ನವದೆಹಲಿ: ಬಿಜೆಪಿಗೆ ಸೇರುತ್ತಿಲ್ಲ ಎಂದು ದೆಹಲಿ ಕಾಂಗ್ರೆಸ್ ಮುಖ್ಯಸ್ಥ ಸ್ಥಾನಕ್ಕೆ ನಾಟಕೀಯವಾಗಿ ರಾಜೀನಾಮೆ ನೀಡಿದ ನಂತರ ಅರವಿಂದರ್ ಸಿಂಗ್ ಲವ್ಲಿ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದ ದೆಹಲಿ ಘಟಕದ ಮುಖ್ಯಸ್ಥ ಸ್ಥಾನಕ್ಕೆ ಹಠಾತ್ ರಾಜೀನಾಮೆ ನೀಡಿರುವ ಅವರು, ಯಾವುದೇ ಪಕ್ಷ ಅಥವಾ ಬಿಜೆಪಿಗೆ ಸೇರುವುದಿಲ್ಲ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.
ಲವ್ಲಿ ಬಿಜೆಪಿ ಟಿಕೆಟ್ನಲ್ಲಿ ಚುನಾವಣೆ ಎದುರಿಸಲಿದ್ದಾರೆ ಎಂದು ಎಎಪಿಯ ಸೌರಭ್ ಭಾರದ್ವಾಜ್ ಆರೋಪಿಸಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಭಾರದ್ವಾಜ್ ಅವರಿಗೆ ಇಷ್ಟೆಲ್ಲಾ ತಿಳಿದಿದೆ. ಅವರು ಬೇರೆ ಪಕ್ಷಗಳ ಪರವೂ ನಿರ್ಧಾರ ತೆಗೆದುಕೊಳ್ಳುತ್ತಾರಾ ಎಂದು ಹೇಳಿದ್ದಾರೆ.
ಸುಮಾರು 35-36 ಕಾಂಗ್ರೆಸ್ ಮಾಜಿ ಶಾಸಕರು ತಮ್ಮನ್ನು ಭೇಟಿಯಾಗಲು ಆಗಮಿಸಿದ್ದರು. ನನ್ನ ನಿರ್ಧಾರದ ಬಗ್ಗೆ ಮಾತನಾಡಿದ್ದಾರೆ ಎಂದು ಹೇಳಿದ ಲವ್ಲಿ ತನ್ನ ಭವಿಷ್ಯದ ಯೋಜನೆಗಳ ಬಗ್ಗೆ ಹೆಚ್ಚಿನದನ್ನು ಬಹಿರಂಗಪಡಿಸಲು ನಿರಾಕರಿಸಿದರು.
ದೆಹಲಿಯಲ್ಲಿ ಪಕ್ಷದ ಇತ್ತೀಚಿನ ಬೆಳವಣಿಗೆಗಳಿಂದ ಹಲವಾರು ಕಾಂಗ್ರೆಸ್ ಕಾರ್ಯಕರ್ತರು “ನೋವು” ಹೊಂದಿದ್ದಾರೆ ಎಂದು ಅವರು ಸೂಚ್ಯವಾಗಿ ಹೇಳಿದರು.
#WATCH | Delhi: On being asked about Delhi minister Saurabh Bharadwaj's claim that Arvinder Singh Lovely will contest elections on BJP's ticket, he says, "I thank Saurabh Bharadwaj for his wishes. I think he makes the decisions on behalf of other parties. I have clearly said that… pic.twitter.com/fdx4Io9j69
— ANI (@ANI) April 28, 2024