ಗಮನಿಸಿ : ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿಗೆ ಜ.12 ರವರೆಗೆ ಅವಕಾಶ

ಬೆಂಗಳೂರು : ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿಗೆ  ಜ.12 ರವರೆಗೆ ಅವಕಾಶವಿದೆ ಬಿಬಿಎಂಪಿ ಆಯುಕ್ತ ಹಾಗೂ ಬೆಂಗಳೂರು ನಗರ ಜಿಲ್ಲಾ ಮುಖ್ಯ ಚುನಾವಣಾಧಿಕಾರಿ ‘ತುಷಾರ್ ಗಿರಿನಾಥ್’ ಹೇಳಿದರು.

ಶನಿವಾರ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರ ಪಟ್ಟಿಗೆ ಹೆಸರು ಸೇರಿಸುವುದು, ತಿದ್ದುಪಡಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಕೆ ಅವಧಿಯನ್ನು ಜ.12ಕ್ಕೆ ಮುಂದೂಡಲಾಗಿದೆ. ಈ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಂತೆ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ತಿಳಿಸಿದರು.

ಅಂತಿಮ ಮತದಾರ ಪಟ್ಟಿಯನ್ನು ಜ.5ಕ್ಕೆ ಪ್ರಕಟಗೊಳಿಸಲು ದಿನಾಂಕ ನಿಗದಿ ಪಡಿಸಲಾಗಿತ್ತು. ಲೋಕಸಭಾ ಚುನಾವಣೆ ಇರುವುದರಿಂದ ಜ.22ಕ್ಕೆ ಮುಂದೂಡಲಾಗಿದೆ. ಸಾರ್ವಜನಿಕರು ಮತದಾರ ಪಟ್ಟಿಗೆ ಹೆಸರು ಸೇರಿಸುವುದು, ತಿದ್ದುಪಡಿಗೆ ಸಂಬಂಧಿಸಿದಂತೆ ಅರ್ಜಿಗಳನ್ನು ಜ.12ರ ವರೆಗೆ ಸಲ್ಲಿಕೆ ಮಾಡಬಹುದು ಎಂದು ಅವರು ಮಾಹಿತಿ ನೀಡಿದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read