ನೋಯ್ಡಾದಲ್ಲಿ ದುಬಾರಿ ಕಾರಿನಿಂದ ದುರಂತ, ಕಾರ್ಮಿಕರಿಗೆ ಗಂಭೀರ ಗಾಯ | Watch Video

ಭಾನುವಾರ ಉತ್ತರ ಪ್ರದೇಶದ ನೋಯ್ಡಾದಲ್ಲಿ ದುಬಾರಿ ಲ್ಯಾಂಬೋರ್ಗಿನಿ ಕಾರೊಂದು ಪಾದಚಾರಿ ಮಾರ್ಗದಲ್ಲಿ ಕುಳಿತಿದ್ದ ಇಬ್ಬರು ಕಾರ್ಮಿಕರಿಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ.

ನೋಯ್ಡಾದ ಸೆಕ್ಟರ್ 94ರ ಎಂ3ಎಂ ರಿಯಾಲ್ಟಿ ಯೋಜನೆಯ ಬಳಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಧಾವಿಸಿದ ಪೋಲಿಸರು ಕಾರ್ ಚಾಲಕನನ್ನು ಬಂಧಿಸಿ, ಕಾರನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತ ಚಾಲಕ ದುಬಾರಿ ಕಾರುಗಳನ್ನು ಮಾರಾಟ ಮಾಡುವ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಪಘಾತದ ನಂತರ ಕಾರಿನಿಂದ ಹೊರಬಂದ ಚಾಲಕ, “ಯಾರಾದರೂ ಸತ್ತಿದ್ದಾರೆಯೇ?” ಎಂದು ಕೇಳುತ್ತಿರುವುದು ಕಂಡುಬಂದಿದೆ. ಈ ಘಟನೆಯ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read