಣೆಯ ಮೂಲಕ ಜಿಲ್ಲೆಯ ಎಲ್ಲಾ ಗೃಹಬಳಕೆ ಅಡುಗೆ ಅನಿಲ ಗ್ರಾಹಕರಿಗೆ (Domestic LPG Customers) ತಿಳಿಸುವುದೇನೆಂದರೆ, ಜಿಲ್ಲೆಯಲ್ಲಿ ಗೃಹ ಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳ ದಾಸ್ತಾನು ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿರುವುದರಿಂದ ಗ್ರಾಹಕರು ಯಾರು ಗಾಬರಿಗೊಳ್ಳಬಾರದು.

ಹೆಚ್ಚುವರಿಯಾಗಿ ದಾಸ್ತಾನು ಮಾಡಿಕೊಳ್ಳಬಾರದೆಂದು ತಿಳಿಯಪಡಿಸಿದೆ. ಜಿಲ್ಲೆಯಲ್ಲಿ ಗೃಹಬಳಕೆ ಅಡುಗೆ ಅನಿಲದ ಕೊರತೆ ಇರುವುದಿಲ್ಲವಾದ್ದರಿಂದ ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ ಮತ್ತು ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿರುವ ಸುಳ್ಳು ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು.

ಈ ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಯಪಡಿಸುವುದು ಗೃಹಬಳಕೆ ಅಡುಗೆ ಅನಿಲಕ್ಕೆ ಸಂಬಂಧಿಸಿದಂತೆ ಯಾವುದೇ ಕುಂದುಕೊರತೆಗಳು ಇದ್ದಲ್ಲಿ ಬೆಂಗಳೂರು ನಗರ ಜಿಲ್ಲೆಯ ಗೃಹಬಳಕೆ ಅಡುಗೆ ಅನಿಲ ಗ್ರಾಹಕರು ಸಹಾಯವಾಣಿ ಸಂಖ್ಯೆ 9611404384ಗೆ ಸಂಪರ್ಕಿಸಬಹುದಾಗಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular