HomeKarnatakaBIG NEWS : ವಾಹನಗಳನ್ನು ಏಕಾಏಕಿ ಅಡ್ಡಗಟ್ಟಿ 'ಕೀ' ಕಸಿಯುವಂತಿಲ್ಲ :  ಸಂಚಾರಿ ಪೊಲೀಸರಿಗೆ ರಾಜ್ಯ...

BIG NEWS : ವಾಹನಗಳನ್ನು ಏಕಾಏಕಿ ಅಡ್ಡಗಟ್ಟಿ ‘ಕೀ’ ಕಸಿಯುವಂತಿಲ್ಲ :  ಸಂಚಾರಿ ಪೊಲೀಸರಿಗೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ.!

ಬೆಂಗಳೂರು : ಮಂಡ್ಯದಲ್ಲಿ ಟ್ರಾಫಿಕ್ ಪೊಲೀಸರ ಎಡವಟ್ಟಿಗೆ ಮಗು ಮೃತಪಟ್ಟ ಪ್ರಕರಣದ ಬೆನ್ನಲ್ಲೇ ಸಂಚಾರ ಪೊಲೀಸರಿಗೆ ರಾಜ್ಯ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಏನಿದೆ ಆದೇಶದಲ್ಲಿ..?

ದಿನಾಂಕ: 26.05.2025 ರಂದು ಮಂಡ್ಯ ಜಿಲ್ಲೆಯಲ್ಲಿ ಪೊಲೀಸರು ಸಂಚಾರ ನಿಯಮ ಉಲ್ಲಂಘಿಸುವ ವಾಹನಗಳನ್ನು ತಪಾಸಣೆ ಮಾಡುವಾಗ ಸರಿಯಾದ ರಸ್ತೆ ಸುರಕ್ಷತಾ / ಮುಂಜಾಗ್ರತಾ ಕ್ರಮಗಳನ್ನು ವಹಿಸದೇ, ಹೆದ್ದಾರಿಯಲ್ಲಿ ವಾಹನ ಸಂಚಾರ ದಟ್ಟಣೆಯನ್ನು ಗಮನಿಸದೇ ವಾಹನಗಳನ್ನು ತಡೆದು ಪ್ರಕರಣ ದಾಖಲಿಸುವ ನಿಟ್ಟಿನಲ್ಲಿ ರಸ್ತೆ ಅಪಘಾತವುಂಟಾಗಿ ಓರ್ವ ಮಗುವು ಮೃತಪಟ್ಟಿರುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮತ್ತೊಂದು ಪ್ರಕರಣದಲ್ಲಿ ದಿನಾಂಕ: 13.05.2025 ರಂದು ದಾವಣಗೆರೆ ಜಿಲ್ಲೆಯಲ್ಲಿ ಪೊಲೀಸರು ಸಂಚಾರ ನಿಯಮ ಉಲ್ಲಂಘಿಸುವ ವಾಹನಗಳನ್ನು ತಪಾಸಣೆ ನಡೆಸುವ ಸಂದರ್ಭದಲ್ಲಿ ವರಿಗವಾಗಿ ಚಲಾಯಿಸಿಕೊಂಡು ಬಂದ ಕ್ಯಾಂಟರ್ ಚಾಲಕನೂ ಪೊಲೀಸ್ ಸಿಬ್ಬಂದಿಗೆ ಅಪಘಾತಪಡಿಸಿ ಸದರಿ ಪೊಲೀಸ್ ಸಿಬ್ಬಂದಿಯು ಮೃತಪಟ್ಟಿರುತ್ತಾರೆ.
ಮೇಲ್ಕಂಡ ಪ್ರಕರಣಗಳನ್ನು ಗಮನಿಸಿದಲ್ಲಿ ಪೊಲೀಸರು ಸಂಚಾರ ನಿಯಮ ಉಲ್ಲಂಘನಾ ಪ್ರಕರಣಗಳನ್ನು ದಾಖಲಿಸುವಾಗ ಯಾವುದೇ ರಸ್ತೆ ಸುರಕ್ಷತಾ ಕ್ರಮಗಳನ್ನು / ಮುಂಜಾಗ್ರತಾ ಕ್ರಮಗಳನ್ನು /ಸಂಚಾರ ದಟ್ಟಣೆಯನ್ನು ಗಮನದಲ್ಲಿರಿಸಿಕೊಳ್ಳದಿರುವುದು ಕಂಡುಬಂದಿರುತ್ತದೆ. ಇದರಿಂದ ಸಾರ್ವಜನಿಕರ /ಅಮಾಯಕರ ಜೀವಕ್ಕೆ ಹಾಗೂ ಪೊಲೀಸರೇ ತಮ್ಮ ಜೀವಕ್ಕೂ ಕುತ್ತು ತಂದುಕೊಳ್ಳುತ್ತಿರುವುದು ಗಂಭೀರವಾಗಿ ಪರಿಗಣಿಸಬೇಕಾದ ಅಂಶವಾಗಿರುತ್ತದೆ.

ಈ ಸಂಬಂಧ, ಎಲ್ಲಾ ಘಟಕಗಳು ಈಗಾಗಲೇ ಮಾನ್ಯ ಡಿಜಿ & ಐಜಿಪಿ ರವರು ಈ ಹಿಂದೆ ಹೊರಡಿಸಿರುವ ಉಲ್ಲೇಖಿತ ಸುತ್ತೋಲೆಗಳಲ್ಲಿ ನಮೂದಿಸಿರುವಂತೆ ಸಂಚಾರ ನಿಯಂತ್ರಣ ಮಾಡತಕ್ಕದ್ದು. ಆದ್ದರಿಂದ, ಎಲ್ಲಾ ಘಟಕಾಧಿಕಾರಿಗಳು ತಮ್ಮ ಅಧೀನಕ್ಕೊಳಪಡುವ ಅಧಿಕಾರಿ / ಸಿಬ್ಬಂದಿಗಳಿಗೆ ಈ ಕೆಳಕಂಡ ನಿರ್ದೇಶನಗಳನ್ನು ನೀಡಿ ಅವುಗಳನ್ನು ಪಾಲನೆ ಮಾಡಲು ಸೂಚಿಸುವುದು,

  1. ಪೊಲೀಸರು ವಾಹನ ಸವಾರರ ವಾಹನಗಳಿಗೆ ಸಂಬಂಧಪಟ್ಟ ದಾಖಲೆಗಳನ್ನು ಪರೀಕ್ಷಿಸಲು ಸಕಾರಣವಿಲ್ಲದೇ ವಾಹನಗಳನ್ನು ತಡೆದು ತಪಾಸಣೆಗೊಳಪಡಿಸಬಾರದು.
  2. ಕಣ್ಣಿಗೆ ಕಾಣುವ (Visible violations) ಸಂಚಾರ ನಿಯಮ ಉಲ್ಲಂಘನೆಗಳು ಕಂಡುಬಂದಲ್ಲಿ ಮಾತ್ರವೇ ಅಂತಹ ವಾಹನಗಳನ್ನು ನಿಲ್ಲಿಸಿ ಪ್ರಕರಣಗಳನ್ನು ದಾಖಲಿಸುವುದು. ಪ್ರಕರಣಗಳನ್ನು ದಾಖಲಿಸುವಾಗ ಈ ಕೆಳಕಂಡ ಅಂಶಗಳನ್ನು ಗಮನದಲ್ಲಿಟ್ಟುಕೊಳ್ಳುವುದು.
    ಅ)ಹೆದ್ದಾರಿಗಳಲ್ಲಿ Zig Zag ಮಾದರಿಯಲ್ಲಿ ಬ್ಯಾರಿಕೇಡ್ (Barricade) ತಡೆಯಬಾರದು. ಹಾಕಿ ವಾಹನಗಳನ್ನು
    ಆ)ರಸ್ತೆಯಲ್ಲಿ ದಿಢೀರನೆ ಅಡ್ಡಬಂದು ವಾಹನ ನಿಲ್ಲಿಸುವಂತೆ ಹೇಳಬಾರದು.
    ಇ) |ಬೈಕ್ನ ಹಿಂಬದಿ ಸವಾರ (Pillion rider) ನನ್ನು ಹಿಡಿದು ಎಳೆಯುವುದು ಹಾಗೂ ವಾಹನಗಳ ಕೀಲಿಕೈ (Key) ಅನ್ನು ತೆಗೆದುಕೊಳ್ಳುವುದನ್ನು ಮಾಡಬಾರದು.
  3. ವೇಗವಾಗಿ ಚಲಾಯಿಸಿಕೊಂಡು ಬರುವ ವಾಹನ ಸವಾರರನ್ನು ಹಿಡಿಯಲು ಅವರನ್ನು ಬೆನ್ನಟ್ಟದೇ ಆ ವಾಹನಗಳ ನೋಂದಣಿ ಸಂಖ್ಯೆಯನ್ನು ಗುರುತು ಮಾಡಿಕೊಂಡು ಜಿಲ್ಲಾ ಪೊಲೀಸ್ ಠಾಣಾ ಸರಹದ್ದುಗಳ ವಿವಿಧ ನಿಯಂತ್ರಣ ಕೋಣೆಗಳಿಗೆ ಮಾಹಿತಿ ರವಾನಿಸಿ, ಸದರಿ ವಾಹನ ಸವಾರರನ್ನು ಪತ್ತೆಹಚ್ಚಿ ಪ್ರಕರಣ ದಾಖಲಿಸುವುದು.
  4. ಸಂಚಾರ ನಿಯಮ ಉಲ್ಲಂಘನೆದಾರರ ವಿರುದ್ಧ ಪ್ರಕರಣ ದಾಖಲಿಸುವಾಗ (Physical Enforcement) ಅಥವಾ ವಾಹನಗಳ ತಪಾಸಣೆ ಮಾಡುವ ಸಂದರ್ಭದಲ್ಲಿ ಪೊಲೀಸರು ತಮ್ಮ ಸುರಕ್ಷತೆಗಾಗಿ Reflective Jacket ಗಳನ್ನು ಧರಿಸುವುದು. ಸಂಜೆ ವೇಳೆಯಲ್ಲಿ ಕಡ್ಡಾಯವಾಗಿ LED Baton ಗಳನ್ನು ಉಪಯೋಗಿಸಬೇಕು ಹಾಗೂ ವಾಹನಗಳನ್ನು ತಪಾಸಣೆ ಮಾಡುವ ಸಂದರ್ಭದಲ್ಲಿ ಕಡ್ಡಾಯವಾಗಿ Body worm camera ಗಳನ್ನು ಧರಿಸತಕ್ಕದ್ದು.
  5. Traffic Management centre (TMC)/Intelligent Traffic Management System (ITMS) ಅನ್ನು ಅನುಷ್ಠಾನಗೊಳಿಸಲಾಗಿದೆಯೋ ಅಂತಹ ಘಟಕದವರು ಆದಷ್ಟು ಸಂಪರ್ಕರಹಿತ ಪ್ರವರ್ತನಾ (Contactless enforcement) ಮುಖಾಂತರ ಪ್ರಕರಣಗಳನ್ನು ದಾಖಲಿಸುವುದು.
  6. ಇಂತಹ ಅನಾಹುತಗಳನ್ನು ತಪ್ಪಿಸಲು ಎಲ್ಲಾ ಘಟಕಗಳಲ್ಲೂ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡುವ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಕಾಲಕಾಲಕ್ಕೆ ಸರಿಯಾಗಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು.
  7. ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ ಹಾಗೂ ಇತರೆ ರಸ್ತೆಗಳಲ್ಲಿ ಯಾವುದೇ ಕಾರಣಕ್ಕೂ ಅತಿ-ವೇಗವಾಗಿ ಚಲಿಸುವ ವಾಹನಗಳನ್ನು ತಡೆಯುವ ಪ್ರಯತ್ನ ಮಾಡಬಾರದು ಹಾಗೂ ಇಂತಹ ವಾಹನಗಳ ವಿರುದ್ಧ ಎಫ್.ಟಿ.ವಿ.ಆರ್ ದಾಖಲಿಸಲು ತಂತ್ರಜ್ಞಾನ ಆಧಾರಿತ ನಿಯಮಗಳ ಜಾರಿಯನ್ನು ಅನುಸರಿಸುವುದು.
  8. ವಾಹನಗಳ ವೇಗವನ್ನು ಇಳಿಸುವ ಸಲುವಾಗಿ, ತಪಾಸಣೆಯ ಸ್ಥಳದ ಸುಮಾರು 100-150 ಮೀಟರ್ ಮೊದಲೇ ರಿಪ್ಲೆಕ್ಟಿವ್ ರಬ್ಬರ್ ಕೋನ್ಗಳನ್ನು ಹಾಗೂ ಸುರಕ್ಷತಾ ಸಲಕರಣಿಗಳನ್ನು ಅಳವಡಿಸುವುದು.
  9. ರಾತ್ರಿ ಮತ್ತು ತಡರಾತ್ರಿಯ ಸಂದರ್ಭದಲ್ಲಿ ಸಂಚಾರ ಸಿಗ್ನಲ್ ದೀಪಗಳಿರುವ / ಜಂಕ್ಷನ್ ಗಳ ಬದಿಯಲ್ಲೇ ವಾಹನಗಳನ್ನು ತಪಾಸಣೆ ಮಾಡುವುದು ಸೂಕ್ತ.
  10. ಕಾನೂನು ಮತ್ತು ಸುವ್ಯವಸ್ಥೆ ಪೊಲೀಸರು ನಡೆಸುವ ನಾಕಾಬಂಧಿ ಪ್ರಕ್ರಿಯೆಗಳನ್ನು ಸಾಧ್ಯವಾದಷ್ಟು ಹೆದ್ದಾರಿಗಳಲ್ಲಿ ನಡೆಸಬಾರದು. ತಪಾಸಣೆಯ ಸಂದರ್ಭದಲ್ಲಿ ಇಂತಹ ಕಾ&ಸು ಅಧಿಕಾರಿ ಮತ್ತು ಸಿಬ್ಬಂದಿಯವರುಗಳು ಸುರಕ್ಷತಾ ಹಿತದೃಷ್ಟಿಯಿಂದ ಸಂಚಾರ ಪೊಲೀಸರ ಬೆಂಬಲ ಮತ್ತು ಸಹಕಾರವನ್ನು ಪಡೆದುಕೊಳ್ಳುವುದು. ಎಲ್ಲಾ ಪೊಲೀಸ್ ಆಯುಕ್ತರುಗಳು ಹಾಗೂ ಪೊಲೀಸ್ ಅಧೀಕ್ಷಕರುಗಳು ಈ ವಿಷಯದ ಕುರಿತು ವೈಯಕ್ತಿಕ ಗಮನಹರಿಸಿ, ತಮ್ಮ ಅಧೀನಕ್ಕೊಳಪಡುವ ಅಧಿಕಾರಿ / ಸಿಬ್ಬಂದಿಗಳು ಈ ಸುತ್ತೋಲೆಯನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆ ಕಟ್ಟುನಿಟ್ಟಾಗಿ ನಿರ್ದೇಶನಗಳನ್ನು ನೀಡುವುದು ಎಂದು ಆದೇಶಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular