ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆ, ಮತದಾರರಿಗೆ ಇಲ್ಲಿದೆ ಮಾಹಿತಿ

ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ನಡೆಯುತ್ತಿದ್ದು, ಅರ್ಹ ಮತದಾರರು ನಿಗದಿತ ನಮೂನೆ-19 ನ್ನು ಭರ್ತಿ ಮಾಡಿ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬೇಕು ಎಂದು ಬಳ್ಳಾರಿ ತಾಲ್ಲೂಕು ತಹಸೀಲ್ದಾರರಾದ ರೇಖಾ.ಟಿ ಅವರು ತಿಳಿಸಿದ್ದಾರೆ.

ಅರ್ಜಿಯೊಂದಿಗೆ ಶೈಕ್ಷಣಿಕ ಸಂಸ್ಥೆಗಳಲ್ಲಿ ನ.01ರ ಅರ್ಹತಾ ದಿನಾಂಕಕ್ಕೆ ಮೊದಲು 06 ವರ್ಷಗಳ ಅವಧಿಯಲ್ಲಿ ಕನಿಷ್ಠ 3 ವರ್ಷ ಬೋಧನಾ ವೃತ್ತಿಯಲ್ಲಿ ನಿರತರಾಗಿರುವ ಕುರಿತು ಶೈಕ್ಷಣಿಕ ಸಂಸ್ಥೆಗಳಿAದ ಅನುಬಂಧ-2 ರಲ್ಲಿ ಪ್ರಮಾಣ ಪತ್ರದೊಂದಿಗೆ ಬಳ್ಳಾರಿ ತಾಲ್ಲೂಕು ಕಚೇರಿಗೆ ಸಲ್ಲಿಸಬೇಕು.

ಈ ಹಿಂದೆ ಹೆಸರು ಸೇರ್ಪಡೆಯಾಗಿರುವವರು ಸಹ ಇದೀಗ ಪುನ: ನಮೂನೆ-19ರಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ನ.06 ಕೊನೆಯ ದಿನ.

ನವೆಂಬರ್ 25ರಂದು ಕರಡು ಪಟ್ಟಿ ಪ್ರಕಟವಾಗಲಿದ್ದು, ಡಿಸೆಂಬರ್ 10 ರ ವರೆಗೆ ಆಕ್ಷೇಪಣೆ ಆಹ್ವಾನಿಸಲಾಗುತ್ತದೆ. ಅಂತಿಮ ಪಟ್ಟಿ ಡಿಸೆಂಬರ್ 30ರಂದು ಪ್ರಕಟವಾಗಲಿದೆ. ಶಿಕ್ಷಕರು ನಿಗದಿತ ದಿನಾಂಕದೊಳಗೆ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಸೇರ್ಪಡೆ ಮಾಡಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read