HomeKarnatakaಗಮನಿಸಿ : ರಾಜ್ಯ ಸರ್ಕಾರದಿಂದ ಉದ್ಯಮಶೀಲತಾ ಅಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ

ಗಮನಿಸಿ : ರಾಜ್ಯ ಸರ್ಕಾರದಿಂದ ಉದ್ಯಮಶೀಲತಾ ಅಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ

ಬಳ್ಳಾರಿ : ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಇವರ ಪ್ರಾಯೋಜಕತ್ವದಲ್ಲಿ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ(ಸಿಡಾಕ್)ದ ವತಿಯಿಂದ ಸ್ವಂತ ಉದ್ಯೋಗ ಸ್ಥಾಪಿಸಲು ಇಚ್ಚಿಸುವವರಿಗಾಗಿ 10 ದಿನಗಳ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಹಮ್ಮಿಕೊಳ್ಳಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ತರಬೇತಿ ಕಾರ್ಯಕ್ರಮವನ್ನು ಫೆಬ್ರುವರಿ ಮೂರನೇ ವಾರದಲ್ಲಿ ಹಮ್ಮಿಕೊಳ್ಳಲಾಗುತ್ತದೆ. ತರಬೇತಿಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸರ್ಕಾರದ ಸ್ವಂತ ಉದ್ಯೋಗ ಯೋಜನೆಗಳು, ಬ್ಯಾಂಕಿನ ವ್ಯವಹಾರ, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ, ಹಾಗೂ ಉದ್ಯಮ ನಿರ್ವಹಣೆ, ಇತ್ಯಾದಿ ವಿಷಯಗಳ ಕುರಿತು ತರಬೇತಿಯನ್ನು ನೀಡಲಾಗುವುದು. ಬಳ್ಳಾರಿ ಜಿಲ್ಲೆಯ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು 18 ವರ್ಷ ದಿಂದ 45 ವರ್ಷ ವಯಸ್ಸಿನವರಾಗಿರಬೇಕು. ಓದಲು/ಬರೆಯಲು ಬರುತ್ತಿರಬೇಕು. ಮಹಿಳೆಯರಿಗೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದವರಿಗೆ ಆದ್ಯತೆ ನೀಡಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅರ್ಜಿಗಳನ್ನು ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರದ ಜಂಟಿ ನಿರ್ದೇಶಕರ ಕಚೇರಿಯಲ್ಲಿ ಪಡೆಯಬಹುದು ಅಥವಾ ದೂರವಾಣಿ ಸಂಖ್ಯೆಯ ಮೂಲಕ ನೊಂದಾಯಿಸಿಕೊಳ್ಳಬಹುದು.ಅರ್ಜಿ ಸಲ್ಲಿಸಲು ಫೆ.07 ಕೊನೆಯ ದಿನವಾಗಿದೆ.ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೈಗಾರಿಕಾ ಕೇಂದ್ರದ ಕಚೇರಿ ಕಟ್ಟಡದ ಸಿಡಾಕ್ನ ಜಂಟಿ ನಿರ್ದೇಶಕರ ಕಚೇರಿ ಅಥವಾ ಮೊ.7483538942/ 9449226221 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರದ ಜಂಟಿ ನಿರ್ದೇಶಕ ಸೋಮಶೇಖರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular