HomeKarnatakaSCSP-TSP ಅನುದಾನ ಹಂಚಿಕೆ, ವೆಚ್ಚ ವಿವಿಧ ಇಲಾಖೆಗಳ ಕ್ರಿಯಾಯೋಜನೆ ಬಗ್ಗೆ ಮಹತ್ವದ ಚರ್ಚೆ

SCSP-TSP ಅನುದಾನ ಹಂಚಿಕೆ, ವೆಚ್ಚ ವಿವಿಧ ಇಲಾಖೆಗಳ ಕ್ರಿಯಾಯೋಜನೆ ಬಗ್ಗೆ ಮಹತ್ವದ ಚರ್ಚೆ

ಬೆಂಗಳೂರು: ವಿಕಾಸ ಸೌಧದಲ್ಲಿ ಇಂದು ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಕೆ.ಎಚ್. ಮುನಿಯಪ್ಪ ಅಧ್ಯಕ್ಷತೆಯಲ್ಲಿ ನೋಡಲ್ ಏಜೆನ್ಸಿ ಸಭೆ ನಡೆಸಿ, 2026-27ನೇ ಸಾಲಿನ ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನದಡಿ ವಿವಿಧ ಇಲಾಖೆಗಳ ಕ್ರಿಯಾ ಯೋಜನೆ ಹಾಗೂ 17 ಇಲಾಖೆಗಳ ಪ್ರಗತಿ ಪರಿಶೀಲಿಸಲಾಗಿದೆ.

ದ 2026-27 ನೇ ಸಾಲಿನಲ್ಲಿ ವಿವಿಧ ಅಭಿವೃದ್ಧಿ ಇಲಾಖೆಗಳಿಗೆ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಅಡಿಯಲ್ಲಿ ಒದಗಿಸಿದ ಅನುದಾನಕ್ಕೆ ತಯಾರಿಸಲಾದ ಕ್ರಿಯಾ ಯೋಜನೆಯನ್ನು ಪರಿಶೀಲಿಸಿ, ರಾಜ್ಯ ಅಭಿವೃದ್ಧಿ ಪರಿಷತ್‌ಗೆ ಶಿಫಾರಸ್ಸು ಮಾಡಲು ನೋಡಲ್ ಏಜೆನ್ಸಿ ನಡೆಸುವ ಕುರಿತಾದ ಸಭೆಯಲ್ಲಿ ಮಹತ್ವದ ಚರ್ಚೆ ನಡೆದಿದೆ.

2025-26 ನೇ ಸಾಲಿಗೆ ಇಲಾಖೆಗಳ ವಿವಿಧ ಯೋಜನೆಗಳಡಿ ಹಂಚಿಕೆಯಾದ SCSP-TSP ಅನುದಾನ ವೆಚ್ಚ ಮಾಡಿರುವ ಬಗ್ಗೆ ಪ್ರಗತಿ ಪರಿಶೀಲನೆ, ಬಿಡುಗಡೆಯಾದ ಅನುದಾನವನ್ನು ಯಾವ ಕಾರಣಕ್ಕೆ ವೆಚ್ಚ ಮಾಡಿರುವುದಿಲ್ಲ ಎಂಬುದರ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

SCSP-TSP ಅನುದಾನವನ್ನು ಖಜಾನೆಯಿಂದ ಸೆಳೆದು, ಆಯಾ ಇಲಾಖೆಗಳ ನಿಗಮ/ಮಂಡಳಿಗಳ ಇತರೆ ಖಾತೆಗಳಲ್ಲಿ ಇಟ್ಟಿರುವ ಮೊತ್ತದ ವಿವರ, CSS ಯೋಜನೆಗಳಲ್ಲಿ ಭಾರತ ಸರ್ಕಾರ ಅಥವಾ ರಾಜ್ಯ ಸರ್ಕಾರದಿಂದ ಬಿಡುಗಡೆಯಾಗದೇ ಇರುವ ಮೊತ್ತದ ಕುರಿತು ಚರ್ಚೆ ನಡೆಸಲಾಯಿತು.

ಆರ್ಥಿಕ ಇಲಾಖೆಯಿಂದ SCSP-TSP ಅಡಿಯಲ್ಲಿ ವಿವಿಧ ಇಲಾಖೆಗಳ ಲೆಕ್ಕ ಶೀರ್ಷಿಕೆಗಳಡಿ ಅನುದಾನ ಹಂಚಿಕೆಯಾಗಿದ್ದು, ಸದರಿ ಹಂಚಿಕೆಯಂತೆ ಒಟ್ಟು ಮೊತ್ತವನ್ನು ವೆಚ್ಚ ಮಾಡಲು ಸಾಧ್ಯವೇ? ಅಥವಾ ಇಲ್ಲವೇ ಎಂಬುದರ ಬಗ್ಗೆ ನೋಡಲ್ ಏಜೆನ್ಸಿ‌ಗೆ ತಿಳಿಸುವ ಕುರಿತು ಸುದೀರ್ಘವಾಗಿ ಚರ್ಚೆ ನಡೆಸಲಾಗಿದೆ.

ಈ ಸಭೆಯಲ್ಲಿ ಕೃಷಿ ಸಚಿವ ಪಿ.ಎಂ. ನರೇಂದ್ರಸ್ವಾಮಿ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಸೇರಿದಂತೆ ಉನ್ನತ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ

ಶಿವಮೊಗ್ಗ: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ನೀಡಲು ಸರ್ಕಾರ ಮಹತ್ವದ ನಿರ್ಣಯ ಕೈಗೊಂಡಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಅವರು ಹೇಳಿದರು.

ಅವರು ಇಂದು ನಗರದ ತಮ್ಮ ಆಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಧ್ಯಮದವರಿಗೆ ಮಾಹಿತಿ ನೀಡಿ ಮಾತನಾಡುತ್ತಿದ್ದರು.

ಶಾಲಾ ದಾಖಲಾತಿಯಲ್ಲಿ ಮಕ್ಕಳ ಸಂಖ್ಯೆಯಲ್ಲಿ ತೀವ್ರ ಪ್ರಮಾಣದ ಹೆಚ್ಚಳವಾಗಿದ್ದರಿಂದ ಪಠ್ಯಪುಸ್ತಕ ಪೂರೈಕೆಯಲ್ಲಿ ಅಲ್ಪಪ್ರಮಾಣದ ವ್ಯತ್ಯಯ ಉಂಟಾಗಿದ್ದು, ಶೀಘ್ರದಲ್ಲಿ ಸಮಸ್ಯೆ ಪರಿಹಾರವಾಗಲಿದೆ ಎಂದರು.

ಮಕ್ಕಳಿಗೆ ಉತ್ತಮ ಗುಣಮಟ್ಟದ ಶೂ-ಸಾಕ್ಸ್‌ ಒದಗಿಸಲು ರಾಜ್ಯಮಟ್ಟದಲ್ಲಿ ಟೆಂಡರ್‌ಪ್ರಕ್ರಿಯೆ ಕೈಗೊಳ್ಳಲಾಗಿದೆ. ಈ ವರ್ಷದಿಂದಲೇ ಉಚಿತ ನೋಟ್‌ಪುಸ್ತಕವನ್ನು ವಿತರಿಸಲಾಗುತ್ತಿದೆ ಎಂದರು. ಗ್ರಾಮೀಣ ಮಕ್ಕಳಿಗೆ ನಗರ ಜೀವನವನ್ನು ಪರಿಚಯಿಸುವ ಸದುದ್ದೇಶದಿಂದ ವಿನೂತನ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಶೀಘ್ರದಲ್ಲಿ ಅನುಷ್ಟಾನಗೊಳಿಸಲಾಗುವುದು ಎಂದರು.

ಕರ್ನಾಟಕ ಪಬ್ಲಿಕ್‌ ಶಾಲೆಗಳ ಉದ್ಘಾಟನೆ ಮತ್ತು ಜಿಲ್ಲೆಯ ವಿವಿಧ ಇಲಾಖೆಗಳ ಕೋಟ್ಯಂತರ ರೂ. ವೆಚ್ಚದ ಯೋಜನೆಗಳ ರಾಜ್ಯಮಟ್ಟದ ಕಾರ್ಯಕ್ರಮವನ್ನು ಶಿವಮೊಗ್ಗ ನಗರ ಕೇಂದ್ರದಲ್ಲಿಯೇ ಆಯೋಜಿಸಲು ಉದ್ದೇಶಿಸಿದ್ದು, ಮುಖ್ಯಮಂತ್ರಿಗಳ ದಿನಾಂಕ ನಿಗದಿಯ ನಂತರ ನಗರದ ಅಲ್ಲಮಪ್ರಭು ಮೈದಾನದಲ್ಲಿ ಆಯೋಜಿಸಲಾಗುವುದು ಎಂದರು.

ಕೆಪಿಎಸ್ ಶಾಲೆಗಳಲ್ಲಿ ಅಗತ್ಯ ವ್ಯವಸ್ಥೆಯನ್ನು ಕಲ್ಪಿಸುವ ಕಾರ್ಯ ಪ್ರಗತಿಯಲ್ಲಿದ್ದ ಅವಧಿಯಲ್ಲಿಯೂ ರಾಜ್ಯದೆಲ್ಲೆಡೆ ಕೆಪಿಎಸ್ ಶಾಲೆಗೆ ನಿಗಧಿಪಡಿಸಿದ ಸಂಖ್ಯೆಗಿಂತ ಹೆಚ್ಚಿನ ಪ್ರಮಾಣದ ಮಕ್ಕಳ ದಾಖಲಾತಿ ಕಂಡುಬಂದಿದೆ. ಈ ಹಿಂದೆ ನಿಗದಿಪಡಿಸಿದ ಸಂಖ್ಯೆಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಕೆಪಿಎಸ್ ಶಾಲೆಗಳನ್ನು ಆರಂಭಿಸಲು ಉದ್ದೇಶಿಸಲಾಗಿದ್ದು, ಡಿಪಿಆರ್ ಪ್ರಕ್ರಿಯೆ ಚಾಲನೆಯಲ್ಲಿದೆ. ಪ್ರತಿ ಕೆಪಿಎಸ್‌ ಶಾಲೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು 3-9ಕೋಟಿ ರೂ.ಗಳ ವ್ಯಯ ಮಾಡಲಾಗುವುದು. ಅಲ್ಲದೇ ಶಾಲಾ ಶಿಕ್ಷಣ ವ್ಯವಸ್ಥೆಗೆ ಅಗತ್ಯವಾಗಿರುವ ಪಠ್ಯ, ಕ್ರೀಡೆ, ಸಂಗೀತ ಸೇರಿದಂತೆ ಎಲ್ಲಾ ಶಿಕ್ಷಕರನ್ನು ನೇಮಿಸಲಾಗುವುದು. ಅಂತೆಯೇ ಶಾಲಾ ಮಕ್ಕಳಿಗೆ ಬಸ್‌ಸಂಪರ್ಕ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು. 

ಪ್ರಸ್ತುತ ಪಶ್ಚಿಮ ಘಟ್ಟ ಪ್ರದೇಶ ನಿವಾಸಿಗಳ ಆತಂಕಕ್ಕೆ ಕಾರಣವಾಗಿರುವ ಕಸ್ತೂರಿರಂಗನ್‌ ವರದಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸ್ಥಳೀಯ ಜನರಲ್ಲಿ ತೀವ್ರ ತರಹದ ವಿರೋಧವಿದೆ. ಈ ವಿಷಯವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ಉದ್ದೇಶಿಸಲಾಗಿದೆ. ಕಸ್ತೂರಿ ರಂಗನ್‌ ವರದಿಯಿಂದ ಬಾಧಿತಗೊಳ್ಳುವ ಜಿಲ್ಲೆಗಳ ಜನಪ್ರತಿನಿಧಿಗಳು, ಹೋರಾಟಗಾರರು, ತಜ್ಞರು, ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳನ್ನು ಆಹ್ವಾನಿಸಿ, ರಾಜ್ಯದ ಮುಖ್ಯಮಂತ್ರಿಗಳ ಉಪಸ್ಥಿತಿಯಲ್ಲಿ ಸಭೆ ನಡೆಸಲಾಗುವುದು ಎಂದರು.

ಈಗಾಗಲೇ ಮುಖ್ಯಮಂತ್ರಿಗಳು ಈ ಸಂಬಂಧ ಕೆಲವು ಆಯ್ದ ಜಿಲ್ಲೆಗಳ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ ಎಂದ ಅವರು, ಸೆಪ್ಟಂಬರ್‌ 21, 22 ಮತ್ತು 23ರಂದು ಮೂರು ದಿನಗಳ ವಿಶೇಷ ಅಧಿವೇಶನ ನಡೆಸಲು ಉದ್ದೇಶಿಸಲಾಗಿದ್ದು, ಈ ವಿಶೇಷ ಹಾಗೂ ಐತಿಹಾಸಿಕ ಅಧಿವೇಶನದಲ್ಲಿ ಅರಣ್ಯ ಸಂಬಂಧಿಸಿದ ಸಮಸ್ಯೆ-ಸವಾಲುಗಳು, ಪರಿಹಾರ ಕ್ರಮಗಳು, ಕಸ್ತೂರಿ ರಂಗನ್‌ವರದಿ, ಸಂತ್ರಸ್ಥರ ನೆಮ್ಮದಿಯ ಬದುಕಿಗೆ ಕ್ರಮ, ನೆರೆ-ಬರ ಇಂತಹ ಮಹತ್ವದ ಸಂಗತಿಗಳ ಬಗ್ಗೆ ಸಮಾಲೋಚನೆ ನಡೆಯಲಿದೆ. ವಿಪಕ್ಷಗಳು ಸದ್ವಿಚಾರದೊಂದಿಗೆ ಚರ್ಚೆಯಲ್ಲಿ ಭಾಗವಹಿಸುವಂತೆ ಅವರು ಮನವಿ ಮಾಡಿದರು.

ಸಮಾಜಕ್ಕೆ ನೀಡುವ ನಿಸ್ವಾರ್ಥ ಸೇವೆ ಹಾಗೂ ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರವನ್ನು ಗೌರವಿಸುವ ಉದ್ದೇಶದಿಂದ ವೈದ್ಯರಿಗೆ ‘Dr.’ ಹಾಗೂ ಪ್ರಾಧ್ಯಾಪಕರಿಗೆ ‘Prof.’ ಎಂದು ಕರೆಯುವಂತೆ ಸುಮಾರು 4.5 ಲಕ್ಷಕ್ಕೂ ಅಧಿಕ ಶಿಕ್ಷಕರಿಗೆ ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ ರಾಜ್ಯದ ಎಲ್ಲಾ ಶಾಲಾ ಶಿಕ್ಷಕರು ತಮ್ಮ ಹೆಸರಿನ ಮುಂದೆ ‘Tr.’ (Teacher – ಟೀಚರ್) ಎಂಬ ಗೌರವಸೂಚಕ ಪೂರ್ವಪ್ರತ್ಯಯವನ್ನು ಬಳಸಲು ಅಧಿಕೃತ ಅನುಮತಿ ನೀಡಿ ಗೌರವಿಸಿದೆ ಎಂದರು.

ಜನರ ಸೇವೆಯೇ ಜನಾರ್ದನ ಸೇವೆ ಎಂಬ ತತ್ವದಲ್ಲಿ ಅದಮ್ಯ ವಿಶ್ವಾಸ ಇಟ್ಟುಕೊಂಡಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಪ್ರಜಾಸೇವಾ ಇಲಾಖೆಯನ್ನು ಹೊಸದಾಗಿ ಪರಿಚಯಿಸುವ ಮೂಲಕ ಸರ್ಕಾರವನ್ನೇ ರಾಜ್ಯದ ಜನಸಾಮಾನ್ಯರ ಮನೆ-ಬಾಗಿಲಿಗೆ ಕೊಂಡೊಯ್ದು, ಅವರ ದುಃಖ-ದುಮ್ಮಾನ, ದೂರು, ನೋವುಗಳಿಗೆ ಕಾನೂನಿನ ಚೌಕಟ್ಟಿನಡಿ ಸ್ಥಳದಲ್ಲೇ ಸೂಕ್ತ ಪರಿಹಾರ ಕಲ್ಪಿಸುವ ಜನಸ್ನೇಹಿ ಆಡಳಿತಕ್ಕೆ ಹೊಸ ಆಂದೋಲನವನ್ನೇ ಆರಂಭಿಸಿದ್ದು, ರಾಜ್ಯದ ಜನತೆಯಲ್ಲಿ ಹೊಸ ಆಶಾಕಿರಣ ಮೂಡಿಸಿದೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳೇ ಪ್ರಭುಗಳು. ಹಾಗಾಗಿ ರಾಜ್ಯದ ಜನತೆಯ ಕುಂದು-ಕೊರತೆಗಳನ್ನು ಸ್ಥಳದಲ್ಲೇ ಆಲಿಸಿ, ಅವುಗಳಿಗೆ ಸಕಾಲದಲ್ಲಿ ಸೂಕ್ತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಹೊಸದಾಗಿ ಪ್ರಜಾಸೇವಾ ಇಲಾಖೆ ರಚಿಸಿ, ಸರ್ಕಾರ ಸುತ್ತೋಲೆ ಹೊರಡಿಸುವ ಮೂಲಕ ರಾಜ್ಯ ಸರ್ಕಾರ ಹೊಸ ಸೆಕೆ ಆರಂಭಿಸುವ ಮೂಲಕ ರಾಜ್ಯದ ಪ್ರಜೆಗಳಲ್ಲಿ ಹೊಸ ಹುರುಪು ತುಂಬಿದ್ದು, ರಾಜ್ಯದ ಪ್ರತಿಯೊಬ್ಬರೂ ಸರ್ಕಾರದತ್ತ ತಿರುಗಿ ನೋಡುವಂತಾಗಿದೆ.

ಯುವ ಜನತೆಯಲ್ಲಿ ಕ್ರೀಡೆ, ಸಾಂಸ್ಕೃತಿಕ ಆಸಕ್ತಿ ಮೂಡಿಸುವುದು ಹಾಗೂ ಸರ್ಕಾರದ ಗ್ಯಾರಂಟಿ ಯೋಜನೆಗಳು ಮತ್ತು ಜನಪರ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಜನಸಾಮಾನ್ಯರಿಗೆ ತಲುಪಿಸುವ ಉದ್ದೇಶದಿಂದ ಪ್ರತಿ ಗ್ರಾಮ ಪಂಚಾಯಿತಿ ಮತ್ತು ನಗರ ವಾರ್ಡ್‌ಮಟ್ಟದಲ್ಲಿ ಯುವಕರ ಸಬಲೀಕರಣಕ್ಕಾಗಿ ಭಾರತ್ ಜೋಡೋ ಯುವ ಸಂಘಗಳನ್ನು ರಚಿಸಲಾಗುತ್ತಿದೆ ಎಂದರು.

ಶಿವಮೊಗ್ಗ ಜಿಲ್ಲೆಯ 356 ಭಾರತ್‌ಜೋಡೋ ಸಂಘಗಳ ಸಂಘಗಳು ರಚನೆಯಾಗಿದ್ದು, 36000 ಮಂದಿ ಸದಸ್ಯತ್ವ ಪಡೆದುಕೊಂಡಿದ್ದಾರೆ ಎಂದ ಅವರು, ಸಂಘಗಳ ರಚನೆಯಲ್ಲಿ ತುಮಕೂರು, ಮೈಸೂರು ನಂತರ ಶಿವಮೊಗ್ಗ ಜಿಲ್ಲೆ ಮೂರನೇ ಸ್ಥಾನ ಪಡೆದುಕೊಂಡಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ಆಯನೂರು ಮಂಜುನಾಥ್‌, ಯೋಗೀಶ್‌, ಚೇತನ್‌ ಗೌಡ, ರಮೇಶ್‌, ರವಿಕುಮಾರ್‌, ಜಿ.ಡಿ.ಮಂಜುನಾಥ್‌ ಮತ್ತಿತರರು ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular