HomeKarnatakaಉತ್ತರ ಕರ್ನಾಟಕಕ್ಕೆ ಗುಡ್‌ನ್ಯೂಸ್: ದೆಹಲಿ-ಹುಬ್ಬಳ್ಳಿ, ಬೆಳಗಾವಿಗೆ ನಿತ್ಯ ವಿಮಾನ ಸೇವೆ

ಉತ್ತರ ಕರ್ನಾಟಕಕ್ಕೆ ಗುಡ್‌ನ್ಯೂಸ್: ದೆಹಲಿ-ಹುಬ್ಬಳ್ಳಿ, ಬೆಳಗಾವಿಗೆ ನಿತ್ಯ ವಿಮಾನ ಸೇವೆ

ಉತ್ತರ ಕರ್ನಾಟಕ ಭಾಗದ ಪ್ರಯಾಣಿಕರಿಗೆ ಇಂಡಿಗೋ ಏರ್‌ಲೈನ್ಸ್ ಭರ್ಜರಿ ಸಿಹಿ ಸುದ್ದಿ ನೀಡಿದೆ. ಅಕ್ಟೋಬರ್ 1ರಿಂದ ಜಾರಿಗೆ ಬರುವಂತೆ ದೆಹಲಿ-ಹುಬ್ಬಳ್ಳಿ ಹಾಗೂ ದೆಹಲಿ-ಬೆಳಗಾವಿ ಮಾರ್ಗಗಳಲ್ಲಿ ಪ್ರತಿನಿತ್ಯ ನೇರ ವಿಮಾನ ಸೇವೆ ಆರಂಭಿಸುವುದಾಗಿ ಸಂಸ್ಥೆ ಪ್ರಕಟಿಸಿದೆ.

ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಅವರು ಪ್ರಯಾಣಿಕರ ಬೇಡಿಕೆ ಮತ್ತು ಅಗತ್ಯವನ್ನು ಪರಿಗಣಿಸಿ, ಈ ಮಾರ್ಗಗಳಲ್ಲಿ ದೈನಂದಿನ ವಿಮಾನ ಸೇವೆ ಒದಗಿಸುವಂತೆ ಇಂಡಿಗೋ ಅಧಿಕಾರಿಗಳಿಗೆ ಮನವಿ ಮಾಡಿದ್ದರು. ಸಚಿವರ ಮನವಿಗೆ ತಕ್ಷಣವೇ ಸ್ಪಂದಿಸಿರುವ ಸಂಸ್ಥೆಯು ಅಕ್ಟೋಬರ್‌ನಿಂದ ಪ್ರತಿದಿನ ಸೇವೆ ನೀಡಲು ನಿರ್ಧರಿಸಿದೆ.

https://x.com/JoshiPralhad/status/2090110494082519284

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಮಾನಗಳ ನೂತನ ವೇಳಾಪಟ್ಟಿ

ದೆಹಲಿ – ಹುಬ್ಬಳ್ಳಿ ಮಾರ್ಗ:

ವಿಮಾನ ಸಂಖ್ಯೆ 6E758: ಸಂಜೆ 4:30ಕ್ಕೆ ದೆಹಲಿಯಿಂದ ಹೊರಟು, ಸಂಜೆ 6:55ಕ್ಕೆ ಹುಬ್ಬಳ್ಳಿ ತಲುಪಲಿದೆ.

ವಿಮಾನ ಸಂಖ್ಯೆ 6E2115: ಸಂಜೆ 7:30ಕ್ಕೆ ಹುಬ್ಬಳ್ಳಿಯಿಂದ ಹೊರಟು, ರಾತ್ರಿ 10:05ಕ್ಕೆ ದೆಹಲಿಗೆ ತಲುಪಲಿದೆ.

ದೆಹಲಿ – ಬೆಳಗಾವಿ ಮಾರ್ಗ:

ವಿಮಾನ ಸಂಖ್ಯೆ 6E2511: ಬೆಳಿಗ್ಗೆ 6:15ಕ್ಕೆ ದೆಹಲಿಯಿಂದ ಹೊರಟು, ಬೆಳಿಗ್ಗೆ 8:40ಕ್ಕೆ ಬೆಳಗಾವಿ ತಲುಪಲಿದೆ.

ವಿಮಾನ ಸಂಖ್ಯೆ 6E2512: ಬೆಳಿಗ್ಗೆ 9:10ಕ್ಕೆ ಬೆಳಗಾವಿಯಿಂದ ಹೊರಟು, ಬೆಳಿಗ್ಗೆ 11:40ಕ್ಕೆ ದೆಹಲಿಗೆ ತಲುಪಲಿದೆ.

ವ್ಯಾಪಾರ, ಪ್ರವಾಸೋದ್ಯಮಕ್ಕೆ ಭಾರಿ ನೆರವು

ಈ ನಿರ್ಧಾರವನ್ನು ಸ್ವಾಗತಿಸಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, “ಹುಬ್ಬಳ್ಳಿ-ಧಾರವಾಡ ಹಾಗೂ ಬೆಳಗಾವಿ ಭಾಗದಲ್ಲಿ ನಿತ್ಯ ವಿಮಾನ ಸಂಚಾರ ಆರಂಭವಾಗುವುದರಿಂದ ವ್ಯಾಪಾರ-ವಹಿವಾಟು, ಶಿಕ್ಷಣ, ಉದ್ಯೋಗ ಮತ್ತು ಪ್ರವಾಸೋದ್ಯಮ ಕ್ಷೇತ್ರಗಳಿಗೆ ದೊಡ್ಡ ಮಟ್ಟದ ಉತ್ತೇಜನ ಸಿಗಲಿದೆ. ಉತ್ತರ ಕರ್ನಾಟಕದ ಸಂಪರ್ಕ ಜಾಲವನ್ನು ಬಲಪಡಿಸಲು ನಮ್ಮ ಪ್ರಯತ್ನ ನಿರಂತರವಾಗಿರಲಿದೆ” ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular