HomeKarnatakaಗಮನಿಸಿ: ಪೀಣ್ಯ ಫ್ಲೈ ಓವರ್ ನಲ್ಲಿ ಆ. 12ರವರೆಗೆ ಎಲ್ಲ ರೀತಿ ವಾಹನಗಳ ಸಂಚಾರ ನಿರ್ಬಂಧ

ಗಮನಿಸಿ: ಪೀಣ್ಯ ಫ್ಲೈ ಓವರ್ ನಲ್ಲಿ ಆ. 12ರವರೆಗೆ ಎಲ್ಲ ರೀತಿ ವಾಹನಗಳ ಸಂಚಾರ ನಿರ್ಬಂಧ

ಬೆಂಗಳೂರು: ಡಾಂಬರೀಕರಣ ಕಾಮಗಾರಿ ಕೈಗೊಂಡ ಹಿನ್ನೆಲೆಯಲ್ಲಿ ಪೀಣ್ಯ ಮೇಲ್ಸೇತುವೆ ಮೇಲೆ ಆಗಸ್ಟ್ 3ರಿಂದ 12ರವರೆಗೆ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ.

ರಾಷ್ಟ್ರೀಯ ಹೆದ್ದಾರಿ 4ರ ಪೀಣ್ಯ ಎಲಿವೇಟೆಡ್ ಫ್ಲೈಓವರ್ ಮೇಲೆ ಡಾಂಬರೀಕರಣ ಕಾಮಗಾರಿಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕೈಗೊಂಡಿದೆ.

ಸಾರ್ವಜನಿಕರ ಸುಗಮ ಸಂಚಾರದ ದೃಷ್ಟಿಯಿಂದ ಆಗಸ್ಟ್ 3ರಿಂದ 12 ರವರೆಗೆ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಶನಿವಾರ ಮತ್ತು ಭಾನುವಾರ ರಾತ್ರಿ 12 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಎಲ್ಲಾ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಷ್ಟ್ರೀಯ ಹೆದ್ದಾರಿ 4ರ ಪೀಣ್ಯ ಎಲಿವೇಟೆಡ್ ಫ್ಲೈಓವರ್ ಮೇಲೆ ಎಸ್‌ಆರ್‌ಎಸ್‌ ಅಪ್ಪರ್ ರ್ಯಾಂಪ್ ನಿಂದ ಕೆನ್ನ ಮೆಟಲ್ ವಿಡಿಯಾ ಡೌನ್ ಲ್ಯಾಂಪ್ ವರೆಗೆ ಸಂಚಾರ ನಿರ್ಬಂಧಿಸಲಾಗಿದೆ.

ನೆಲಮಂಗಲ ಕಡೆಗೆ ಸಂಚರಿಸುವ ವಾಹನಗಳು ಎಸ್.ಆರ್.ಎಸ್. ಅಪ್ಪರ್ ರ್ಯಾಂಪ್ ಕೆಳಭಾಗದ ಎನ್.ಹೆಚ್. 4 ರಸ್ತೆ ಮತ್ತು ಸರ್ವಿಸ್ ರಸ್ತೆ ಮೂಲಕ ಎಸ್.ಆರ್.ಎಸ್. ಜಂಕ್ಷನ್, ಪೀಣ್ಯ ಠಾಣೆ ಜಂಕ್ಷನ್, ಜಾಲಹಳ್ಳಿ ಕ್ರಾಸ್, ದಾಸರಹಳ್ಳಿ ಜಂಕ್ಷನ್, 8ನೇ ಮೈಲಿ ಜಂಕ್ಷನ್, ಪಾರ್ಲೆ ಜಿ ಟೋಲ್ ಮೂಲಕ ಸಂಚರಿಸಬಹುದಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular