BIG NEWS: ಉತ್ತರ ಕರ್ನಾಟಕದಲ್ಲಿ ಹೊಸ ಬೃಹತ್ ಕೈಗಾರಿಕೆಗಳ ಸ್ಥಾಪನೆ ಘೋಷಿಸಿದ ಸಿಎಂ; ಸ್ಥಳೀಯರಿಗೆ ಉದ್ಯೋಗ ಭರವಸೆ

ಬೆಳಗಾವಿ: ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ನಿಟ್ಟಿನಲ್ಲಿ ಬೆಳಗಾವಿ ಅಧಿವೇಶನದ ಕೊನೇ ದಿನವಾದ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಲವು ಮಹತ್ವದ ಘೋಷಣೆ ಮಾಡಿದ್ದಾರೆ. ಉತ್ತರ ಕರ್ನಾಟಕದಲ್ಲಿ ಬೃಹತ್ ಕೈಗಾರಿಕೆಗಳ ಸ್ಥಾಪನೆಗೆ ಆದ್ಯತೆ ನೀಡುವುದಾಗಿ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.

ಈ ಮೂಲಕ ಮೂಲಕ ಆರ್ಥಿಕತೆಗೆ ಉತ್ತೇಜನ ನೀಡಲು ಹಾಗೂ ಸ್ಥಳೀಯರಿಗೆ ಉದ್ಯೋಗ ಒದಗಿಸಲಾಗುವುದು. ಈ ನಿಟ್ಟಿನಲ್ಲಿ ಬೆಳಗಾವಿ ಸಮೀಪ ಸುಮಾರು 2000 ಎಕರೆ ಪ್ರದೇಶದಲ್ಲಿ ಹೊಸ ಕೈಗಾರಿಕಾ ಪ್ರದೇಶ, 500 ಎಕರೆ ಪ್ರದೇಶದಲ್ಲಿ ಫೌಂಡ್ರಿ ಕ್ಲಸ್ಟರ್ ಅನ್ನು ಸ್ಥಾಪಿಸಲಾಗುವುದು ಹಾಗೂ ಜಿಲ್ಲೆಯಲ್ಲಿ ಏರೋಸ್ಪೇಸ್ ಆಧಾರಿತ ಕೈಗಾರಿಕೆಗಳ ಬೆಳವಣಿಗೆಗೆ ವಿಶೇಷ ಒತ್ತು ನೀಡಲಾಗುವುದು ಎಂದರು.

ಧಾರವಾಡ ಜಿಲ್ಲೆಯಲ್ಲಿ ಕೈಗಾರಿಕಾ ಕ್ಲಸ್ಟರ್ ಸ್ಥಾಪಿಸಲಾಗುತ್ತಿದೆ. ಈಗಾಗಲೇ 19 ಘಟಕಗಳು ರೂ.1255 ಕೋಟಿ ಬಂಡವಾಳ ಹೂಡಿಕೆ ಮಾಡುತ್ತಿದ್ದು, ಸುಮಾರು 2450 ಜನರಿಗೆ ಉದ್ಯೋಗ ದೊರೆಯುವ ನಿರೀಕ್ಷೆ ಇದೆ. ಅಲ್ಲದೇ, ಧಾರವಾಡದ ಸಮೀಪ ಸುಮಾರು 3000 ಎಕರೆ ಪ್ರದೇಶದಲ್ಲಿ ಹೊಸ ಕೈಗಾರಿಕಾ ಪ್ರದೇಶವನ್ನು ನಿರ್ಮಿಸಲಾಗುವುದು ಎಂದು ತಿಳಿಸಿದರು.

ರಾಯಚೂರಿನಲ್ಲಿ ಹತ್ತಿ ಅಧಾರಿತ ಕೈಗಾರಿಕೆಗಳನ್ನು ಸ್ಥಾಪಿಸುವ ಮೂಲಕ ಆರ್ಥಿಕ ಅಭಿವೃದ್ಧಿ ಹಾಗೂ ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸಲು ಒತ್ತು ನೀಡಲಾಗುವುದು. ವಿಜಯಪುರದಲ್ಲಿ ಉತ್ಪಾದನಾ ಕ್ಲಸ್ಟರ್ ಅನ್ನು ಅಂದಾಜು 1500 ಎಕರೆ ಪ್ರದೇಶದಲ್ಲಿ ಸ್ಥಾಪಿಸಲಾಗುವುದು ಎಂದರು.

ಉತ್ತರ ಕರ್ನಾಟಕವು ಸಮೃದ್ಧ ಪ್ರವಾಸೋದ್ಯಮಗಳ ತಾಣವಾಗಿದೆ. ಐತಿಹಾಸಿಕ ಮಹತ್ವವಿರುವ ಈ ತಾಣಗಳು ಅಂತರರಾಷ್ಟ್ರೀಯವಾಗಿಯೂ ಮಹತ್ವ ಪಡೆದಿವೆ. ಆದರೆ ಇದಕ್ಕೆ ಸಾಕಷ್ಟು ಮಹತ್ವ ನೀಡದೆ ಹಿನ್ನಡೆಯನ್ನು ಅನುಭವಿಸುತ್ತಿದೆ. ರಾಜ್ಯ ಸರ್ಕಾರ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದು, ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು ಸಮಗ್ರ ಕ್ರಿಯಾಯೋಜನೆಯನ್ನು ರೂಪಿಸಿ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read