HomeLive Newsನೊಯ್ಡಾದಲ್ಲಿ ಹಿಂಸಾರೂಪ ಪಡೆದ ಪ್ರತಿಭಟನೆ ಪ್ರಕರಣ: ಮಾಸ್ಟರ್ ಮೈಂಡ್ ತಮಿಳುನಾಡಿನಲ್ಲಿ ಅರೆಸ್ಟ್

ನೊಯ್ಡಾದಲ್ಲಿ ಹಿಂಸಾರೂಪ ಪಡೆದ ಪ್ರತಿಭಟನೆ ಪ್ರಕರಣ: ಮಾಸ್ಟರ್ ಮೈಂಡ್ ತಮಿಳುನಾಡಿನಲ್ಲಿ ಅರೆಸ್ಟ್

ಚೆನ್ನೈ: ವೇತನ ಹೆಚ್ಚಳಕ್ಕೆ ಆಗ್ರಹಿಸಿ ನೋಯ್ಡಾದಲ್ಲಿ ನಡೆದ ಕಾರ್ಮಿಕರ ಪ್ರತಿಭಟನೆ ಹಿಂದಿನ ಮಾಸ್ಟರ್‌ಮೈಂಡ್‌ನನ್ನು ತಮಿಳುನಾಡಿನಲ್ಲಿ ಪೊಲೀಸರು ಬಂಧಿಸಿದ್ದಾರೆ.

ನೋಯ್ಡಾದಲ್ಲಿ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸಾವಿರಾರು ಕಾರ್ಮಿಕರು, ವಿಶೇಷವಾಗಿ ಗಾರ್ಮೆಂಟ್ ಕಾರ್ಖಾನೆಗಳ ನೌಕರರು ತೀವ್ರ ಪ್ರತಿಭಟನೆ ನಡೆಸಿದ್ದರು. ನೊಯ್ಡಾದ ಎರಡನೇ ಹಂತ ಮತ್ತು ಸೆಕ್ಟರ್ 60 ಪ್ರದೇಶಗಳಲ್ಲಿ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದು, ವಾಹನಗಳಿಗೆ ಬೆಂಕಿ ಹಚ್ಚಿ, ಕಲ್ಲು ತೂರಾಟ ಮತ್ತು ವಿಧ್ವಂಸಕ ಕೃತ್ಯಗಳು ನಡೆದಿದ್ದವು. ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಲು ಲಾಠಿ ಪ್ರಹಾರ ನಡೆಸಿ ಹಲವರನ್ನು ಬಂಧಿಸಿದ್ದಾರೆ.

ಕಾರ್ಮಿಕರ ಪ್ರತಿಭಟನೆ ಹಿಂಸಾತ್ಮಕ ರೂಪ ತಳೆಯಲು ಕಾರಣನಾದ ಪ್ರಮುಖ ಆರೋಪಿಯನ್ನು ಗೌತಮ್ ಬುದ್ಧ ನಗರ ಪೊಲೀಸರು ಮತ್ತು ವಿಶೇಷ ಕಾರ್ಯಪಡೆ ಜಂಟಿಯಾಗಿ ಬಂಧಿಸಿವೆ. ಬಂಧಿತನನ್ನು ಆದಿತ್ಯ ಆನಂದ್ ಎಂದು ಗುರುತಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಮಿಳುನಾಡಿನ ತಿರುಚಿರಾಪಳ್ಳಿ ರೈಲು ನಿಲ್ದಾಣದಲ್ಲಿ ಈತನನ್ನು ಬಂಧಿಸಲಾಗಿದೆ. ಆತನ ಬಳಿ 1 ಲಕ್ಷ ರೂ. ಹಣವಿತ್ತು. ಹಂಣವನ್ನು ಜಪ್ತಿ ಮಾಡಲಾಗಿದೆ.

ಗೌತಮ್ ಬುದ್ಧ ನಗರ ಪ್ರದೇಶದಲ್ಲಿ ನಡೆದ ಕಾರ್ಮಿಕ ಚಳವಳಿಯ ಸಂದರ್ಭದಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಗಳ ಹಿಂದಿನ ಮಾಸ್ಟರ್‌ಮೈಂಡ್ ಆನಂದ್ ಎಂದು ಪೊಲೀಸರು ತಿಳಿಸಿದ್ದಾರೆ. ಆತನ ವಿರುದ್ಧ ಹಂತ-2 ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆತನ ಬಂಧನಕ್ಕಾಗಿ ಸ್ಥಳೀಯ ನ್ಯಾಯಾಲಯವು ಜಾಮೀನು ರಹಿತ ವಾರಂಟ್ ಸಹ ಹೊರಡಿಸಿತ್ತು.

ಆನಂದ್ ಜಿಲ್ಲೆಯಲ್ಲಿ ಕಾರ್ಮಿಕ ಧರಣಿ ಮತ್ತು ಪ್ರದರ್ಶನಗಳ ಸಮಯದಲ್ಲಿ ಪ್ರಚೋದನಕಾರಿ ಚಟುವಟಿಕೆಗಳನ್ನು ಆಯೋಜಿಸಿ ಹಿಂಸಾಚಾರವನ್ನು ಪ್ರಚೋದಿಸುವಲ್ಲಿ ಭಾಗಿಯಾಗಿದ್ದ ಎನ್ನಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular