ಭೌತಶಾಸ್ತ್ರ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮೂವರು ವಿಜ್ಞಾನಿಗಳಿಗೆ ಪ್ರತಿಷ್ಠಿತ ನೊಬೆಲ್ ಪ್ರಶಸ್ತಿ ಘೋಷಣೆ ಮಾಡಲಾಗಿದೆ.
ಜಾನ್ ಕ್ಲಾರ್ಕ್, ಮೈಕೆಲ್ ಹೆಚ್. ಡೆವೊರೆಟ್ ಹಾಗೂ ಜಾನ್ ಎಂ. ಮಾರ್ಟಿನಿಸ್ ಅವರಿಗೆ 2025ನೇ ಸಾಲಿನ ನೊಬೆಲ್ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಕ್ವಾಂಟಮ್ ಮೆಕ್ಯಾನಿಕ್ಸ್ ಕ್ಷೇತ್ರದ ನೂತ ಅವಿಷ್ಕಾರಕ್ಕಾಗಿ ಈ ಪ್ರಶಸ್ತಿಯನ್ನು ಘೋಷಿಸಲಾಗಿದೆ.
ಕ್ವಾಂಟಮ್ ಮೆಕ್ಯಾನಿಕ್ಸ್ ಕ್ಷೇತ್ರದಲ್ಲಿನ ಅತ್ಯುನ್ನತ ಸಾಧನೆಗಾಗಿ ಅಮೆರಿಕನ್ ವಿಶ್ವವಿದ್ಯಾಲಯದ ಮೂವರು ವಿಜ್ಞಾನಿಗಳು ಭೌತಶಾಸ್ತ್ರ ವಿಭಾಗದಲ್ಲಿ ನೊಬೆಲ್ ಪ್ರಶಸ್ತಿ ಪಡೆದಿದ್ದಾರೆ. ನಾಳೆ ಬುಧವಾರ ರಸಾಯನಶಾಸ್ತ್ರ ವಿಭಾಗದಲ್ಲಿ ನೊಬೆಲ್ ಪ್ರಶಸ್ತಿ ಘೋಷಿಸಲಾಗುತ್ತದೆ. ನಿನ್ನೆ ಸೋಮವಾರ ಮೆಡಿಸಿನ್ ಕ್ಷೇತ್ರದಲ್ಲಿ ನೊಬೆಲ್ ಪ್ರಶಸ್ತಿ ಘೋಷಣೆಯಾಗಿತ್ತು.

