ಗಮನಿಸಿ: ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ; ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಸೂಚನೆ

ಕೋಲಾರ: 2018ರಲ್ಲಿ 'ನೋಟಾ' ಚಲಾಯಿಸಿದ್ದ 6 ಸಾವಿರ ಮಂದಿ!ಕೋಲಾರ: ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2024ರ ಸಂಬಂಧ ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ನಾಲ್ಕು ಅರ್ಹತಾ ದಿನಾಂಕಗಳಲ್ಲಿ ಅಂದರೆ (1ನೇ ಜನವರಿ, 1ನೇ ಏಪ್ರಿಲ್, 1ನೇ ಜುಲೈ ಹಾಗೂ 1ನೇ ಅಕ್ಟೋಬರ್) 17+ ವರ್ಷ ತುಂಬಿದವರನ್ನು ದಿನಾಂಕ: 01-01-2024ಕ್ಕೆ ನಿರೀಕ್ಷಿತ ಮತದಾರರೆಂದು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲು ನಿರ್ದೇಶಿಸಲಾಗಿರುತ್ತದೆ.

ಬಹುತೇಕ 17+ ವರ್ಷದ ವಯಸ್ಸಿನವರು ಪದವಿ ಪೂರ್ವ ಹಾಗೂ ಪದವಿ ಕಾಲೇಜಿನ ವಿದ್ಯಾರ್ಥಿಗಳಾಗಿರುವುದರಿಂದ, ವಿದ್ಯಾರ್ಥಿಗಳಿಗೆ ಮತದಾರರ ಪಟ್ಟಿಗೆ ಸೇರ್ಪಡೆ ಮಾಡುವ ಕುರಿತು ಅರಿವು ಮೂಡಿಸುವುದರಿಂದ ಬಹಳಷ್ಟು ಅರ್ಹ ಯುವ ಮತದಾರರು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಬೇಕಾಗಿರುತ್ತದೆ.

ಆದ್ದರಿಂದ, ಜಿಲ್ಲೆಯ ಎಲ್ಲಾ ಪದವಿಪೂರ್ವ ಕಾಲೇಜು ಹಾಗೂ ಪದವಿ ಕಾಲೇಜಿನ ಪ್ರಾಂಶುಪಾಲರುಗಳು ಅವರ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮತದಾರರ ಪಟ್ಟಿಗೆ ವೋಟರ್ ಹೆಲ್ಪ್‌ಲೈನ್ ಆಪ್ ಮೂಲಕ ಸೇರ್ಪಡೆ ಮಾಡಿಕೊಳ್ಳುವಂತೆ ತಮ್ಮ ಪಾಠ ಪ್ರವಚನದ ಸಮಯದಲ್ಲಿ ಈ ಕುರಿತು ತಪ್ಪದೇ ಎಲ್ಲಾ 17+ ವಯಸ್ಸಿನ ವಿದ್ಯಾರ್ಥಿಗಳಿಗೆ ಅರಿವು ಮೂಡಿಸತಕ್ಕದ್ದು ಹಾಗೂ ಈ ರೀತಿ ಅರಿವು ಮೂಡಿಸಿದ ಬಗ್ಗೆ ಅವರ ಕಾಲೇಜಿನಲ್ಲಿ ಮತದಾರರ ಪಟ್ಟಿಗೆ ಸೇರ್ಪಡೆಯಾದ ಯುವ ಮತದಾರರ ಪಟ್ಟಿಯನ್ನು ಮತ್ತು ಅನುಪಾಲನಾ ವರದಿಯನ್ನು ಈ ಕಛೇರಿಗೆ ಅತೀ ಜರೂರಾಗಿ ತಪ್ಪದೇ ಕಳುಹಿಸತಕ್ಕದ್ದು.

ಮುಂದುವರೆದಂತೆ, ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ದಿನಾಂಕ: 01-08-2023 ರಿಂದ 21-08-2023 ರವರೆಗೆ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2024ರ ಸಂಬಂಧ ಮನೆ ಮನೆ ಭೇಟಿ ಸಮೀಕ್ಷೆಯು ಕೈಗೊಳ್ಳುತ್ತಿರುವುದರಿಂದ ಸದರಿ ಮನೆ ಮನೆ ಭೇಟಿ ಸಮೀಕ್ಷೆಗೆ ಎಲ್ಲಾ ಮತಗಟ್ಟೆ ಹಂತದ ಅಧಿಕಾರಿಗಳು ಅವರ ಮತಗಟ್ಟೆ ವ್ಯಾಪ್ತಿಗೆ ಒಳಪಡುವ ಮತದಾರರ ಮನೆಗೆ ಭೇಟಿ ನೀಡುವ ಸಂದರ್ಭದಲ್ಲಿ ಬಿ.ಎಲ್.ಒ ರವರಿಗೆ ಸೂಕ್ತ ಮಾಹಿತಿಯನ್ನು ನೀಡಿ ಸಹಕರಿಸುವಂತೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸತಕ್ಕದ್ದು.

ಮನೆ ಮನೆ ಭೇಟಿ ಸಮೀಕ್ಷೆಯಲ್ಲಿ ನಿರತರಾದ ಜಿಲ್ಲೆಯ ಎಲ್ಲಾ ಮತಗಟ್ಟೆ ಹಂತದ ಅಧಿಕಾರಿಗಳು ಹಾಗೂ ಬಿ.ಎಲ್.ಒ ಮೇಲ್ವಿಚಾರಕರ ವಿವರಗಳನ್ನು ಈ ಜಿಲ್ಲೆಯ ಎನ್.ಐ.ಸಿ ವೆಬ್ಸೈಟ್ https://kolar.nic.in/en/election/ ನಲ್ಲಿ ಲಭ್ಯವಿರುತ್ತದೆ ಎಂದು ಕೋಲಾರ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read