HomeKarnatakaಮನೆಯ ಯಜಮಾನಿಯರೇ ಗಮನಿಸಿ : `ಗೃಹಲಕ್ಷ್ಮೀ’ ಯೋಜನೆಗೆ ಆಧಾರ್, ಪಡಿತರ ಚೀಟಿ ಕಡ್ಡಾಯ

ಮನೆಯ ಯಜಮಾನಿಯರೇ ಗಮನಿಸಿ : `ಗೃಹಲಕ್ಷ್ಮೀ’ ಯೋಜನೆಗೆ ಆಧಾರ್, ಪಡಿತರ ಚೀಟಿ ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಮಹಿಳೆಯರಿಗೆ 2,000 ರೂ. ಭತ್ಯೆ ನೀಡುವ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವಾಗ ಆಧಾರ್ ಸಂಖ್ಯೆ, ಬಿಪಿಎಲ್ ಪಡಿತರ ಚೀಟಿ ಕಡ್ಡಾಯ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸ್ವೀಕರಿಸುವ ಪ್ರಕ್ರಿಯೆ ಶೀಘ್ರವೇ ಆರಂಭವಾಗಲಿದ್ದು, ಇಂದು ಉಡುಪಿ ಜಿಲ್ಲೆಗೆಭೇಟಿ ನೀಡಿ ಮರಳಿದ ಬಳಿಕ ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಬಗ್ಗೆ ಅಧಿಕೃತ ಚಾಲನೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉಡುಪಿ ಜಿಲ್ಲೆಯಲ್ಲಿ ಮಳೆಯ ಆರ್ಭಟಕ್ಕೆ ಜನಜೀವನ ಅಸ್ತವ್ಯಸ್ಥಗೊಂಡಿದ್ದು, ಇಂದು ಜಿಲ್ಲೆಗೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ನೀಡಲಿದ್ದಾರೆ.  ಹಾನಿ ವೀಕ್ಷಿಸಿದ ಬಳಿಕ ಅಧಿಕಾರಿಗಳ ಸಭೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

 

 

For Latest News Updates, Join Our Whatsapp Community🚩
RELATED ARTICLES

Most Popular