HomeKarnatakaಈಶಾನ್ಯ ಪದವೀಧರರ ಕ್ಷೇತ್ರ ಚುನಾವಣೆ ಹಿನ್ನಲೆ ; ಈ ಜಿಲ್ಲೆಯಲ್ಲಿ 'ಮದ್ಯ' ಮಾರಾಟ ನಿಷೇಧ

ಈಶಾನ್ಯ ಪದವೀಧರರ ಕ್ಷೇತ್ರ ಚುನಾವಣೆ ಹಿನ್ನಲೆ ; ಈ ಜಿಲ್ಲೆಯಲ್ಲಿ ‘ಮದ್ಯ’ ಮಾರಾಟ ನಿಷೇಧ

ಬಳ್ಳಾರಿ : ಜಿಲ್ಲೆಯಲ್ಲಿ ಕರ್ನಾಟಕ ವಿಧಾನ ಪರಿಷತ್ತಿಗೆ ಕರ್ನಾಟಕ ಈಶಾನ್ಯ ಪದವೀಧರರ ಕ್ಷೇತ್ರ, ದ್ವೈವಾರ್ಷಿಕ ಚುನಾವಣೆಯ ಹಿನ್ನಲೆಯಲ್ಲಿ ಜೂನ್ 3 ರಂದು ಮತದಾನ ನಡೆಯಲಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಪ್ರಜಾಪ್ರತಿನಿಧಿ ಕಾಯ್ದೆ, 1951ರ ಕಲಂ 135-ಸಿ ಹಾಗೂ ಕರ್ನಾಟಕ ಅಬಕಾರಿ(ಸನ್ನದುಗಳ ಸಾಮಾನ್ಯ ಷರ್ತುಗಳು) ನಿಯಮಗಳು, 1967ರ ನಿಯಮ 10-ಬಿ ರಡಿಯಲ್ಲಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಜಿಲ್ಲಾದ್ಯಂತ ಎಲ್ಲಾ ರೀತಿಯ ಮದ್ಯ ಮಾರಾಟವನ್ನು ನಿಷೇಧಿಸಿ ಒಣ ದಿನ (Dry day) ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ.

ಜೂನ್ 1ರ ಸಂಜೆ 04 ಗಂಟೆಯಿಂದ ಜೂನ್ 3 ರ ಮಧ್ಯರಾತ್ರಿ 12 ಗಂಟೆಯವರೆಗೆ ಎಲ್ಲಾ ವಿವಿಧ ಮಧ್ಯದ ಅಂಗಡಿ, ಬಾರ್ ಮತ್ತು ರೆಸ್ಟೋರೆಂಟ್ಗಳನ್ನು ಮುಚ್ಚುವಂತೆಯೂ ಹಾಗೂ ಎಲ್ಲಾ ರೀತಿಯ ಮದ್ಯ ತಯಾರಿಕಾ ಹಾಗೂ ವಿತರಣ ಘಟಕಗಳು, ಸಾಗಾಣಿಕೆ, ಸಂಗ್ರಹಣೆಯನ್ನು ಮತ್ತು ಮದ್ಯ ಸಾಗಾಟವನ್ನು ನಿಷೇಧಿಸಿ ಆದೇಶಿಸಿದ್ದಾರೆ.

ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಪ್ರಜಾ ಪ್ರತಿನಿಧಿ ಕಾಯ್ದೆ 1951ರ ಕಲಂ 135ಸಿ (2) ಮತ್ತು (3) ರನ್ವಯ ಶಿಕ್ಷೆಗೆ ಒಳಪಡಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಯೂ ಆದ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶದಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular