HomeLatest NewsALERT : 'ನಾನ್ ವೆಜ್' ಪ್ರಿಯರೇ ಎಚ್ಚರ ; ಗಂಟಲಿನಲ್ಲಿ ಚಿಕನ್ ಪೀಸ್ ಸಿಲುಕಿ ಯುವಕ...

ALERT : ‘ನಾನ್ ವೆಜ್’ ಪ್ರಿಯರೇ ಎಚ್ಚರ ; ಗಂಟಲಿನಲ್ಲಿ ಚಿಕನ್ ಪೀಸ್ ಸಿಲುಕಿ ಯುವಕ ಸಾವು.!

ಶಿವಮೊಗ್ಗ : ಜಿಲ್ಲೆಯ ಕುಂಸಿ ಸಮೀಪದ ಚೆನ್ನಹಳ್ಳಿ ಗ್ರಾಮದಲ್ಲಿ ಹುಟ್ಟುಹಬ್ಬದ ಸಂಭ್ರಮದ ನಡುವೆಯೇ ಭೀಕರ ದುರಂತವೊಂದು ಸಂಭವಿಸಿದೆ. ಪಾರ್ಟಿಯಲ್ಲಿ ಮಾಂಸಾಹಾರ ಸೇವಿಸುವಾಗ ಗಂಟಲಿನಲ್ಲಿ ಚಿಕನ್ ಮೂಳೆ ಸಿಲುಕಿಕೊಂಡ ಪರಿಣಾಮ 21 ವರ್ಷದ ಸಚಿನ್ ಎಂಬ ಯುವಕ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾನೆ.

ಗುರುವಾರ ರಾತ್ರಿ ನಡೆದ ಪಾರ್ಟಿ ಮುಗಿಸಿ ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ಮಲಗಿದ್ದ ಸಚಿನ್, ಶುಕ್ರವಾರ ಬೆಳಿಗ್ಗೆ ಶವವಾಗಿ ಪತ್ತೆಯಾಗಿದ್ದಾನೆ. ಮೃತ ಯುವಕನನ್ನು ಸಚಿನ್ (21) ಎಂದು ಗುರುತಿಸಲಾಗಿದೆ. ಮರಣೋತ್ತರ ಪರೀಕ್ಷೆಯ ವರದಿಯಲ್ಲಿ, ಗಂಟಲಿನಲ್ಲಿ ಆಹಾರದ ಅವಶೇಷ ಹಾಗೂ ಮೂಳೆ ಸಿಲುಕಿ ಉಸಿರುಗಟ್ಟಿ ಸಾವು ಸಂಭವಿಸಿದೆ ಎಂದು ವೈದ್ಯರು ದೃಢಪಡಿಸಿದ್ದಾರೆ. ಈ ಘಟನೆ ಕುರಿತು ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗ್ರಾಮದಲ್ಲಿ ವಿಷಾದದ ಛಾಯೆ ಆವರಿಸಿದೆ. ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯ ಚೆನ್ನಹಳ್ಳಿ ಗ್ರಾಮದ ಹೊರವಲಯದ ನಿರ್ಮಾಣ ಹಂತದ ಕಟ್ಟಡದಲ್ಲಿ ಈ ಘಟನೆ ನಡೆದಿದೆ.

ಗ್ರಾಮಸ್ಥರೊಬ್ಬರ ಹುಟ್ಟುಹಬ್ಬದ ಪ್ರಯುಕ್ತ ಗುರುವಾರ (ಏಪ್ರಿಲ್ 17) ರಾತ್ರಿ ಪಾರ್ಟಿ ಆಯೋಜಿಸಲಾಗಿತ್ತು. ಈ ವೇಳೆ ಊಟ ಮುಗಿಸಿ ಪಕ್ಕದ ಕಟ್ಟಡಕ್ಕೆ ತೆರಳಿದ್ದ ಸಚಿನ್ ಅಲ್ಲಿಯೇ ಕುಸಿದು ಬಿದ್ದಿದ್ದನು. ಉಳಿದವರೆಲ್ಲರೂ ಮನೆಗೆ ವಾಪಸ್ಸಾಗಿದ್ದರಿಂದ ಈ ವಿಷಯ ಯಾರಿಗೂ ತಿಳಿದಿರಲಿಲ್ಲ. ಶುಕ್ರವಾರ ಬೆಳಿಗ್ಗೆ ಕೆಲಸಗಾರರು ಬಂದಾಗ ಸಚಿನ್ ಶವವಾಗಿ ಪತ್ತೆಯಾಗಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮರಣೋತ್ತರ ಪರೀಕ್ಷೆಯಲ್ಲಿ ಯುವಕ ಮದ್ಯಪಾನ ಮಾಡಿದ್ದರಿಂದ, ಆಹಾರ ಸೇವಿಸುವಾಗ ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿದ್ದೇ ಸಾವಿಗೆ ಕಾರಣ ಎಂದು ವೈದ್ಯರು ದೃಢಪಡಿಸಿದ್ದಾರೆ. ಈ ಬಗ್ಗೆ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular