HomeIndiaವಾರದಲ್ಲಿ 70 ಗಂಟೆ ಕೆಲಸ: ಇನ್ಫೋಸಿಸ್ ನಾರಾಯಣ ಮೂರ್ತಿ ಹೇಳಿಕೆಯನ್ನು ಬೆಂಬಲಿಸಿದ 'ಕೈ' ಸಂಸದ...!

ವಾರದಲ್ಲಿ 70 ಗಂಟೆ ಕೆಲಸ: ಇನ್ಫೋಸಿಸ್ ನಾರಾಯಣ ಮೂರ್ತಿ ಹೇಳಿಕೆಯನ್ನು ಬೆಂಬಲಿಸಿದ ‘ಕೈ’ ಸಂಸದ…!

ಕೆಲ ದಿನಗಳ ಹಿಂದೆ ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿಯವರು, ಭಾರತವನ್ನು ಶಕ್ತಿಶಾಲಿ ರಾಷ್ಟ್ರವನ್ನಾಗಿ ಮಾಡಲು ಉದ್ಯೋಗಿಗಳು ವಾರದಲ್ಲಿ 70 ಗಂಟೆ ಕೆಲಸ ಮಾಡಬೇಕು ಎಂಬ ಹೇಳಿಕೆ ನೀಡಿದ್ದು, ಇದಕ್ಕೆ ಪರ – ವಿರೋಧದ ಅಭಿಪ್ರಾಯಗಳು ವ್ಯಕ್ತವಾಗಿದ್ದವು.

ನಾರಾಯಣ ಮೂರ್ತಿಯವರ ಹೇಳಿಕೆ ಕುರಿತಂತೆ ಈಗಲೂ ಚರ್ಚೆಗಳು ನಡೆದಿರುವ ಮಧ್ಯೆ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ, ವಾರದಲ್ಲಿ 70 ಗಂಟೆ ಕೆಲಸ ಮಾಡುವ ನಾರಾಯಣ ಮೂರ್ತಿಯವರ ಹೇಳಿಕೆಯನ್ನು ಸಮರ್ಥನೆ ಮಾಡಿಕೊಂಡಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮನೀಶ್ ತಿವಾರಿ, ಜನಪ್ರತಿನಿಧಿಗಳಾದ ನಾವುಗಳು ಪ್ರತಿದಿನ 12 ರಿಂದ 15 ಗಂಟೆಗಳ ಕಾಲ ಕೆಲಸ ಮಾಡುತ್ತೇವೆ. ಹೀಗಿರುವಾಗ ವಾರದಲ್ಲಿ 70 ಗಂಟೆ ಕೆಲಸ ಮಾಡುವುದು ದೊಡ್ಡ ವಿಷಯವಲ್ಲ ಎಂದಿರುವ ಅವರು, ನಾರಾಯಣ ಮೂರ್ತಿಯವರ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ ಎಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular