HomeKarnatakaBig Update: ಗೃಹ ಬಳಕೆ ಸಿಲಿಂಡರ್, ವದಂತಿ ನಂಬಬೇಡಿ

Big Update: ಗೃಹ ಬಳಕೆ ಸಿಲಿಂಡರ್, ವದಂತಿ ನಂಬಬೇಡಿ

ಕೊಡಗು ಜಿಲ್ಲೆಯಲ್ಲಿ ಗೃಹಬಳಕೆ ಎಲ್‍ಪಿಜಿ ಸಿಲಿಂಡರ್‌ಗಳ ಸಮರ್ಪಕ ಸಂಗ್ರಹವಿದ್ದು, ಸರಬರಾಜಿನಲ್ಲಿ ಯಾವುದೇ ವ್ಯತ್ಯಯ ಇರುವುದಿಲ್ಲ. ಗ್ರಾಹಕರುಗಳು ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡುತ್ತಿರುವ ಸುಳ್ಳು ವದಂತಿಗಳಿಗೆ ಕಿವಿಗೊಡಬಾರದು ಹಾಗೂ ಯಾವುದೇ ಆತಂಕಕ್ಕೆ ಒಳಗಾಗದೇ ಅಗತ್ಯವಿರುವ ಪ್ರಮಾಣದಲ್ಲಿ ಮಾತ್ರ ಬುಕ್ ಮಾಡಿ ಗ್ಯಾಸ್ ಸಿಲಿಂಡರ್ ಪಡೆದುಕೊಳ್ಳಬಹುದು.

ಅಡುಗೆ ಅನಿಲವನ್ನು ಮಿತ ಬಳಕೆ ಪೂರೈಕೆಗಾಗಿ ಕೊಡಗು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಎಲ್‍ಪಿಜಿ ವಿತರಕರೊಂದಿಗೆ ಸಮಾಲೋಚನೆ ನಡೆಸಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ತಿಳಿಸಿದ್ದಾರೆ

ಗೃಹ ಬಳಕೆ ಗ್ಯಾಸ್ ಸಿಲಿಂಡರ್‌ಗಳ ಸಮರ್ಪಕ ಸಂಗ್ರಹ ಮತ್ತು ಸರಬರಾಜು ಲಭ್ಯವಿದ್ದು, ಎಂದಿನಂತೆ ಎಲ್‍ಪಿಜಿ ವಿತರಕರು ಗ್ರಾಹಕರ ಮನೆ ಬಾಗಿಲಿಗೆ ಸರಬರಾಜು ಮಾಡಲಿದ್ದಾರೆ. ಈ ಬಗ್ಗೆ ಜಿಲ್ಲೆಯ ಎಲ್ಲಾ ಎಲ್‍ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಾರ್ವಜನಿಕರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗದೆ ಅಗತ್ಯವಿರುವ ಪ್ರಮಾಣದಲ್ಲಿ ಗ್ಯಾಸ್ ಸಿಲಿಂಡರ್ ಪಡೆಯಬಹುದು. ಗೃಹ ಬಳಕೆಯ ಎಲ್‍ಪಿಜಿ ಗ್ಯಾಸ್ ಸಿಲಿಂಡರ್‌ಗಳ ವಿತರಣೆಯಲ್ಲಿ ಏನಾದರೂ ಕುಂದುಕೊರತೆಗಳು ಕಂಡುಬಂದಲ್ಲಿ ಪರಿಹರಿಸಲು ಉಪ ನಿರ್ದೇಶಕರು, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಕಚೇರಿಯಲ್ಲಿ ಸಹಾಯವಾಣಿಯನ್ನು ತೆರೆಯಲಾಗಿದ್ದು, ಈ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ, ಪರಿಹಾರ ಕಂಡುಕೊಳ್ಳಬಹುದು.

ಸಹಾಯವಾಣಿ ಸಂಖ್ಯೆಗಳು: ಉಪ ನಿರ್ದೇಶಕರ ಕಚೇರಿ ಕೊಡಗು ಜಿಲ್ಲೆ 9845706980, ಮಾರಾಟ ವ್ಯವಸ್ಥಾಪಕರು (ಎಲ್‍ಪಿಜಿ) ಐಒಸಿ 9585515389, ಮಾರಾಟ ವ್ಯವಸ್ಥಾಪಕರು (ಎಲ್‍ಪಿಜಿ) ಬಿಪಿಸಿ 9853735944 ಮತ್ತು ಸಹಾಯಕ ಮಾರಾಟ ವ್ಯವಸ್ಥಾಪಕರು (ಎಲ್‍ಪಿಜಿ)-ಎಚ್‍ಪಿಸಿ 7001642556.

ತಾಲ್ಲೂಕು ಕಚೇರಿ ಮಡಿಕೇರಿ 9480544531, ವಿರಾಜಪೇಟೆ 8105072869, ಸೋಮವಾರಪೇಟೆ 9480072632, ಕುಶಾಲನಗರ 9380032721 ಹಾಗೂ ಪೊನ್ನಂಪೇಟೆ 9108940875 ಈ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ ಪರಿಹಾರ ಕಂಡುಕೊಳ್ಳಬಹುದು.

ಯಾವುದೇ ಅನಧಿಕೃತ ಗ್ಯಾಸ್ ಸಿಲಿಂಡರ್ ಸಂಗ್ರಹಣೆ ಅಥವಾ ಅಕ್ರಮ ಮಾರಾಟ ಕಂಡುಬಂದಲ್ಲಿ ಅಗತ್ಯ ವಸ್ತುಗಳ ಕಾಯ್ದೆ 1955, Petroleum Products (Maintenance of Production, Storage and Supply) Order 1999 ಹಾಗೂ LPG Control Order 2000 ರಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಸಹಕರಿಸಿ ಗೃಹಬಳಕೆ ಗ್ಯಾಸ್ ಸಿಲಿಂಡರ್ ವಿತರಣೆಯ ವ್ಯವಸ್ಥೆ ಸುಗಮವಾಗಿ ನಡೆಯಲು ಸಹಕರಿಸುವಂತೆ ವಿನಂತಿಸಲಾಗಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular