HomeKarnatakaರಾಜ್ಯದಲ್ಲಿ ಮೊದಲ ಹಂತದ ಚುನಾವಣೆ: 60 ನಾಮಪತ್ರ ತಿರಸ್ಕೃತ

ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ: 60 ನಾಮಪತ್ರ ತಿರಸ್ಕೃತ

ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದ ಲೋಕಸಭೆ ಚುನಾವಣೆ ನಡೆಯಲಿರುವ 14 ಕ್ಷೇತ್ರಗಳ ಪೈಕಿ 13 ಕ್ಷೇತ್ರಗಳ ನಾಮಪತ್ರ ಪರಿಶೀಲನೆ ಕಾರ್ಯ ಪೂರ್ಣಗೊಂಡಿದ್ದು, 60 ನಾಮಪತ್ರಗಳು ತಿರಸ್ಕೃತವಾಗಿವೆ.

ಒಟ್ಟು 276 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ. 14 ಕ್ಷೇತ್ರಗಳಲ್ಲಿ ಒಟ್ಟು 358 ಅಭ್ಯರ್ಥಿಗಳಿಂದ 492 ನಾಮಪತ್ರ ಸಲ್ಲಿಕೆಯಾಗಿದ್ದು, ಅವುಗಳಲ್ಲಿ 276 ಅಭ್ಯರ್ಥಿಗಳ 384 ನಾಮಪತ್ರ ಕ್ರಮಬದ್ಧವಾಗಿವೆ ಎಂದು ಮುಖ್ಯ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಅವಧಿ ಗುರುವಾರ ಮುಕ್ತಾಯವಾಗಿತ್ತು. ಸೋಮವಾರ ನಾಮಪತ್ರ ಹಿಂಪಡೆದುಕೊಳ್ಳಲು ಕೊನೆಯ ದಿನವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular