HomeLatest NewsBREAKING : ಸ್ಪೀಕರ್ ಯು.ಟಿ ಖಾದರ್’ಗೆ ಮಾತ್ರವಲ್ಲ ನನಗೂ ಜೀವ ಬೆದರಿಕೆ ಕರೆ ಬಂದಿದೆ :...

BREAKING : ಸ್ಪೀಕರ್ ಯು.ಟಿ ಖಾದರ್’ಗೆ ಮಾತ್ರವಲ್ಲ ನನಗೂ ಜೀವ ಬೆದರಿಕೆ ಕರೆ ಬಂದಿದೆ : CM ಸಿದ್ದರಾಮಯ್ಯ ಹೇಳಿಕೆ

ಮಂಡ್ಯ : ಸ್ಪೀಕರ್ ಖಾದರ್’ ಗೆ ಮಾತ್ರವಲ್ಲ ನನಗೂ ಜೀವ ಬೆದರಿಕೆ ಕರೆ ಬಂದಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮಂಡ್ಯದ ತೂಬಿನಕೆರೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಸ್ಪೀಕರ್ ಯು.ಟಿ ಖಾದರ್’ ಗೆ ಮಾತ್ರವಲ್ಲ ನನಗೂ ಜೀವ ಬೆದರಿಕೆ ಕರೆ ಬಂದಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಅಂಡರ್ ವರ್ಲ್ಡ್ ನಿಂದ ನನಗೆ ಜೀವ ಬೆದರಿಕೆ ಕರೆ : ಯುಟಿ ಖಾದರ್

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಂಡರ್ ವರ್ಲ್ಡ್ ನಿಂದ ನನಗೆ ಜೀವ ಬೆದರಿಕೆ ಕರೆಗಳು ಬಂದಿವೆ ಎಂದು ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ತಿಳಿಸಿದ್ದಾರೆ.ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಗುರುವಾರ ಬೀದರ್ ನಗರಕ್ಕೆ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಅಂಡರ್ ವರ್ಲ್ಡ್ ಸೇರಿ ಕೆಲವು ಕಡೆಗಳಿಂದ ನನಗೂ ಜೀವ ಬೆದರಿಕೆ ಕರೆಗಳು ಬಂದಿವೆ ಎಂದರು.ಪಿಎಫ್ಐ ನಿಂದ ಖಾದರ್ ರವರಿಗೆ ಜೀವ ಬೆದರಿಕೆ ಕರೆ ಬಂದಿದೆ ಎಂಬ ಅನುಪಮಾ ಶೆಣೈ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ನನಗೆ ಜೀವ ಬೆದರಿಕೆ ಬಂದಿದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಈ ಹಿಂದೆಯೂ ಕೆಲವು ಬಾರಿ ನನಗೆ ಜೀವ ಬೆದರಿಕೆ ಕರೆಗಳು ಬಂದಿವೆ. ನನಗಾಗಿ ಮಂಗಳೂರಿನಲ್ಲಿ ಎನ್ಐಎ ಸ್ಥಾಪಿಸುವುದು ಬೇಡ. ಜಿಲ್ಲೆಯ ಜನಕ್ಕಾಗಿ ಮಾಡುವುದಾದರೆ ಮಾಡಲಿ. ಎಲ್ಲಿ ಹುಟ್ಟಬೇಕು, ಎಲ್ಲಿ ಸಾಯಬೇಕು ಎಂಬುದನ್ನು ಆ ದೇವರು ಬರೆದಿದ್ದಾನೆ. ನೆಮ್ಮದಿಯಾಗಿ ಸಾಯುವ ಪರಿಸ್ಥಿತಿ ಮಾಡಿಕೊಡಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ದೇವರು ಇಟ್ಟಂತೆ ಇರಲಿ, ನಮ್ಮ ಕೈಯಲ್ಲಿ ಏನೂ ಇಲ್ಲ ಈಗ ಮಾತನಾಡುತ್ತಿದ್ದೇನೆ. ಮರಳಿ ಮತ್ತೆ ಹೋಗುತ್ತೇನೆ ಎನ್ನುವ ಗ್ಯಾರಂಟಿ ಇಲ್ಲ ಎಂದು ಖಾದರ್ ಹೇಳಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular