HomeLatest Newsಕೇವಲ ರಾಜಕೀಯ ಪ್ರೇರಿತ ರಾಜ್ಯಮಟ್ಟದ ಸಮೀಕ್ಷೆ ವಿಶ್ವಾಸಾರ್ಹತೆ, ಏಕರೂಪತೆ ಹೊಂದಿರಲ್ಲ: HDK | Caste Census

ಕೇವಲ ರಾಜಕೀಯ ಪ್ರೇರಿತ ರಾಜ್ಯಮಟ್ಟದ ಸಮೀಕ್ಷೆ ವಿಶ್ವಾಸಾರ್ಹತೆ, ಏಕರೂಪತೆ ಹೊಂದಿರಲ್ಲ: HDK | Caste Census

ಮುಂಬರುವ ಜನಗಣತಿ ಜೊತೆಯಲ್ಲಿಯೇ ಜಾತಿ ಗಣತಿಯನ್ನೂ ನಡೆಸುವ ಮಹತ್ವದ ನಿರ್ಧಾರವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೈಗೊಳ್ಳಲಾಗಿದೆ. ಅವರ ಕ್ರಿಯಾಶೀಲ ನಾಯಕತ್ವದಲ್ಲಿ ಇದು ಐತಿಹಾಸಿಕ ಮತ್ತು ದೂರದೃಷ್ಟಿಯ ನಿರ್ಧಾರವಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ಜಾತಿ ಗಣತಿಯು 1931ರ ನಂತರ ಇದೇ ಮೊದಲ ಬಾರಿಗೆ ಮುಂಬರುವ ರಾಷ್ಟ್ರೀಯ ಜನಗಣತಿಯ ಭಾಗವಾಗಲಿದೆ ಎಂಬುದು ಗಮನಾರ್ಹ. ಈ ಮಹತ್ವದ ಹೆಜ್ಜೆಯು ಭಾರತವು ಅಧಿಕೃತ, ವೈಜ್ಞಾನಿಕ ಮತ್ತು ಪಾರದರ್ಶಕವಾದ ಜಾತಿ ದತ್ತಾಂಶ ಹೊಂದಲಿದೆ. ಕೇವಲ ರಾಜಕೀಯ ಪ್ರೇರಿತ ರಾಜ್ಯ ಮಟ್ಟದ ಸಮೀಕ್ಷೆಗಳು ವಿಶ್ವಾಸಾರ್ಹತೆ, ಏಕರೂಪತೆ ಹೊಂದಿರುವುದಿಲ್ಲ ಎಂಬುದು ನನ್ನ ಸ್ಪಷ್ಟ ಅಭಿಪ್ರಾಯ ಎಂದು ಹೇಳಿದ್ದಾರೆ.

ಈ ದಿಟ್ಟ ಕ್ರಮದೊಂದಿಗೆ ಪ್ರಧಾನಿ ಮೋದಿ ಅವರು ಸಮಗ್ರ ಆಡಳಿತ ಮತ್ತು ದತ್ತಾಂಶ ಚಾಲಿತ ನೀತಿ ನಿರೂಪಣೆ ಬಗ್ಗೆ ಹೊಂದಿರುವ ತಮ್ಮ ಅಚಲ ಬದ್ಧತೆಯನ್ನು ಪ್ರದರ್ಶಿಸಿದ್ದಾರೆ. ಅಲ್ಲದೇ, ಈ ಗಣತಿಯು ಕಲ್ಯಾಣ ಕಾರ್ಯಕ್ರಮಗಳನ್ನು ಬಲಗೊಳಿಸುತ್ತದೆ, ಸಾಮಾಜಿಕ ನ್ಯಾಯವನ್ನು ಇನ್ನಷ್ಟು ಖಚಿತಪಡಿಸುತ್ತದೆ ಹಾಗೂ ಸರ್ವರಿಗೂ ಸಮಾನ ಅವಕಾಶಗಳನ್ನು ಸೃಷ್ಟಿಸುತ್ತದೆ ಎಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಷ್ಟ್ರದ ಹಿತದೃಷ್ಟಿಯಿಂದ ಈ ನಿರ್ಣಾಯಕ ಮತ್ತು ದೂರದೃಷ್ಟಿಯ ನಿರ್ಧಾರಕ್ಕಾಗಿ ಪ್ರಧಾನಮಂತ್ರಿಯವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಈ ನಿರ್ಧಾರವನ್ನು ನಾನು, ನಮ್ಮ ಪಕ್ಷವು ಸ್ವಾಗತಿಸುತ್ತದೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular