HomeKarnatakaಗಮನಿಸಿ : ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ ಮೆಂಟ್ ತರಬೇತಿಗಾಗಿ ಅರ್ಜಿ ಆಹ್ವಾನ

ಗಮನಿಸಿ : ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ ಮೆಂಟ್ ತರಬೇತಿಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್, ಶಿವಮೊಗ್ಗ ತರಬೇತಿ ಸಂಸ್ಥೆಯಲ್ಲಿ 2024ನೇ ಜನವರಿಯಿಂದ ಆರು ತಿಂಗಳ ರೆಗ್ಯುಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿಯನ್ನು ಆಯೋಜಿಸಿದ್ದು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಅಭ್ಯರ್ಥಿಗಳಿಂದ ಹಾಗೂ ಸಹಕಾರ ಸಂಘ/ಬ್ಯಾಂಕ್ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಂದ ಅರ್ಜಿ ಆಹ್ವಾನಿಸಿದೆ.

ತರಬೇತಿ ಪಡೆಯುವ ಅಭ್ಯರ್ಥಿಗಳಿಗೆ ಮಾಸಿಕ ರೂ. 500/- ಹಾಗೂ ವಿಶೇಷ ತರಬೇತಿ ಅನ್ವಯ 30 ವರ್ಷದೊಳಗಿನ ಪ.ಜಾತಿ/ಪ.ಪಂ.ದ ಅಭ್ಯರ್ಥಿಗಳಿಗೆ ಮಾಸಿಕ ರೂ. 600/- ಶಿಷ್ಯವೇತನ ನೀಡಲಾಗುವುದು.
ಆಸಕ್ತರು ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್, ವಿನೋಬನಗರ, ಶಿವಮೊಗ್ಗ ಇಲ್ಲಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಡಿ. 15 ರೊಳಗಾಗಿ ಸಲ್ಲಿಸುವಂತೆ ಇನ್ಸ್ಟಿಟ್ಯೂಟ್ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-248873/ 7022429440 ಗಳನ್ನು ಸಂಪರ್ಕಿಸುವುದು ಎಂದು ಪ್ರಕಟಣೆ ತಿಳಿಸಿದೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular